ಬೆಳಗಾವಿ ಸೇರಿದಂತೆ ರಾಜ್ಯದ 18 ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಯೆಲ್ಲೋ ಅಲರ್ಟ್ ಜಿಲ್ಲೆಗಳು:
ಬೆಳಗಾವಿ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ವಿಜಯಪುರ, ಹಾವೇರಿ, ಗದಗ, ಧಾರವಾಡ, ಬಾಗಲಕೋಟೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ.
ಉಷ್ಣಾಂಶ ವರದಿ:
- ಕಲಬುರಗಿಯಲ್ಲಿ 40.6°C ಗರಿಷ್ಠ ತಾಪಮಾನ ದಾಖಲಾಗಿದೆ.
- ಚಾಮರಾಜನಗರದಲ್ಲಿ ಕನಿಷ್ಟ 15.4°C ತಾಪಮಾನ ದಾಖಲಾಗಿದೆ.
ಭಾರಿ ಮಳೆ ಹಿನ್ನೆಲೆ, ನಾಗರಿಕರು ಎಚ್ಚರಿಕೆಯಿಂದ ಇರಲು ಮತ್ತು ಅತಿಯಾದ ಪ್ರವಾಹದ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳು ಮನವಿ ಮಾಡಿದ್ದಾರೆ.