ಬೆಳಗಾವಿ | ರಿಯಲ್ ಎಸ್ಟೇಟ್ ಉದ್ಯಮಿ ಅಪಹರಣ ನಾಲ್ಕು ಜನ ಆರೋಪಿಗಳ ಬಂಧನ

Date:

ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ರಾಜಾಪೂರ ಗ್ರಾಮದ ರಿಯಲ್ ಎಸ್ಟೇಟ್ ಉದ್ಯಮಿ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾದ 24 ಗಂಟೆಯೊಳಗೆ ಅಪಹರಣಕ್ಕೊಳಗಾದ ವ್ಯಕ್ತಿಯನ್ನು ಪೊಲೀಸರು ರಕ್ಷಿಸಿದ್ದಾರೆ. ಅಪಹರಣಕಾರರನ್ನು ಪೋಲಿಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

- Advertisement -

ರಿಯಲ್ ಎಸ್ಟೆಟ್ ಉದ್ಯಮಿಯ ಅಪಹರಣ ಕುರಿತು ಮಾಧ್ಯಮಗಳಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭಭೀಮಾಶಂಕರ ಗುಳೇದ ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

ಮೂಡಲಗಿ ತಾಲ್ಲೂಕಿನ ರಾಜಾಪುರ ಗ್ರಾಮದ ಉದ್ಯಮಿ ಬಸವರಾಜ್​ ಅಂಬಿ ಅವರನ್ನು ಅಪಹರಣ ಮಾಡಲಾಗಿತ್ತು. ಅವರ ಪತ್ತೆಗಾಗಿ ಘಟಪ್ರಭಾ ಪೊಲೀಸರು ಹಾಗೂ ನಿಪ್ಪಾಣಿ ಪೊಲೀಸರನ್ನೊಳಗೊಂಡ ತಂಡವನ್ನು ರಚಿಸಲಾಗಿತ್ತು. ನಮ್ಮ ಪೊಲೀಸರ ತಂಡ ವ್ಯಕ್ತಿಯನ್ನು ರಕ್ಷಣೆ ‌ಮಾಡಿ ಆರೋಪಿಗಳಾದ ಆರೋಪಿಗಳಾದ ಈಶ್ವರ ರಾಮಗಾನಟ್ಟಿ, ಸಚಿನ್ ಕಾಂಬಳೆ, ರಮೇಶ್ ಕಾಂಬಳೆ, ರಾಘವೇಂದ್ರ ಮಾರಾಪುರನನ್ನು ಬಂಧಿಸಿದ್ದೇವೆ.

ಪ್ರಕರಣದಲ್ಲಿ ಇನ್ನೂ ಕೆಲವು ಜನ ಭಾಗಿಯಾಗಿದ್ದಾರೆ ಎನ್ನುವ ಸಂದೇಹವಿದ್ದು ಅವರನ್ನೂ ಸಹ ವಶಕ್ಕೆ ಪಡೆದು ಅವರ ಮೇಲೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.

ಅಪಹರಣಕ್ಕೊಳಗಾದ ಬಸವರಾಜ್​ ಅಂಬಿ ಬೇರೆ ಅಕ್ರಮ ಕೆಲಸದಲ್ಲಿ ಭಾಗಿಯಾಗಿದ್ದ. ಆತ ಅಕ್ರಮದಲ್ಲಿ ಭಾಗಿಯಾಗಿದ್ದು ಆರೋಪಿಗಳಿಗೆ ಗೊತ್ತಿತ್ತು. ಅವನನ್ನು ಕಿಡ್ನಾಪ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟರೆ ಆತ ಯಾರಿಗೂ ಹೇಳಲ್ಲ ಎಂಬ ನಂಬಿಕೆ ಆರೋಪಿಗಳಲ್ಲಿತ್ತು. ಹಾಗಾಗಿ, ಅಪಹರಣಕ್ಕೊಳಗಾದ ಬಸವರಾಜನ ಮಗನ ಬಳಿ 5 ಕೋಟಿ ರೂಪಾಯಿಗೆ ಬೇಡಿಕೆ ಇಟ್ಟಿದ್ದರು. ಆದರೆ ಬಸವರಾಜನ ಪತ್ನಿ ಪೊಲೀಸ್​ ಠಾಣೆಗೆ ಭೇಟಿ ನೀಡಿ ದೂರು ನೀಡಿದ್ದರು. ದೂರು ಸ್ವೀಕರಿಸಿದ 24 ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ” ಎಂದು ಡಾ. ಭೀಮಾಶಂಕರ ಗುಳೇದ್​ ಪ್ರಕರಣ ಕುರಿತು ಮಾಹಿತಿ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಟ್ರ್ಯಾಕ್ಟರ್‌ ಕಳ್ಳತನ ಪ್ರಕರಣದಲ್ಲಿ ಮೂವರು ಬಂಧನ

ಮನೆಯ ಮುಂದೆ ನಿಲ್ಲಿಸಿದ್ದ ಮಹೀಂದ್ರಾ ಅರ್ಜುನ್ ಟ್ರ್ಯಾಕ್ಟ‌ರ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ...

ಬೆಳಗಾವಿ | ಬೈಲಹೊಂಗಲದಲ್ಲಿ ಪತ್ನಿ ಕೊಲೆ: ಪತಿ ಬಂಧನ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಯನ್ನು ಕೊಲೆ ಮಾಡಿದ ಆರೋಪದ ಮೇಲೆ ಪತಿಯನ್ನು...

ಬೆಳಗಾವಿ | ಎಂಎಸ್‌ಪಿ ಬೆಲೆ ₹60 ಹೆಚ್ಚಿಸುವುದಾದರೆ ಮಾತ್ರ ದೆಹಲಿಗೆ: ಚೂನಪ್ಪ ಪೂಜೇರಿ

ಸಕ್ಕರೆಯ ಕನಿಷ್ಠ ಮಾರಾಟ ಬೆಲೆ (ಎಂಎಸ್‌ಪಿ) ಕೆ.ಜಿಗೆ ₹60ಕ್ಕೆ ಹೆಚ್ಚಿಸುವುದಾಗಿ ಕೇಂದ್ರ...

ಬೆಳಗಾವಿ | ಪತ್ನಿ ಮರಣದ ಸುದ್ದಿ ಕೇಳಿ ಪತಿಯೂ ಸಾವು

ಪತ್ನಿಯ ನಿಧನದ ಸುದ್ದಿ ಕೇಳಿ ತೀವ್ರ ಮನನೊಂದ ಪತಿಯೂ ಕೇವಲ ಒಂದೂವರೆ...