ಬೆಳಗಾವಿ : ಡೊಂಬಾರಿ ಸಮಾಜದ ಶ್ರೇಯೋಭಿವೃದ್ಧಿಗೆ ಸರ್ಕಾರದ ಸ್ಪಂದನೆ: ಲಕ್ಷ್ಮೀ ಹೆಬ್ಬಾಳಕರ

Date:

ಬೆಳಗಾವಿ ನಗರದ ಜ್ಯೋತಿ ನಗರದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಜನರ ಬೇಡಿಕೆಯಂತೆ ಡಿಜಿಟಲ್ ಲೈಬ್ರರಿ, ಸಮುದಾಯ ಭವನ, ಅಂಗನವಾಡಿ ಕೇಂದ್ರ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಹೇಳಿದರು.

- Advertisement -
1001154722

ಗಣೇಶಪುರದ ಜ್ಯೋತಿ ನಗರದ ಹಿಂದೂ ಡೊಂಬಾರಿ ಸಮಾಜದ ಶ್ರೇಯೋಭಿವೃದ್ಧಿಗಾಗಿ ತಮ್ಮ ಕೊಡುಗೆಯನ್ನು ಸ್ಮರಿಸಿ ಸನ್ಮಾನಿಸಲು ಬುಧವಾರ ಗೃಹಕಚೇರಿಗೆ ಆಗಮಿಸಿದ್ದ ಮಹಿಳೆಯರನ್ನು ಉದ್ದೇಶಿಸಿ ಮಾತನಾಡಿದ ಅವರು, ಜ್ಯೋತಿ ನಗರದ ನಿವಾಸಿಗಳಿಗೆ ಪುನರ್ವಸತಿ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...


ಜನರು ಒಪ್ಪಿಗೆಯಾದರೆ ಅಲ್ಲಿಯೇ ಅಪಾರ್ಟ್‌ಮೆಂಟ್‌ಗಳನ್ನು ನಿರ್ಮಿಸಿ ಎಲ್ಲ ನಿವಾಸಿಗಳಿಗೆ ವಸತಿ ಸೌಲಭ್ಯ ಒದಗಿಸುವ ಬೃಹತ್ ಯೋಜನೆ ರೂಪಿಸಲಾಗುವುದು. ಅಪಾರ್ಟ್‌ಮೆಂಟ್ ನಿರ್ಮಾಣಕ್ಕೆ ಸುಮಾರು ಮೂರು ವರ್ಷಗಳ ಅವಧಿ ಬೇಕಾಗುತ್ತದೆ. ಆ ಅವಧಿಯಲ್ಲಿ ನಿವಾಸಿಗಳು ಸ್ಥಳ ಬಿಟ್ಟುಕೊಟ್ಟು ಸಹಕರಿಸಬೇಕು. ಸಂಪೂರ್ಣ ಸ್ಲಮ್ ಪ್ರದೇಶವನ್ನು ನಿರ್ಮೂಲನೆ ಮಾಡಿ ಆ ಭಾಗವನ್ನು ಅತ್ಯಂತ ಅಭಿವೃದ್ಧಿ ಹೊಂದುವ ಪ್ರದೇಶವನ್ನಾಗಿ ಮಾಡಲಾಗುವುದು. ಈ ಬಗ್ಗೆ ನೀವೆಲ್ಲ ಯೋಚಿಸಿ ನಿರ್ಧಾರಕ್ಕೆ ಬರಬೇಕು. ನಿಮ್ಮೊಂದಿಗೆ ನಾನು ಇದ್ದೇನೆ ಎಂದು ಸಚಿವೆ ಭರವಸೆ ನೀಡಿದರು.

ಡೊಂಬಾರಿ ಸಮಾಜದವರು ನೀಡಿದ ಆಶೀರ್ವಾದ ಮತ್ತು ಬೆಂಬಲ ನನಗೆ ಜನಸೇವೆ ಮಾಡಲು ಮತ್ತಷ್ಟು ಶಕ್ತಿ ತುಂಬಿದೆ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯಗಳು ತಲುಪುತ್ತಿರುವುದಕ್ಕೆ ಈ ಸ್ಪಂದನೆಯೇ ಸಾಕ್ಷಿ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮುಖಂಡರಾದ ಮಹೇಶ ಕೋಲಕಾರ್, ಮಲ್ಲೇಶ್ ಚೌಗುಲೆ, ಬಾಳು ದೇಸೂರಕರ, ಸಾಗರ ಲಾಖೆ, ಭೋಸಲೆ, ಶಂಕರ ಲಾಖೆ, ಬಾಳು ಲಾಖೆ, ಪಪ್ಪು ಭೋಸಲೆ, ಸಂದೀಪ ಡವಳೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಆರೋಪ: ಚನ್ನರಾಜ ಹಟ್ಟಿಹೊಳಿ ಸ್ಪಷ್ಟನೆ

ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪಕ್ಕೆ ವಿಧಾನ ಪರಿಷತ್...

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್: 500ಕ್ಕೆ ಹೆಚ್ಚಿಸಲು ಆಗ್ರಹ

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು...