ಬೆಳಗಾವಿ | ಕಾರಿನಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಮಾಜಿ ಶಾಸಕರ ಪುತ್ರನ ಶವ ಪತ್ತೆ

Date:

ಧಾರವಾಡ ಸಮೀಪದ ರಾಮಾಪುರ ಗ್ರಾಮದ ಸಮೀಪ ದಟ್ಟ ಅರಣ್ಯ ಪ್ರದೇಶದಲ್ಲಿ ಮಂಗಳವಾರ ನಡೆದ ಭೀಕರ ಘಟನೆಯಲ್ಲಿ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಕ್ಷೇತ್ರದ ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಪುತ್ರ ರಾಜು ಬೋಳಶೆಟ್ಟಿ (53) ಸಂಶಯಾಸ್ಪದವಾಗಿ ತಮ್ಮದೇ ಕಾರಿನಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

- Advertisement -

ಮಧ್ಯಾಹ್ನ ಸುಮಾರು 2.30ರ ವೇಳೆ ರೈಲ್ವೆ ಹಳಿ ಪಕ್ಕದ ನಿರ್ಜನ ಪ್ರದೇಶದಲ್ಲಿ ಕಾರೊಂದು ಹೊತ್ತಿ ಉರಿಯುತ್ತಿರುವುದನ್ನು ಗಮನಿಸಿದ ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲಿಸಿದಾಗ ಕಾರಿನೊಳಗೆ ವ್ಯಕ್ತಿಯೊಬ್ಬರ ಮೃತದೇಹ ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವುದು ಪತ್ತೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಪ್ರಾಥಮಿಕ ತನಿಖೆಯಲ್ಲಿ ಮೃತ ವ್ಯಕ್ತಿ ಬೈಲಹೊಂಗಲ ತಾಲೂಕಿನ ಉಡಕೇರಿ ಗ್ರಾಮದ ನಿವಾಸಿ ರಾಜು ಬೋಳಶೆಟ್ಟಿ ಎಂಬುದು ಶಂಕಿಸಲಾಗಿದೆ. ದೇಹ ಸಂಪೂರ್ಣವಾಗಿ ಸುಟ್ಟು ಹೋಗಿರುವುದರಿಂದ ಗುರುತು ಪತ್ತೆ ಕಷ್ಟವಾಗಿದ್ದು, ಡಿಎನ್‌ಎ ಪರೀಕ್ಷೆಗೆ ಕಳುಹಿಸಲಾಗಿದೆ.

ರಾಜು ಬೋಳಶೆಟ್ಟಿ ರಾಜಕೀಯ ವ್ಯವಹಾರಗಳಿಂದ ದೂರವಿದ್ದು ಕೃಷಿ ಹಾಗೂ ಶಿಕ್ಷಣ ಸಂಸ್ಥೆಗಳ ನಿರ್ವಹಣೆಯಲ್ಲಿ ತೊಡಗಿಸಿಕೊಂಡಿದ್ದರು. ಸ್ಥಳೀಯವಾಗಿ ಮುಖಂಡನಾಗಿ ಗುರುತಿಸಿಕೊಂಡು ಹಳ್ಳಿಗಳಲ್ಲಿ ರಾಜಿ ಪಂಚಾಯಿತಿಗಳನ್ನು ನಡೆಸುತ್ತಿದ್ದರು. ಸೋಮವಾರ ಸಂಜೆ ಮನೆಯಿಂದ ಹೊರಟ ಅವರು ಮನೆಗೆ ಮರಳಿರಲಿಲ್ಲ ಎಂದು ಕುಟುಂಬದವರು ತಿಳಿಸಿದ್ದಾರೆ.

ಘಟನಾ ಸ್ಥಳವು ಅತ್ಯಂತ ನಿರ್ಜನ ಪ್ರದೇಶವಾಗಿರುವುದರಿಂದ ದುಷ್ಕರ್ಮಿಗಳು ಅಪಹರಿಸಿ ಕೊಲೆ ಮಾಡಿರುವ ಸಾಧ್ಯತೆ ಇದೆ. ಬಳಿಕ ಸಾಕ್ಷ್ಯನಾಶಪಡಿಸುವ ಉದ್ದೇಶದಿಂದ ಕಾರಿನಲ್ಲೇ ಶವವನ್ನು ಸುಟ್ಟಿರುವ ಶಂಕೆ ವ್ಯಕ್ತವಾಗಿದೆ.

ಈ ಸುದ್ದಿ ಓದಿದ್ದಿರಾ ? ಬೆಳಗಾವಿ | ಗ್ಯಾಸ್‌ ಕೊರತೆ, ಸಾಲದ ಒತ್ತಡ:  ಹೊಟೇಲ್ ಮಾಲೀಕ ಆತ್ಮಹತ್ಯೆ

ಜಿಲ್ಲಾ ಪೊಲೀಸ್‌ ಅಧೀಕ್ಷಕ ಗಂಜನ್ ಆರ್ಯ ಹಾಗೂ ಇತರ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿಧಿ ವಿಜ್ಞಾನ ತಂಡ ಮತ್ತು ಶ್ವಾನದಳದಿಂದ ಸಾಕ್ಷ್ಯ ಸಂಗ್ರಹಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ. ಆರೋಪಿಗಳ ಪತ್ತೆಗೆ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್: 500ಕ್ಕೆ ಹೆಚ್ಚಿಸಲು ಆಗ್ರಹ

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು...

ಬೆಳಗಾವಿ | ಗಣೇಶ ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗಿ ಯುವಕ ಸಾವು

ಬೆಳಗಾವಿ ತಾಲೂಕಿನ ಮಚ್ಚೆ ಗ್ರಾಮದ ಕೆರೆಯಲ್ಲಿ ಗಣೇಶ ಮೂರ್ತಿ ವಿಸರ್ಜನೆಗೆ ತೆರಳಿದ್ದ...

ಬೆಳಗಾವಿ | ಅಕ್ಟೋಬರ್ 4ರಂದು ಶಿವಾಜಿ ಕಾಗಣಿಕರ್ ಕುರಿತು ಮೂರು ಕೃತಿಗಳ ಲೋಕಾರ್ಪಣೆ

ಬೆಳಗಾವಿ ನಗರದ ಕ್ಯಾಂಪ್ ಪ್ರದೇಶದಲ್ಲಿರುವ ಸ್ಕೂಲ್ ಆಫ್‌ ಕಲ್ಟರ್‌ನ ಗೋಗಟೆ ಸಭಾಂಗಣದಲ್ಲಿ...

ಬೆಳಗಾವಿ | ವಿದ್ಯುತ್‌ ಸಂಪರ್ಕ ಕಡಿತ: ಹೆಸ್ಕಾಂ ಅಧಿಕಾರಿಗಳ ಮೇಲೆ ಚನ್ನರಾಜ ಹಟ್ಟಿಹೊಳಿ ಹಲ್ಲೆ ಆರೋಪ

ವಿದ್ಯುತ್‌ ಬಿಲ್ ಬಾಕಿ ಕಾರಣ ಸಂಪರ್ಕ ಕಡಿತಗೊಳಿಸಿದ್ದನ್ನು ಪ್ರಶ್ನಿಸಿ ಹೆಸ್ಕಾಂ ಅಧಿಕಾರಿಗಳ...