ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 10ರಂದು ಭಾನುವಾರ ಬೆಳಗಾವಿ-ಬೆಂಗಳೂರು ವಂದೇ ಭಾರತ್ ರೈಲು ಸೇರಿದಂತೆ ರಾಜ್ಯದ ಮೂರು ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಲಾದ ಜೋಶಿ ತಿಳಿಸಿದ್ದಾರೆ.
ಹೊಸ ವಂದೇ ಭಾರತ್ ರೈಲು ಆಗಸ್ಟ್ 11ರಿಂದ ನಿಯಮಿತ ಸಂಚಾರ ಆರಂಭಿಸಲಿದ್ದು, ವಾರದಲ್ಲಿ ಆರು ದಿನ ಓಡಲಿದೆ.
ವೇಳಾಪಟ್ಟಿ:
ಬೆಳಗಾವಿ (BGM) ನಿಂದ ಬೆಳಿಗ್ಗೆ 5:20ಕ್ಕೆ ಹೊರಟು ಮಧ್ಯಾಹ್ನ 1:50ಕ್ಕೆ ಬೆಂಗಳೂರು (SBC KSR) ತಲುಪಲಿದೆ.
ಬೆಂಗಳೂರು (SBC KSR) ನಿಂದ ಮಧ್ಯಾಹ್ನ 2:20ಕ್ಕೆ ಹೊರಟು ರಾತ್ರಿ 10:40ಕ್ಕೆ ಬೆಳಗಾವಿ ತಲುಪಲಿದೆ.
ನಿಲುಗಡೆ ನಿಲ್ದಾಣಗಳು: ಧಾರವಾಡ, ಹುಬ್ಬಳ್ಳಿ, ಹಾವೇರಿ, ದಾವಣಗೆರೆ ಮತ್ತು ತುಮಕೂರು.