ಬೆಳಗಾವಿ : ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಹಠಯೋಗಿ ಸ್ವಾಮಿಗೆ 35 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ

Date:

ಹಠಯೋಗಿ ಎಂದು ಹೇಳಿಕೊಂಡಿದ್ದ ಸ್ವಾಮೀಜಿಯೊಬ್ಬ ಅಪ್ರಾಪ್ತ ಬಾಲಕಿಯನ್ನು ನಿಮ್ಮ ಮನೆಗೆ ಬಿಡುತ್ತೇನೆ ಎಂದು ತನ್ನ ಕಾರಿನಲ್ಲಿ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಬೆಳಗಾವಿಯ ಪೋಕ್ಸ್‌ ನ್ಯಾಯಾಲಯ ಶನಿವಾರ ಘೋರ ಶಿಕ್ಷೆ ವಿಧಿಸಿದೆ.

- Advertisement -

ಈ ಪ್ರಕರಣದ ತೀರ್ಪನ್ನು ಶುಕ್ರವಾರ ಪ್ರಕಟಿಸಿದ್ದ ನ್ಯಾಯಾಲಯ, ಶಿಕ್ಷೆಯನ್ನು ಶನಿವಾರ ಪ್ರಕಟಿಸಿದೆ. ಆರೋಪಿಗೆ ಒಟ್ಟು 35 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ರೂ.1 ಲಕ್ಷ ದಂಡ ವಿಧಿಸಲಾಗಿದೆ. ದಂಡ ಪಾವತಿಸಲು ವಿಫಲವಾದಲ್ಲಿ ಹೆಚ್ಚುವರಿ ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ನ್ಯಾಯಾಲಯ ಆದೇಶಿಸಿದೆ.
ಬಿಎನ್‌ಎಸ್ ಕಲಂ 137(2)ರ ಪ್ರಕಾರ 7 ವರ್ಷಗಳ ಶಿಕ್ಷೆ ಮತ್ತು ರೂ.25,000 ದಂಡ, ಕಲಂ 351ರ ಪ್ರಕಾರ 2 ವರ್ಷಗಳ ಶಿಕ್ಷೆ ಮತ್ತು ರೂ.3,000 ದಂಡ, ಕಲಂ 64ರ ಪ್ರಕಾರ 10 ವರ್ಷಗಳ ಶಿಕ್ಷೆ ಮತ್ತು ರೂ.50,000 ದಂಡ ವಿಧಿಸಲಾಗಿದೆ. ದಂಡದ ಮೊತ್ತ ಪಾವತಿಸದಿದ್ದಲ್ಲಿ ಕ್ರಮವಾಗಿ ಹೆಚ್ಚುವರಿ ಶಿಕ್ಷೆ ವಿಧಿಸಲಾಗುತ್ತದೆ.
ಇದಲ್ಲದೆ, ನೊಂದ ಅಪ್ರಾಪ್ತ ಬಾಲಕಿಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ರೂ.4 ಲಕ್ಷ ಪರಿಹಾರ ಧನ ನೀಡುವಂತೆ ನ್ಯಾಯಾಲಯ ಆದೇಶಿಸಿದೆ. ಈ ಮೊತ್ತವನ್ನು ರಾಷ್ಟ್ರೀಕೃತ ಬ್ಯಾಂಕಿನಲ್ಲಿ ಐದು ವರ್ಷಗಳ ಕಾಲ ಮುದ್ದತ್ತ ಠೇವಣಿಯಾಗಿ ಇಡಲು ಸೂಚಿಸಲಾಗಿದೆ.
ಸರ್ಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ಎಲ್.ವಿ. ಪಾಟೀಲ ವಾದ ಮಂಡಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಆರೋಪ: ಚನ್ನರಾಜ ಹಟ್ಟಿಹೊಳಿ ಸ್ಪಷ್ಟನೆ

ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪಕ್ಕೆ ವಿಧಾನ ಪರಿಷತ್...

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್: 500ಕ್ಕೆ ಹೆಚ್ಚಿಸಲು ಆಗ್ರಹ

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು...