ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲ್ಲೂಕಿನ ನಾಗನೂರ ಗ್ರಾಮದಲ್ಲಿ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರಿ ಆಸ್ತಿ ಹಾನಿ ಸಂಭವಿಸಿದ ಘಟನೆ ನಡೆದಿದೆ.
ನಿಂಗಪ್ಪ ಕಬಾಡದ ಅವರ ಮನೆ ಅಡುಗೆಮನೆಯಲ್ಲಿ ಇದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದು, ಮನೆಯ ಆವರಣ, ಬಾಗಿಲು, ಮರದ ಮೇಲ್ಮಾಳಿಗೆ ಸೇರಿದಂತೆ ಹಲವು ವಸ್ತುಗಳು ಛಿದ್ರ ಛಿದ್ರವಾಗಿದೆ. ಸ್ಫೋಟದ ಹೊತ್ತಿಗೆ ಮನೆಯಲ್ಲಿಯಾರೂ ಇಲ್ಲದ ಕಾರಣದಿಂದು ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಸ್ಫೋಟದ ತೀವ್ರತೆಗೆ ಮನೆಗೆ ಗಂಭೀರ ಹಾನಿ ಸಂಭವಿಸಿದ್ದು, ಅದೃಷ್ಟವಶಾತ್ ದೊಡ್ಡ ಅನಾಹುತವೊಂದು ತಪ್ಪಿದೆ.