ಬೆಳಗಾವಿ | ಇನ್‌ಸ್ಟಾಗ್ರಾಂ ಪ್ರೇಮದ ಹೆಸರಿನಲ್ಲಿ ವಂಚನೆ: ಖಾಸಗಿ ಫೋಟೋಗಳಿಂದ ಬ್ಲ್ಯಾಕ್‌ಮೇಲ್, ಚಿನ್ನ-ಹಣ ದೋಚಿದ ಆರೋಪ

Date:

ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾದ ಯುವಕನೊಬ್ಬ ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನು ವಂಚಿಸಿರುವ ಘಟನೆ ಬೆಳಗಾವಿಯಲ್ಲಿ ಬೆಳಕಿಗೆ ಬಂದಿದೆ. ಬಳಿಕ ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನು ಬಳಸಿಕೊಂಡು ಬ್ಲ್ಯಾಕ್‌ಮೇಲ್ ಮಾಡಿ ಸುಮಾರು 1500 ಗ್ರಾಂ ಚಿನ್ನ ಹಾಗೂ ₹19 ಲಕ್ಷ ಹಣ ಪಡೆದಿರುವ ಆರೋಪ ಕೇಳಿಬಂದಿದೆ.

- Advertisement -

ಮಾಧವ ಕಾಲೋನಿ ನಿವಾಸಿ ಈಶ್ವರಸಿಂಗ್‌ ಪ್ರೇಮಸಿಂಗ್ ಬಡಗೂಜ‌ರ್ ವಿರುದ್ಧ ಯುವತಿ ಗಂಭೀರ ಆರೋಪ ಮಾಡಿದ್ದಾರೆ. ಇನ್‌ಸ್ಟಾಗ್ರಾಂನಲ್ಲಿ ಪರಿಚಯವಾದ ಇಬ್ಬರ ಸ್ನೇಹ ಪ್ರೀತಿಗೆ ತಿರುಗಿ, ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ಬಳಿಕ ಮೋಸ ಮಾಡಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಇದಲ್ಲದೆ, ಮದುವೆಗೆ ಮುಂದಾದಾಗ ಯುವಕನ ತಾಯಿ ₹3 ಕೋಟಿ ಹಣ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ‘ಗೋಲ್ಡ್‌ಸ್ಮಿತ್ ಅಡಮಾನ’ ಹೆಸರಿನಲ್ಲಿ ಹಣ ವಸೂಲಿ ಮಾಡಿರುವುದಾಗಿ ಹಾಗೂ ಬೇರೆ ಹುಡುಗಿಯರ ಫೋಟೋಗಳನ್ನು ಕಳುಹಿಸಿ ಮಾನಸಿಕ ಕಿರುಕುಳ ನೀಡಿದ್ದಾನೆ ಎಂದು ಯುವತಿ ಆರೋಪಿಸಿದ್ದಾರೆ.

ಪೊಲೀಸರ ವಿರುದ್ಧವೂ ಆರೋಪ:

ದೂರು ನೀಡಲು ಹೋದಾಗ ಶಹಾಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸದೇ ರಾಜಿ ಮಾಡಿಕೊಳ್ಳುವಂತೆ ಒತ್ತಾಯಿಸುತ್ತಿದ್ದಾರೆ ಎಂದು ಯುವತಿ ಆರೋಪಿಸಿದ್ದಾರೆ. ಆರೋಪಿಯೊಂದಿಗೆ ಪೊಲೀಸರು ಕೈಜೋಡಿಸಿದ್ದಾರೆ ಎಂಬ ಅನುಮಾನವನ್ನೂ ವ್ಯಕ್ತಪಡಿಸಿದ್ದಾರೆ.

ನ್ಯಾಯಕ್ಕಾಗಿ ಕಮೀಷನ‌ರ್ ಕಚೇರಿಗೆ ತೆರಳಿ ಯುವತಿ ಕಣ್ಣೀರು ಹಾಕಿ ಮನವಿ ಸಲ್ಲಿಸಿದ್ದು, ಕಮೀಷನ‌ರ್ ಸೂಚನೆ ನೀಡಿದರೂ ಪ್ರಕರಣ ದಾಖಲಿಸದ ಶಹಾಪುರ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಸಾಮಾಜಿಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಂಶೋಧನೆ ದಿಕ್ಕೂಚಿಯಾಗಲಿ: ಉಮೇಶ ಬಾಳಿ

ಬಡತನ, ನಿರುದ್ಯೋಗ, ಲಿಂಗ ತಾರತಮ್ಯ, ಸಾಮಾಜಿಕ ಆರ್ಥಿಕ ಅಸಮಾನತೆ ಸೇರಿದಂತೆ ಭಾರತದಲ್ಲಿನ...

ಬೆಳಗಾವಿ | ಚರಕ ಕೇವಲ ನೂಲು ತೆಗೆಯುವ ಸಾಧನವಾಗಿರಲಿಲ್ಲ ಸ್ವಾವಲಂಬನೆಯ ಸಂಕೇತವಾಗಿತ್ತು

ಜಗತ್ತು ಗುರಿಯಿಲ್ಲದ ನಾಗಾಲೋಟದಲ್ಲಿ ಓಡುತ್ತಿದೆ. ನಿನ್ನೆ ಹೊಸತಾಗಿದ್ದ ತಂತ್ರಜ್ಞಾನ ಇಂದು ಹಳೆಯದಾಗಿ...

ಬೆಳಗಾವಿ | 198 ಮತದಾರರ ಹೆಸರು ಅಳಿಸಲು ಅರ್ಜಿ: ಬಿಜೆಪಿ ಮುಖಂಡ ಸೇರಿ 25 ಮಂದಿ ವಿರುದ್ಧ ಎಫ್‌ಐಆರ್‌

ಬೆಳಗಾವಿ ವೀರಭದ್ರನಗರದಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ 198 ಮತದಾರರ ಹೆಸರುಗಳನ್ನು ಮತದಾರರ...