ಬೆಳಗಾವಿ | ಮಳೆ ಬಿರುಗಾಳಿಗೆ ಬೃಹತ್‌ ಹುಣಸೆ ಮರ ಧರೆಗುರುಳಿ ನಾಲ್ಕು ಮನೆಗಳಿಗೆ ಭಾರಿ ಹಾನಿ

Date:

ಬೆಳಗಾವಿ ನಗರದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಬಿರುಗಾಳಿಯ ಆರ್ಭಟಕ್ಕೆ ಖಾಸಭಾಗದ ಉಪ್ಪಾರ ಗಲ್ಲಿಯಲ್ಲಿ ಬೃಹತ್ ಗಾತ್ರದ ಹುಣಸೆ ಮರವೊಂದು ಬುಡಸಮೇತ ಧರೆಗುರುಳಿದ್ದು, ನಾಲ್ಕು ಮನೆಗಳಿಗೆ ಭಾರಿ ಹಾನಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

- Advertisement -

ಅನಿಲ್‌ ಮುಟ್ಟೇಕ‌ರ್, ಆನಂದ ಭದ್ವಾಂಕರ, ಏಕನಾಥ ಭದ್ವಾಂಕರ ಹಾಗೂ ಪ್ರಶಾಂತ ಗೋರ್ಲೆ ಅವರ ಮನೆಗಳ ಮೇಲೆ ಮರ ಉರುಳಿ ಬಿದ್ದಿದೆ. ಪರಿಣಾಮ ಮನೆಯ ಮೇಲ್ಪಾವಣಿಗಳು ಜಖಂಗೊಂಡಿದ್ದು, ದಿನಸಿ ಸಾಮಗ್ರಿಗಳು, ಬಟ್ಟೆ-ಬರೆ ಹಾಗೂ ಇತರ ಅಗತ್ಯ ವಸ್ತುಗಳು ಮರದಡಿ ಸಿಲುಕಿ ಹಾಳಾಗಿವೆ. ಘಟನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ನಷ್ಟ ಸಂಭವಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಮಾಹಿತಿ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ ಮರ ತೆರವು ಕಾರ್ಯಾಚರಣೆ ಕೈಗೊಂಡರು. ಮರ ಮನೆಯ ಮೇಲೆಯೇ ಬಿದ್ದಿದ್ದರಿಂದ ನಾಲ್ಕು ಕುಟುಂಬಗಳು ಸದ್ಯ ನಿರಾಶ್ರಿತರಾಗಿದ್ದು, ತಾತ್ಕಾಲಿಕ ಆಶ್ರಯಕ್ಕಾಗಿ ಪರದಾಡುವಂತಾಗಿದೆ.

ಮಳೆ ಮತ್ತು ಬಿರುಗಾಳಿಯಿಂದ ನಮ್ಮ ಬದುಕೇ ಅಸ್ತವ್ಯಸ್ತವಾಗಿದೆ. ಕಣ್ಣೆದುರೇ ಮನೆ ಹಾಳಾಗಿದ್ದು, ಬದುಕಿನ ಆಧಾರವೇ ಕಳೆದುಹೋಗಿದೆ” ಎಂದು ಸಂತ್ರಸ್ತರು ಕಣ್ಣೀರಿಟ್ಟರು.

ಸಂತ್ರಸ್ತ ಕುಟುಂಬಗಳಿಗೆ ತಕ್ಷಣ ಪರಿಹಾರ ಹಾಗೂ ಅಗತ್ಯ ನೆರವು ಒದಗಿಸುವಂತೆ ಸ್ಥಳೀಯರು ಜಿಲ್ಲಾಡಳಿತವನ್ನು ಆಗ್ರಹಿಸಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಬಸ್‌ನಿಂದ ಇಳಿಯಲು ದಾರಿ ಬಿಡಲಿಲ್ಲವೆಂದು ಮಹಿಳೆ ಮೇಲೆ ಹಲ್ಲೆ

ಬಸ್‌ನಿಂದ ಇಳಿಯಲು ದಾರಿ ಬಿಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬ ಮಹಿಳೆಯ...

ಬೆಳಗಾವಿ | ಮಾಂಜಾ ದಾರಕ್ಕೆ ಸಿಲುಕಿ ಬೈಕ್ ಸವಾರ ಸಾವು

ಗಾಳಿಪಟದ ಮಾಂಜಾ ದಾರ ಬೈಕ್‌ ಚಲಾಯಿಸುತ್ತಿದ್ದ ಯುವಕನ ಕೊರಳಿಗೆ ಸಿಲುಕಿ ಸ್ಥಳದಲ್ಲೇ...

ಬೆಳಗಾವಿ | ಇನ್‌ಸ್ಟಾಗ್ರಾಂ ಹನಿಟ್ರ್ಯಾಪ್ ಮೂಲಕ ಯುವಕನ ಕೊಲೆ: ನಾಲ್ವರ ಬಂಧನ

ಕಾಣೆಯಾಗಿದ್ದ ಯುವಕನೊಬ್ಬನ ಕೊಲೆ ಪ್ರಕರಣಕ್ಕೆ ಭಾರೀ ತಿರುವು ಸಿಕ್ಕಿದ್ದು, ಹಳೆ ಹಣಕಾಸಿನ...