ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ 10ಕ್ಕೂ ಹೆಚ್ಚು ಹೋಟೆಲ್ ಹಾಗೂ ಡಾಬಾಗಳ ಮೇಲೆ ತಹಶೀಲ್ದಾರ್ ರಾಜೇಶ ಬುರ್ಲಿ ನೇತೃತ್ವದ ಅಧಿಕಾರಿಗಳ ತಂಡ ಶುಕ್ರವಾರ ದಿಢೀರ್ ದಾಳಿ ನಡೆಸಿ, ವಾಣಿಜ್ಯ ಬಳಕೆಗೆ ಬಳಸುತ್ತಿದ್ದ 29 ಗೃಹ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳನ್ನು ಜಪ್ತಿ ಮಾಡಿದೆ.
ವಾಣಿಜ್ಯ ಉದ್ದೇಶಕ್ಕಾಗಿ ಗೃಹ ಬಳಕೆಯ ಸಿಲಿಂಡರ್‌ಗಳನ್ನು ಬಳಸುವುದು ಕಾನೂನುಬಾಹಿರವಾಗಿದ್ದು, ಇಂತಹ ಚಟುವಟಿಕೆ ಕಂಡುಬಂದಲ್ಲಿ ಸಂಬಂಧಪಟ್ಟವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ತಹಶೀಲ್ದಾರ್ ಎಚ್ಚರಿಕೆ ನೀಡಿದರು.
ದಾಳಿಯಲ್ಲಿ ಆಹಾರ ಇಲಾಖೆ ಅಧಿಕಾರಿ ಹನುಮಂತ ಕಾಂಡೇಕರ, ಕಂದಾಯ ಇಲಾಖೆಯ ಶಿರಸ್ತೇದಾರ ಆರ್.ಐ. ನಾಯಕ ಹಾಗೂ ಐಶ್ವರ್ಯ ದಿವಟೆ ಇದ್ದರು.



