ಬೆಳಗಾವಿ ಜಿಲ್ಲೆಯ ಸವದತ್ತಿ ನಗರದ ಧಾರವಾಡ ರಸ್ತೆಯಲ್ಲಿ ಅಬಕಾರಿ ಅಧಿಕಾರಿಗಳು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ.
ತಾಲೂಕಿನ ಹೀರೂರ ಗ್ರಾಮದ ನಿವಾಸಿ ಸುಭಾಷ್ ಪಕೀರಪ್ಪ ಕುರಿ ಬಂಧಿತ ಆರೋಪಿಯಾಗಿದ್ದಾನೆ. ಗುರುವಾರ ರಾತ್ರಿ ಸುಮಾರು 8.45ರ ವೇಳೆಗೆ ಸವದತ್ತಿಯಿಂದ ಧಾರವಾಡಕ್ಕೆ ತೆರಳುವ ರಸ್ತೆಯಲ್ಲಿ ಗಾಂಜಾವನ್ನು ಅಕ್ರಮ ಮಾರಾಟದ ಉದ್ದೇಶದಿಂದ ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಅಬಕಾರಿ ಇಲಾಖೆಗೆ ದೊರಕಿತ್ತು.
ಮಾಹಿತಿಯ ಆಧಾರದ ಮೇಲೆ ಅಬಕಾರಿ ನಿರೀಕ್ಷಕ ದಾವಲಸಾಬ ಶಿಂದೋಗಿ ನೇತೃತ್ವದಲ್ಲಿ ಸಿಬ್ಬಂದಿಗಳಾದ ಶಿವಪ್ರಸಾದ್ ಪಾಟೀಲ್, ರಾಮಚಂದ್ರ ಹಾಗೂ ರವಿ ಕಲ್ಮನ್ನವರ್ ಅವರನ್ನೊಳಗೊಂಡ ತಂಡ ಸ್ಥಳದ ಮೇಲೆ ದಾಳಿ ನಡೆಸಿತು. ದಾಳಿಯ ವೇಳೆ ಗಾಂಜಾ ಸಮೇತ ಆರೋಪಿ ಸಿಕ್ಕಿಬಿದ್ದಿದ್ದು, ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದರು.
ಬಂಧಿತ ಆರೋಪಿಯ ವಿರುದ್ಧ ಎನ್‌ಡಿಪಿಎಸ್ ಕಾಯ್ದೆ-1985ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಅಬಕಾರಿ ಇಲಾಖೆ




