ಬೆಳಗಾವಿ | ಮೆಕ್ಕೆಜೋಳದ ಗದ್ದೆಯಲ್ಲಿ ಭೀಕರ ಹತ್ಯೆ ಮರ್ಮಾಂಗ ಕತ್ತರಿಸಿ ವಿಕೃತಿ ಮೆರೆದ ದುಷ್ಕರ್ಮಿಗಳು

Date:

ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಹಿರೇನಂದಿಹಳ್ಳಿ ಗ್ರಾಮದಲ್ಲಿ ವ್ಯಕ್ತಿಯೊಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮೃತದೇಹ ಮೆಕ್ಕೆಜೋಳದ ಗದ್ದೆಯಲ್ಲಿ ಪತ್ತೆಯಾಗಿ ಗ್ರಾಮದಲ್ಲಿ ಆತಂಕ ಸೃಷ್ಟಿಯಾಗಿದೆ.

- Advertisement -

ಮೃತರನ್ನು ಅದೇ ಗ್ರಾಮದ ಕಛೇಶ್ ಕೋಟಿ (50) ಎಂದು ಗುರುತಿಸಲಾಗಿದೆ. ಅವರು ತುಮಕೂರುದಲ್ಲಿ ಹೋಮ್ ಕೇರ್ ನೌಕರರಾಗಿದ್ದು, ಸುಮಾರು ಹತ್ತು ದಿನಗಳ ಹಿಂದೆ ಸ್ವಗ್ರಾಮಕ್ಕೆ ಬಂದಿದ್ದರು ಎನ್ನಲಾಗಿದೆ. ನಾಲ್ಕು ದಿನಗಳ ಹಿಂದೆಯೇ ಈ ಕೃತ್ಯ ನಡೆದಿರುವ ಸಾಧ್ಯತೆ ಇದ್ದು, ದುರ್ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಹೊಲಕ್ಕೆ ತೆರಳಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಶಾಸ್ತ್ರೀಯ ಪರಂಪರೆಗೆ ಸಮಕಾಲೀನ...

ಈ ಬಾರಿಯ ಸಾಹಿತ್ಯದ ನೊಬೆಲ್‌ ಪುರಸ್ಕಾರ ಕೆನಡಾದ ಆನ್‌ ಕಾರ್ಸನ್‌ ಅವರ ಮುಡಿಗೇರಿದೆ. ಇವರು ಕವಯತ್ರಿ, ಪ್ರಬಂಧಗಾರ್ತಿ ಹಾಗೂ ಅನುವಾದಕಿ. ಕ್ಲಾಸಿಕಲ್‌ ಗ್ರೀಕ್‌ ಸಾಹಿತ್ಯದ ಪ್ರೇಮಿಯಾದ ಕಾರ್‌ಸನ್‌ ಶಾಸ್ತ್ರೀಯ ಮಾದರಿಯನ್ನು ಸಮಕಾಲೀನ ಸಂದರ್ಭಗಳಲ್ಲಿ...

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ಪ್ರಾಥಮಿಕ ತನಿಖೆ ಪ್ರಕಾರ, ದುಷ್ಕರ್ಮಿಗಳು ಕಛೇಶ್ ಅವರನ್ನು ಮಾರಕಾಸ್ತ್ರಗಳಿಂದ ಕ್ರೂರವಾಗಿ ಹತ್ಯೆಗೈದು ಬಳಿಕ ಮರ್ಮಾಂಗ ಕತ್ತರಿಸಿ ವಿಕೃತಿ ಮೆರೆದಿದ್ದಾರೆ. ಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ವೈಷಮ್ಯ ಅಥವಾ ವೈಯಕ್ತಿಕ ದ್ವೇಷದ ಹಿನ್ನೆಲೆ ಇರುವ ಸಾಧ್ಯತೆ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್‌ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಆರೋಪಿಗಳ ಪತ್ತೆಗಾಗಿ ವಿಶೇಷ ತಂಡ ರಚಿಸಲಾಗಿದ್ದು, ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿ ಓದಿದ್ದಿರಾ ? ಬೆಳಗಾವಿ | ದೇವರೆ ನನ್ನ ಅತ್ತೆ ಸಾಯಲಿ ದೇವಸ್ಥಾನ ಹುಂಡಿಯಲ್ಲಿ ವಿಚಿತ್ರ ಹರಕೆಯ ಚೀಟಿ

ಗ್ರಾಮದಲ್ಲಿ ಹೆಚ್ಚುವರಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಆರೋಪಿಗಳನ್ನು ಶೀಘ್ರವೇ ಬಂಧಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಕುರಿ ಕಳ್ಳತನ: ಮೂವರು ಬಂಧನ

ಬೆಳಗಾವಿ ನಗರದ ಭಾಗ್ಯನಗರದಲ್ಲಿ 10 ಕುರಿಗಳನ್ನು ಕಳ್ಳತನ ಮಾಡಿದ್ದ ಪ್ರಕರಣವನ್ನು ತಿಲಕವಾಡಿ...

ಬೆಳಗಾವಿ | ಚಿರತೆ ಪ್ರತ್ಯಕ್ಷ: ರೈತರಲ್ಲಿ ಆತಂಕ

ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಶೇಡಬಾಳ ಪಟ್ಟಣದ ಹೊರವಲಯದಲ್ಲಿ ಶನಿವಾರ ರಾತ್ರಿ...