ಬೆಳಗಾವಿ | ನಕಲಿ ಅಂಕಪಟ್ಟಿಯಿಂದ ಸರ್ಕಾರಿ ಉದ್ಯೋಗ: ನಾಲ್ವರು ಮಾಜಿ ಗ್ರಾಮ ಲೆಕ್ಕಾಧಿಕಾರಿಗಳಿಗೆ 2 ವರ್ಷ ಜೈಲು

Date:

ನಕಲಿ ದ್ವಿತೀಯ ಪಿಯುಸಿ ಅಂಕಪಟ್ಟಿಗಳನ್ನು ಸಲ್ಲಿಸಿ ಗ್ರಾಮ ಆಡಳಿತಾಧಿಕಾರಿ (ವಿಎಒ) ಹುದ್ದೆ ಗಿಟ್ಟಿಸಿಕೊಂಡಿದ್ದ ನಾಲ್ವರಿಗೆ ಬೆಳಗಾವಿಯ ಎರಡನೇ ಜೆಎಂಎಫ್‌ಸಿ ನ್ಯಾಯಾಲಯ ತಲಾ ಎರಡು ವರ್ಷಗಳ ಸಾದಾ ಜೈಲು ಶಿಕ್ಷೆ ಹಾಗೂ ₹19 ಸಾವಿರ ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ.

- Advertisement -

ಶಿಕ್ಷೆಗೆ ಗುರಿಯಾದವರು ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಅನೆಹಳ್ಳಿ ಗ್ರಾಮದ ರಾಜು ವೆಂಕಟೇಶಪ್ಪ ಟಿ., ಕುನ್ನಿಬಂಡಿ ಗ್ರಾಮದ ಮೋಹನ್‌ಕುಮಾರ್ ಚಂದ್ರಪ್ಪ, ಮದ್ದೇರಿ ಗ್ರಾಮದ ಮಂಜುನಾಥ ಬೈಚಪ್ಪ ಹಾಗೂ ಅನೆಹಳ್ಳಿ ಗ್ರಾಮದ ಬಾಲಕೃಷ್ಣ ವೆಂಕಟಪ್ಪ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಪ್ರಕರಣದ ವಿವರದಂತೆ, 2012ರ ಸೆಪ್ಟೆಂಬರ್ 6ರಂದು ಕಂದಾಯ ಇಲಾಖೆಯ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ನೇಮಕಾತಿಗೆ ಬೆಳಗಾವಿ ಜಿಲ್ಲಾಡಳಿತ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿತ್ತು. ಈ ವೇಳೆ ಆರೋಪಿಗಳು ಬೆಂಗಳೂರಿನ ಅಪರಿಚಿತ ವ್ಯಕ್ತಿಯೊಬ್ಬರಿಂದ ನಕಲಿ ದ್ವಿತೀಯ ಪಿಯುಸಿ ಅಂಕಪಟ್ಟಿಗಳನ್ನು ಪಡೆದು, ಅವುಗಳಲ್ಲಿ ಹೆಚ್ಚಿನ ಅಂಕಗಳನ್ನು ತೋರಿಸಿ ಮೆರಿಟ್ ಪಟ್ಟಿಯಲ್ಲಿ ಸ್ಥಾನ ಪಡೆದು ಗ್ರಾಮ ಆಡಳಿತಾಧಿಕಾರಿಗಳಾಗಿ ನೇಮಕಗೊಂಡಿದ್ದರು.

ನೇಮಕಾತಿಯ ನಂತರ ದಾಖಲೆಗಳ ಪರಿಶೀಲನೆ ವೇಳೆ ಸಲ್ಲಿಸಿದ್ದ ಅಂಕಪಟ್ಟಿಗಳು ನಕಲಿಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಅಂದಿನ ಜಿಲ್ಲಾಧಿಕಾರಿ ಎನ್‌. ಜಯರಾಮ್ ಅವರು ಬೆಳಗಾವಿಯ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ದೂರಿನ ಮೇರೆಗೆ ತನಿಖೆ ಕೈಗೊಂಡ ಪೊಲೀಸರು, ಆರೋಪಿಗಳು ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ಬಳಸಿ ಸರ್ಕಾರಿ ಉದ್ಯೋಗ ಪಡೆದಿರುವುದನ್ನು ದೃಢಪಡಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದರು. ಪ್ರಕರಣದ ವಿಚಾರಣೆ ನಡೆಸಿದ ಎರಡನೇ ಜೆಎಂಎಫ್‌ಸಿ ನ್ಯಾಯಾಲಯ, ಅಭಿಯೋಜಕರು ಮಂಡಿಸಿದ ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿ ನಾಲ್ವರನ್ನು ದೋಷಿಗಳೆಂದು ಘೋಷಿಸಿತು.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮಲಪ್ರಭಾ ಜಲಾಶಯದಿಂದ ಸವದತ್ತಿ ಕೆರೆಗಳಿಗೆ ನೀರು ಬಿಡಿ: ಶಾಸಕ ವಿಶ್ವಾಸ ವೈದ್ಯ

ಮಲಪ್ರಭಾ ಅಣೆಕಟ್ಟಿನಿಂದ ಬೆಳಗಾವಿ ಜಿಲ್ಲೆಯ ಸವದತ್ತಿ ಭಾಗದ ಕೆರೆಗಳನ್ನು ತುಂಬಿಸಲು ಅಗತ್ಯ...

ಬೆಳಗಾವಿ | ಸೋಯಾಬಿನ್ ಬೆಳೆ ಸಮೀಕ್ಷೆ ನಡೆಸಿ: ಶಾಸಕ ಮಹಾಂತೇಶ ಕೌಜಲಗಿ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸೋಯಾಬಿನ್ ಬೆಳೆಯಲಾಗಿದ್ದು, ಮಳೆ...

ಬೆಳಗಾವಿ | ಜೂನ್‌ವರೆಗೆ ಕುಡಿಯುವ ನೀರಿಗೆ ಕೊರತೆಯಾಗದಂತೆ ಕ್ರಮ: ಸಚಿವ ಸತೀಶ ಜಾರಕಿಹೊಳಿ

ಮುಂದಿನ ಜೂನ್‌ವರೆಗೆ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ...