ಬೆಳಗಾವಿ | ಮಳೆ ಅಬ್ಬರ: ಕೃಷ್ಣಾ ಸೇರಿ ಮೂರು ನದಿಗಳ ನೀರಿನ ಮಟ್ಟಿ ಏರಿಕೆ ಐದು ಕೆಳಹಂತದ ಸೇತುವೆಗಳು ಜಲಾವೃತ

Date:

ಬೆಳಗಾವಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಬುಧವಾರವೂ ಮಳೆಯ ಅಬ್ಬರ ಮುಂದುವರಿದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ನೆರೆ ರಾಜ್ಯ ಮಹಾರಾಷ್ಟ್ರದ ಜಲಾನಯನ ಪ್ರದೇಶಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಚಿಕ್ಕೋಡಿ ಹಾಗೂ ನಿಪ್ಪಾಣಿ ತಾಲೂಕು ವ್ಯಾಪ್ತಿಯ ಕೃಷ್ಣಾ, ವೇದಗಂಗಾ ಮತ್ತು ದೂಧಗಂಗಾ ನದಿಗಳ ನೀರಿನ ಮಟ್ಟದಲ್ಲಿ ದಿಢೀ‌ರ್ ಏರಿಕೆಯಾಗಿದೆ. ಬೆಳಗಾವಿ ನಗರದಲ್ಲೂ ಸಂಜೆ ಬಳಿಕ ಉತ್ತಮ ಮಳೆಯಾಗಿದ್ದು, ಕೆಲವೆಡೆ ರಸ್ತೆಗಳಲ್ಲಿ ನೀರು ನಿಂತು ವಾಹನ ಸಂಚಾರಕ್ಕೆ ತೊಂದರೆಯಾಯಿತು.

- Advertisement -

ಕಳೆದ ಕೆಲವು ಗಂಟೆಗಳಲ್ಲಿ ನದಿಗಳ ನೀರಿನ ಮಟ್ಟ ಸುಮಾರು ಎರಡು ಅಡಿಗಳಷ್ಟು ಹೆಚ್ಚಳವಾಗಿದ್ದು, ನದಿ ತೀರದ ಗ್ರಾಮಗಳ ಜನರಲ್ಲಿ ಮತ್ತೆ ಪ್ರವಾಹದ ಆತಂಕ ಶುರುವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ಟಿಪ್ಪು ನಿಜ ಕನಸು’ಗಳಿಂದ ‘ಗಾಂಧೀ ಹತ್ಯೆಯ ಸತ್ಯ’ದವರೆಗೆ: ಇತಿಹಾಸ...

ನಾಟಕಕಾರ, ಬರಹಗಾರ ಅಡ್ಡಂಡ ಕಾರ್ಯಪ್ಪ ಹಿಂದಿನಿಂದಲೂ ಒಂದಲ್ಲೊಂದು ಕಾರಣಕ್ಕೆ ಸಾರ್ವಜನಿಕ ಚರ್ಚೆಯ ಮುನ್ನೆಲೆಗೆ ಬಂದಿರುವ ಹೆಸರು. ಇತಿಹಾಸದ ನಿರೂಪಣೆ, ರಂಗಭೂಮಿಯ ಬಳಕೆ, ಧಾರ್ಮಿಕ ಮತ್ತು ರಾಜಕೀಯ ವಿಚಾರಗಳ ಅಭಿವ್ಯಕ್ತಿ ಹಾಗೂ ಕೋಮು ಸೌಹಾರ್ದದ...

ಭಾವೈಕ್ಯತೆಯ ಹೆಜ್ಜೆನಾದ: ಕದ್ರಿ ದೇಗುಲದ ಯಕ್ಷಗಾನದಲ್ಲಿ ‘ಮಹಿಷಾಸುರ ಮರ್ದಿನಿ’ಯಾಗಿ...

ಕಲೆಗೆ ಯಾವುದೇ ಧರ್ಮ, ಜಾತಿಗಳ ಭೇದವಿಲ್ಲ ಎಂಬುದನ್ನು ಕರಾವಳಿಯ ಹೆಮ್ಮೆಯ ಸಾಂಪ್ರದಾಯಿಕ ಕಲೆ ಮತ್ತೊಮ್ಮೆ ಅತ್ಯಂತ ಸುಂದರವಾಗಿ ಸಾಬೀತುಪಡಿಸಿದೆ. ಮಂಗಳೂರಿನ ಐತಿಹಾಸಿಕ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ವೇದಿಕೆಯಲ್ಲಿ ಮುಸ್ಲಿಂ ಮಹಿಳೆಯೊಬ್ಬರು 'ಮಹಿಷಾಸುರ...

ಪದವೀಧರರು, ಶಿಕ್ಷಕರೇ ಗಮನಿಸಿ.. ಅ.23ರಂದು ಪ್ರಾಶಸ್ತ್ಯ ಮತ ಚಲಾಯಿಸುವಾಗ...

ಕರ್ನಾಟಕ ವಿಧಾನ ಪರಿಷತ್ತಿನ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರಗಳ ದ್ವೈವಾರ್ಷಿಕ ಚುನಾವಣೆ-2026ರ ಮತದಾನ ಅಕ್ಟೋಬರ್ 23ರಂದು ನಡೆಯಲಿದೆ. ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಯನ್ನು ಆರಿಸಲು ಪ್ರಾಶಸ್ತ್ಯ ಮತದಾನ ಪದ್ಧತಿಯನ್ನು ಅನುಸರಿಸಬೇಕು. ಈ ಸಂದರ್ಭದಲ್ಲಿ...

ಮಹಾರಾಷ್ಟ್ರದ ವಿವಿಧ ಜಲಾಶಯಗಳು ಹಾಗೂ ನದಿಗಳಿಂದ ಕಲ್ಲೋಳ ಬಳಿಯ ಕೃಷ್ಣಾ ನದಿಗೆ ಪ್ರಸ್ತುತ ಸುಮಾರು 65 ಸಾವಿರ ಕ್ಯೂಸೆಕ್‌ ನೀರು ಹರಿದುಬರುತ್ತಿದೆ. ಮಹಾರಾಷ್ಟ್ರದ ಘಟ್ಟ ಪ್ರದೇಶ ಮತ್ತು ಜಲಾನಯನ ಭಾಗದಲ್ಲಿ ಮಳೆ ಮುಂದುವರಿದಿರುವುದರಿಂದ ಒಳಹರಿವಿನ ಪ್ರಮಾಣ ಕ್ಷಣಕ್ಷಣಕ್ಕೂ ಹೆಚ್ಚಾಗುತ್ತಿದೆ.

ಇದರ ಪರಿಣಾಮವಾಗಿ ಚಿಕ್ಕೋಡಿ ಹಾಗೂ ನಿಪ್ಪಾಣಿ ತಾಲೂಕು ವ್ಯಾಪ್ತಿಯ ಐದು ಕೆಳಹಂತದ ಸೇತುವೆಗಳು ಸಂಪೂರ್ಣ ಜಲಾವೃತಗೊಂಡಿವೆ. ಹಲವು ಗ್ರಾಮಗಳ ನಡುವಿನ ನೇರ ರಸ್ತೆ ಸಂಪರ್ಕ ಕಡಿತಗೊಂಡಿದ್ದು, ಸಾರ್ವಜನಿಕರು ಹಾಗೂ ವಾಹನ ಸವಾರರು ಪರ್ಯಾಯ ಮಾರ್ಗಗಳನ್ನು ಬಳಸುತ್ತಿದ್ದಾರೆ.

ಜಿಲ್ಲಾಡಳಿತವು ನದಿ ತೀರದ ನಿವಾಸಿಗಳು ಹಾಗೂ ಸಾರ್ವಜನಿಕರು ಜಲಾವೃತ ಸೇತುವೆಗಳನ್ನು ದಾಟುವ ಪ್ರಯತ್ನ ಮಾಡಬಾರದು ಎಂದು ತಿಳಿಸಿದೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಅ.25ರಂದು ರಾಷ್ಟ್ರಮಟ್ಟದ ಮ್ಯಾರಥಾನ್: ಕ್ರೀಡಾಪಟುಗಳಿಗೆ ಜಿಲ್ಲಾಧಿಕಾರಿ ಆಹ್ವಾನ

ರಾಜ್ಯ ಸರ್ಕಾರದ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವ 'ಸಶಕ್ತ ಕರ್ನಾಟಕ' ಕಾರ್ಯಕ್ರಮದಡಿ...

ಬೆಳಗಾವಿ | ಚೂನಪ್ಪ ಪೂಜೇರಿ, ನಾನು ಸತ್ತರೂ ಒಂದೇ ಗೋರಿಯಲ್ಲಿ ಮಣ್ಣಾಗಬೇಕು: ಶಶಿಕಾಂತ ಗುರೂಜಿ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಹತ್ತರಗಿ...