ಬೆಳಗಾವಿ | ಪಿಕೆಪಿಎಸ್‌ಗಳಿಗೆ ಸಾಲ ಮಂಜೂರು ಮಾಡಿ: ರೈತರ ಆಗ್ರಹ

Date:

ಬೆಳಗಾವಿ ಡಿಸಿಸಿ ಬ್ಯಾಂಕ್‌ನಿಂದ ನಿಪ್ಪಾಣಿ ತಾಲೂಕಿನ ಪ್ರಾಥಮಿಕ ಕೃಷಿಪತ್ತಿನ ಸಂಘಗಳಿಗೆ (ಪಿಕೆಪಿಎಸ್) ಸಾಲ ಮಂಜೂರು ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ರೈತರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

- Advertisement -

ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಹೈನುಗಾರಿಕೆ ಹಾಗೂ ಪಶುಸಂಗೋಪನೆ ಸಾಲ ನೀಡಲು ನಿಪ್ಪಾಣಿ ತಾಲೂಕಿನ ಕೆಲವು ಪಿಕೆಪಿಎಸ್‌ಗಳಿಗೆ ಡಿಸಿಸಿ ಬ್ಯಾಂಕ್‌ನಿಂದ ಸಾಲ ಮಂಜೂರು ಮಾಡಲು ಅಧಿಕಾರಿಗಳು ಹಿಂದೇಟು ಹಾಕುತ್ತಿದ್ದಾರೆ. ಈ ವಿಚಾರದಲ್ಲಿ ರಾಜಕೀಯ ಮಾಡದೆ, ರೈತರ ಹಿತದೃಷ್ಟಿಯಿಂದ ಕೂಡಲೇ ಸಾಲ ಮಂಜೂರು ಮಾಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಮುಖಂಡ ಶಶಿಕಾಂತ ಗುರೂಜಿ ಮಾತನಾಡಿ, “ಡಿಸಿಸಿ ಬ್ಯಾಂಕ್ ರೈತರ ಬ್ಯಾಂಕ್. ರಾಜಕೀಯ ಕಾರಣಕ್ಕಾಗಿ ಕೆಲವು ಚುನಾಯಿತ ಪ್ರತಿನಿಧಿಗಳು ಹಾಗೂ ಅಧಿಕಾರಿಗಳು ನಿಪ್ಪಾಣಿ ತಾಲೂಕಿನ ಪಿಕೆಪಿಎಸ್‌ಗಳಿಗೆ ಸಾಲ ಮಂಜೂರು ಮಾಡುತ್ತಿಲ್ಲ. ತಕ್ಷಣ ಸಾಲ ಮಂಜೂರು ಮಾಡದಿದ್ದರೆ ಒಂದು ಲಕ್ಷ ರೈತರ ಸಮ್ಮುಖದಲ್ಲಿ ಡಿಸಿಸಿ ಬ್ಯಾಂಕ್‌ಗೆ ಬೀಗ ಹಾಕಿ ಪ್ರತಿಭಟನೆ ನಡೆಸಲಾಗುವುದು” ಎಂದು ಎಚ್ಚರಿಸಿದರು.

ಮುಖಂಡ ಚೂನಪ್ಪ ಪೂಜೇರಿ ಮಾತನಾಡಿ, ಡಿಸಿಸಿ ಬ್ಯಾಂಕ್‌ನಲ್ಲಿ ರಾಜಕೀಯ ನಡೆಯುತ್ತಿದೆ. ಹಲವು ವರ್ಷಗಳಿಂದ ರೈತರಿಗಾಗಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತಿರುವ ಪಿಕೆಪಿಎಸ್‌ಗಳಿಗೆ ಸಾಲ ನೀಡದೆ ಅನ್ಯಾಯ ಮಾಡಲಾಗುತ್ತಿದೆ ಎಂದು ದೂರಿದರು.

ಪ್ರತಿಭಟನೆಯಲ್ಲಿ ಶಿವಾನಂದ ಮುಗಳಿ, ಪ್ರೇಮ ಚೌಗಲಾ, ಕಿರಣ ಸನದಿ, ಪ್ರಕಾಶ ನಾಯಕ, ಸಂತೋಷ ಕರಿಗಾರ, ಅಸ್ಮಾ ಜುಟದಾರ ಸೇರಿದಂತೆ ರೈತ ಮುಖಂಡರು ಹಾಗೂ ರೈತರು ಪಾಲ್ಗೊಂಡಿದ್ದರು.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಆರೋಪ: ಚನ್ನರಾಜ ಹಟ್ಟಿಹೊಳಿ ಸ್ಪಷ್ಟನೆ

ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪಕ್ಕೆ ವಿಧಾನ ಪರಿಷತ್...

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್: 500ಕ್ಕೆ ಹೆಚ್ಚಿಸಲು ಆಗ್ರಹ

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು...