ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಹಾರಾಷ್ಟ್ರದ ಸಾತಾರಾ ಸಮೀಪ ಇಂದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಳಗಾವಿ ಜಿಲ್ಲೆಯ ನಾಲ್ವರು ಮೃತಪಟ್ಟಿರುವ ದುರ್ಘಟನೆ ವರದಿಯಾಗಿದೆ.
- Advertisement -
ಮೃತರಲ್ಲಿ ಸಂಕೇಶ್ವರದ ಖ್ಯಾತ ವೈದ್ಯರಾದ ಡಾ. ಸಚಿನ್ ಶಂಕರಗೌಡ ಪಾಟೀಲ್ ಸೇರಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಅಪಘಾತದ ತೀವ್ರತೆಯಿಂದ ವಾಹನ ಸಂಪೂರ್ಣವಾಗಿ ಜಖಂಗೊಂಡಿದ್ದು, ಸ್ಥಳದಲ್ಲೇ ನಾಲ್ವರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಇತರ ಮೃತರ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದ್ದು, ಗಾಯಾಳುಗಳಿರುವ ಬಗ್ಗೆ ಸ್ಪಷ್ಟ ಮಾಹಿತಿ ದೊರಕಿಲ್ಲ. ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.



