ಬೆಳಗಾವಿ | ಭೀಕರ ಅಪಘಾತ: ಕಾಲು ತುಂಡಾಗಿ ವಾಹನದಲ್ಲೇ ಉಳಿದ ಚಾಲಕ

Date:

ವಿಜಯಪುರ-ಸಂಕೇಶ್ವರ ರಾಷ್ಟ್ರೀಯ ಹೆದ್ದಾರಿಯ ಬೆಳಗಾವಿ ಜಿಲ್ಲೆಯ ಅಥಣಿ ಹೊರವಲಯದಲ್ಲಿ ಶುಕ್ರವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗೂಡ್ಸ್ ಟ್ರಕ್ ಚಾಲಕನ ಬಲಗಾಲು ತುಂಡಾಗಿ ವಾಹನದಲ್ಲೇ ಸಿಲುಕಿದ ಘಟನೆ ನಡೆದಿದೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆತ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

- Advertisement -

ವಿಜಯಪುರ ಮೂಲದ ಸುನಿಲ್ ಬಿರಾದಾರ (26) ಗಾಯಗೊಂಡ ಚಾಲಕ ಎಂದು ಗುರುತಿಸಲಾಗಿದೆ. ಅಥಣಿಯಿಂದ ವಿಜಯಪುರ ಕಡೆಗೆ ತೆರಳುತ್ತಿದ್ದ ಗೂಡ್ಸ್ ಟ್ರಕ್ ಹಾಗೂ ವಿಜಯಪುರದಿಂದ ಅಥಣಿ ಕಡೆಗೆ ಬುಲ್ಲೋಜ‌ರ್ ಸಾಗಿಸುತ್ತಿದ್ದ ಕಂಟೇನರ್‌ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಆಗ್ನೇಯ ಪದವೀಧರ ಕ್ಷೇತ್ರ: ಕಾಂಗ್ರೆಸ್-ಬಿಜೆಪಿ ನಡುವೆ ಬಿರುಸಿನ ಸ್ಪರ್ಧೆ!

ವಿಧಾನ ಪರಿಷತ್ತಿನ ಕರ್ನಾಟಕ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ ಕಾವು ಪಡೆದುಕೊಂಡಿದ್ದು, ಬಿಜೆಪಿ–ಜೆಡಿಎಸ್ ಮೈತ್ರಿ ಮತ್ತು ಕಾಂಗ್ರೆಸ್ ನಡುವೆ ನೇರ ಹಣಾಹಣಿಯ ವಾತಾವರಣ ನಿರ್ಮಾಣವಾಗಿದೆ. ಕಾಂಗ್ರೆಸ್‌ನಿಂದ ಶಶಿ ಹುಲಿಕುಂಟೆಮಠ ಹಾಗೂ ಬಿಜೆಪಿ ಅಭ್ಯರ್ಥಿಯಾಗಿ...

ವಿಜಯಪುರ | ಪ್ಲಾಟ್‌ಫಾರ್ಮ್‌ ಮೇಲೆ ಹರಿವ ಚರಂಡಿ ನೀರು;...

"ಚರಂಡಿ ನೀರಿನ್ಯಾಗ ದಿನ ಹೋಗಾಕ ಹತ್ತಿವಿ…" ಇದು ವಿಜಯಪುರ ಕೇಂದ್ರ ಬಸ್ ನಿಲ್ದಾಣಕ್ಕೆ ಪ್ರತಿನಿತ್ಯ ಆಗಮಿಸುವ ಸಾವಿರಾರು ಪ್ರಯಾಣಿಕರ ಅಳಲು. ಪ್ಲಾಟ್‌ಫಾರ್ಮ್‌-1ರಲ್ಲಿ ಕೊಳಚೆ ನೀರು ಹರಿಯುತ್ತಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಜವಾಬ್ದಾರಿಯಿಂದ...

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವೈಯಕ್ತಿಕ...

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ ಬಾರಿ ನಿರೀಕ್ಷಿತ ಮಟ್ಟದಲ್ಲಿ ಮಿಂಚದೆ ಹಿನ್ನಡೆ ಅನುಭವಿಸಿವೆ. ಕಳೆದ ಹಾಂಗ್‌ಝೌ ಏಷ್ಯನ್ ಗೇಮ್ಸ್‌ನಲ್ಲಿ ಈ ಎರಡು ವಿಭಾಗಗಳಿಂದ ಬರೋಬ್ಬರಿ 51...

ಡಿಕ್ಕಿಯ ತೀವ್ರತೆಗೆ ಗೂಡ್ಸ್‌ ವಾಹನದ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಚಾಲಕನ ಬಲಗಾಲು ತುಂಡಾಗಿ ವಾಹನದಲ್ಲೇ ಸಿಲುಕಿಕೊಂಡಿತ್ತು. ಅಪಘಾತದ ದೃಶ್ಯ ಕಂಡ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.

ಸ್ಥಳೀಯರು ಹಾಗೂ ಪೊಲೀಸರು ಸೇರಿ ಗಾಯಾಳುವನ್ನು ಹೊರತೆಗೆದು ತಕ್ಷಣ ಆಸ್ಪತ್ರೆಗೆ ರವಾನಿಸಿದರು. ಅಪಘಾತದ ಪರಿಣಾಮ ಕೆಲಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ದಟ್ಟಣೆ ಉಂಟಾಯಿತು.

ಅಥಣಿ ಪೊಲೀಸ್‌ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಚರಕ ಕೇವಲ ನೂಲು ತೆಗೆಯುವ ಸಾಧನವಾಗಿರಲಿಲ್ಲ ಸ್ವಾವಲಂಬನೆಯ ಸಂಕೇತವಾಗಿತ್ತು

ಜಗತ್ತು ಗುರಿಯಿಲ್ಲದ ನಾಗಾಲೋಟದಲ್ಲಿ ಓಡುತ್ತಿದೆ. ನಿನ್ನೆ ಹೊಸತಾಗಿದ್ದ ತಂತ್ರಜ್ಞಾನ ಇಂದು ಹಳೆಯದಾಗಿ...

ಬೆಳಗಾವಿ | 198 ಮತದಾರರ ಹೆಸರು ಅಳಿಸಲು ಅರ್ಜಿ: ಬಿಜೆಪಿ ಮುಖಂಡ ಸೇರಿ 25 ಮಂದಿ ವಿರುದ್ಧ ಎಫ್‌ಐಆರ್‌

ಬೆಳಗಾವಿ ವೀರಭದ್ರನಗರದಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ 198 ಮತದಾರರ ಹೆಸರುಗಳನ್ನು ಮತದಾರರ...

ಬೆಳಗಾವಿ | ಹೆರಾಯಿನ್ ಮಾರಾಟ ಆರೋಪ: ಓರ್ವನ ಬಂಧನ

ಬೆಳಗಾವಿ ನಗರದಲ್ಲಿ ಅಕ್ರಮವಾಗಿ ಹೆರಾಯಿನ್ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಸಿಸಿಬಿ...