ಬೆಳಗಾವಿ : ಭೀಕರ ಕಾರು ಅಪಘಾತ – ಇಬ್ಬರು ಸ್ಥಳದಲ್ಲೇ ಸಾವು, ಒಬ್ಬರಿಗೆ ಗಂಭೀರ ಗಾಯ

Date:

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಬೆಳಗಾವಿ–ಬಾಗಲಕೋಟೆ ಮುಖ್ಯರಸ್ತೆಯ ಸೋಮನಟ್ಟಿ ಗ್ರಾಮದ ಬಳಿ ಭಾನುವಾರ ಬೆಳಿಗ್ಗೆ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬ ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ.

- Advertisement -

ಮೃತರನ್ನು ಬೆಳಗಾವಿ ತಾಲೂಕಿನ ಕರಿಕಟ್ಟಿ ಗ್ರಾಮದ ಸಚಿನ್ ಯಲ್ಲಪ್ಪ ಬೋರಿಮರದ (21) ಮತ್ತು ಬಾಲಕೃಷ್ಣ ಬಸಪ್ಪ ಸುಲದಾಳ (19) ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ಲಕ್ಕಪ್ಪ ಯಲ್ಲಪ್ಪ ಬೋರಿಮರದ (23) ಅವರನ್ನು ತಕ್ಷಣ ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಪೊಲೀಸರ ಪ್ರಕಾರ, ಯರಗಟ್ಟಿಯಿಂದ ಬೆಳಗಾವಿ ಕಡೆ ಬರುತ್ತಿದ್ದ ಸ್ವಿಫ್ಟ್ ಡಿಸೈರ್ ಕಾರು ಸೋಮನಟ್ಟಿ ಗ್ರಾಮದ ಬಳಿ ವೇಗ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ದುರಂತ ಸಂಭವಿಸಿದೆ.

ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆಯೇ ಡಿ.ವೈ.ಎಸ್.ಪಿ. ಡಾ. ವೀರಯ್ಯ ಹಿರೇಮಠ, ಪಿ.ಐ. ಗಜಾನನ ನಾಯ್ಕ, ಪಿ.ಎಸ್.ಐ. ಈರಪ್ಪ ರಿತ್ತಿ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದರು. ಗ್ರಾಮಸ್ಥರು ಕೂಡ ಸಹಕರಿಸಿದರು.

ನೇಸರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ ನಗರದಲ್ಲಿ ನಾಳೆ ಸಕ್ಕರೆ ಕಾರ್ಖಾನೆ ಕಾರ್ಮಿಕರ ರಾಜ್ಯಮಟ್ಟದ ಬೃಹತ್‌ ಸಮಾವೇಶ

ಸಕ್ಕರೆ ಕಾರ್ಖಾನೆ ಕಾರ್ಮಿಕರ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಕರ್ನಾಟಕ ಯುನೈಟೆಡ್...

ಬೆಳಗಾವಿ | ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಆರೋಪ: ಚನ್ನರಾಜ ಹಟ್ಟಿಹೊಳಿ ಸ್ಪಷ್ಟನೆ

ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪಕ್ಕೆ ವಿಧಾನ ಪರಿಷತ್...