ಬೆಳಗಾವಿ | ಗಂಡನ ಮನೆಯವರ ಕಿರುಕುಳ: 3 ವರ್ಷದ ಮಗನೊಂದಿಗೆ ತಾಯಿ ಆತ್ಮಹತ್ಯೆ

Date:

ಗಂಡನ ಮನೆಯವರಿಂದ ನಿರಂತರ ಕಿರುಕುಳಕ್ಕೆ ಒಳಗಾಗಿದ್ದರೆಂಬ ಆರೋಪದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ತಮ್ಮ ಮೂರು ವರ್ಷದ ಮಗನೊಂದಿಗೆ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

- Advertisement -

ನಗರದ ಪೀರನವಾಡಿ ಪಾಟೀಲ್ ಗಲ್ಲಿ ಬಡಾವಣೆಯ ನಿವಾಸಿ ಪ್ರೇಮಾ (28) ಹಾಗೂ ಅವರ ಪುತ್ರ ಭುವನ್ (3) ಮೃತರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಗಂಡನ ಮನೆಯವರು ಮಾಡಿದ್ದ ₹10 ಲಕ್ಷ ಸಾಲವನ್ನು ತೀರಿಸುವಂತೆ ಪ್ರೇಮಾ ಅವರ ಮೇಲೆ ಒತ್ತಡ ಹೇರಿ, ದಿನನಿತ್ಯ ಮಾನಸಿಕ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಇದೇ ವಿಚಾರವಾಗಿ ಮನೆಯಲ್ಲಿ ಆಗಾಗ ಜಗಳ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಮನನೊಂದ ಪ್ರೇಮಾ ಈ ಕಠಿಣ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ತಾವು ಆತ್ಮಹತ್ಯೆ ಮಾಡಿಕೊಂಡ ಬಳಿಕ ತಮ್ಮ ಮಗನನ್ನು ಸರಿಯಾಗಿ ನೋಡಿಕೊಳ್ಳುವುದಿಲ್ಲ ಎಂಬ ಆತಂಕದಿಂದ, ಪ್ರೇಮಾ ಡೆತ್‌ನೋಟ್ ಬರೆದು ಮಗನೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸುದ್ದಿ ತಿಳಿದು ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಸ್ಥಳದಲ್ಲಿ ದೊರೆತ ಡೆತ್‌ನೋಟ್ ಅನ್ನು ವಶಕ್ಕೆ ಪಡೆದಿದ್ದಾರೆ. ಡೆತ್‌ನೋಟ್‌ನಲ್ಲಿ ಗಂಡ, ಅತ್ತೆ, ಮೈದುನ ಸೇರಿದಂತೆ ಆರು ಮಂದಿಯ ಹೆಸರನ್ನು ಉಲ್ಲೇಖಿಸಲಾಗಿದೆ ಎನ್ನಲಾಗಿದೆ.

ಪ್ರೇಮಾ ಅವರ ಕುಟುಂಬದವರು ನೀಡಿದ ದೂರಿನ ಮೇರೆಗೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹಗಳನ್ನು ಬಿಮ್ಸ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಪ್ರಕರಣದ ಕುರಿತು ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.

ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಕರ್ನಾಟಕ ರಾಜ್ಯೋತ್ಸವ: ಕರಾಳ ದಿನಾಚರಣೆಗೆ ಅವಕಾಶವಿಲ್ಲ

ಕರ್ನಾಟಕ ರಾಜ್ಯೋತ್ಸವದಂದು ಬೆಳಗಾವಿ ಯಲ್ಲಿ ಕರಾಳ ದಿನಾಚರಣೆಗೆ ಯಾವುದೇ ಕಾರಣಕ್ಕೂ ಅನುಮತಿ...

ಬೆಳಗಾವಿ ಜಿಪಂ ಮೀಸಲಾತಿ ಪ್ರಕಟ: ರಾಜಕೀಯ ಚಟುವಟಿಕೆ ಜೋರು

ಬೆಳಗಾವಿ ಜಿಲ್ಲಾ ಪಂಚಾಯಿತಿಯ 90 ಸ್ಥಾನಗಳಿಗೆ ಚುನಾವಣೆ ಸಂಬಂಧ ವರ್ಗ ಹಾಗೂ...

ಬಿಡಿಗಾಸು ಬರ ಪರಿಹಾರ! ಹಿಂಗಾರು ಬಿತ್ತನೆಗೆ ಸಾಲದ ಮೊರೆ ಹೋದ ಬೆಳಗಾವಿ ರೈತರು

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟ ಅನುಭವಿಸಿರುವ ಬೆಳಗಾವಿಯ ರೈತರು ಇದೀಗ...

ಬೆಳಗಾವಿ | ಅಗ್ನಿ ಅವಘಡ: ನಾಲ್ಕು ಮೇವಿನ ಬಣವೆ ಭಸ್ಮ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ...