ಬೆಳಗಾವಿ | ₹15 ಸಾವಿರ ಲಂಚ ಸ್ವೀಕರಿಸುತ್ತಿದ್ದಾಗ ಗ್ರಾಪಂ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

Date:

ಮನೆಯ ಉತಾರದಲ್ಲಿ ಮನೆ, ಅಂಗಡಿ ಹಾಗೂ ಪಕ್ಕದಲ್ಲಿರುವ ಖಾಲಿ ಜಾಗದ ಕ್ಷೇತ್ರವನ್ನು ಪಂಚಾಯತಿ ಆಸ್ತಿ ರಜಿಸ್ಟರ್‌ನಲ್ಲಿ ನಮೂದಿಸಿ ಚಾಲ್ತಿ ಉತಾರ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ನರಸಾಪೂರ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮಹಾಂತೇಶ ಬಳ್ಳಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

- Advertisement -

ಆರೋಪಿತ ಅಧಿಕಾರಿ ಒಟ್ಟು ₹22 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಮೊದಲ ಕಂತಾಗಿ ₹15 ಸಾವಿರ ಸ್ವೀಕರಿಸುವ ವೇಳೆ ಕರ್ನಾಟಕ ಲೋಕಾಯುಕ್ತ ಪೊಲೀಸರು ಟ್ರ್ಯಾಪ್ ನಡೆಸಿ ಬಂಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಚಿಲಮೂರ ಗ್ರಾಮದ ಯಂಕಪ್ಪ ಯಲ್ಲಪ್ಪ ಮರಡಿ ಅವರು ನೀಡಿದ ದೂರಿನ ಮೇರೆಗೆ ಕಾರ್ಯಾಚರಣೆ ಕೈಗೊಳ್ಳಲಾಯಿತು. ಫಿರ್ಯಾದಿದಾರರ ಪತ್ನಿಯ ಹೆಸರಿನಲ್ಲಿರುವ ಆಸ್ತಿ ನಂ. 420/2ರ ಮನೆಯ ಉತಾರೆಯಲ್ಲಿ ಮನೆಯ ಸುತ್ತಲಿನ ಖಾಲಿ ಜಾಗದ ಕ್ಷೇತ್ರ ಸೇರಿಸುವುದು ಹಾಗೂ ಮನೆ, ಅಂಗಡಿ ಮತ್ತು ಪಕ್ಕದಲ್ಲಿರುವ ಖಾಲಿ ಜಾಗವನ್ನು ಪಂಚಾಯತಿ ಆಸ್ತಿ ರಜಿಸ್ಟರ್‌ನಲ್ಲಿ ನಮೂದಿಸಿ ಚಾಲ್ತಿ ಉತಾರ ನೀಡಲು ಆರೋಪಿತ ಅಧಿಕಾರಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಈ ಕುರಿತು ಕರ್ನಾಟಕ ಲೋಕಾಯುಕ್ತ ಪೊಲೀಸ್‌ ಠಾಣೆ ಬೆಳಗಾವಿಯಲ್ಲಿ ಪ್ರಕರಣ ಸಂಖ್ಯೆ 05/2026ರಡಿ ಲಂಚ ಪ್ರತಿಬಂಧಕ ಕಾಯ್ದೆ 1988 (ತಿದ್ದುಪಡಿ-2018) ಕಲಂ 7(ಎ) ಅಡಿಯಲ್ಲಿ ಮೇ 18ರಂದು ಪ್ರಕರಣ ದಾಖಲಾಗಿತ್ತು.

ಕರ್ನಾಟಕ ಲೋಕಾಯುಕ್ತ ಬೆಳಗಾವಿ ಪೊಲೀಸ್‌ ಅಧೀಕ್ಷಕ ಪ್ರಸನ್ನ ದೇಸಾಯಿ, ಐಪಿಎಸ್ ಮಾರ್ಗದರ್ಶನದಲ್ಲಿ ಪೊಲೀಸ್‌ ಉಪಾಧೀಕ್ಷಕ ಭರತ್ ಎಸ್‌.ಆ‌ರ್., ಪೊಲೀಸ್‌ ಇನ್ಸಪೆಕ್ಟ‌ರ್ ಸಂಗಮನಾಥ ಹೊಸಮನಿ ಹಾಗೂ ಸಿಬ್ಬಂದಿಗಳ ತಂಡ ದಾಳಿ ನಡೆಸಿತು.

ಲಂಚದ ಹಣ ಪಡೆಯುವ ವೇಳೆ ಆರೋಪಿಯನ್ನು ಹಣ ಸಮೇತ ವಶಕ್ಕೆ ಪಡೆಯಲಾಗಿದ್ದು, ಪ್ರಕರಣ ಸಂಬಂಧ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | 198 ಮತದಾರರ ಹೆಸರು ಅಳಿಸಲು ಅರ್ಜಿ: ಬಿಜೆಪಿ ಮುಖಂಡ ಸೇರಿ 25 ಮಂದಿ ವಿರುದ್ಧ ಎಫ್‌ಐಆರ್‌

ಬೆಳಗಾವಿ ವೀರಭದ್ರನಗರದಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ 198 ಮತದಾರರ ಹೆಸರುಗಳನ್ನು ಮತದಾರರ...

ಬೆಳಗಾವಿ | ಹೆರಾಯಿನ್ ಮಾರಾಟ ಆರೋಪ: ಓರ್ವನ ಬಂಧನ

ಬೆಳಗಾವಿ ನಗರದಲ್ಲಿ ಅಕ್ರಮವಾಗಿ ಹೆರಾಯಿನ್ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಸಿಸಿಬಿ...

ಬೆಳಗಾವಿಯಲ್ಲಿ 15 ಸಾವಿರ ಮತದಾರರ ಹೆಸರು ಅಳಿಸುವ ಸಂಚು: ರಾಹುಲ್ ಗಾಂಧಿ

ಬೆಳಗಾವಿ ಜಿಲ್ಲೆಯಲ್ಲಿ ಸುಮಾರು 15 ಸಾವಿರ ಮತದಾರರ ಹೆಸರುಗಳನ್ನು ಒಂದೇ ಬಾರಿಗೆ...