ಬೆಳಗಾವಿ | ಮನೆಗಳ್ಳತನ ಗ್ಯಾಂಗ್ ಬಂಧನ: ₹67.93 ಲಕ್ಷ ಮೌಲ್ಯದ ಚಿನ್ನ-ಬೆಳ್ಳಿ ವಶಕ್ಕೆ

Date:

ತರಕಾರಿ, ಹಣ್ಣು ಹಾಗೂ ಹೂವು ಮಾರಾಟ ಮಾಡುವ ಸೋಗಿನಲ್ಲಿ ದಿನದ ವೇಳೆ ಮನೆಗಳನ್ನು ಗುರುತಿಸಿ, ರಾತ್ರಿ ಹೊತ್ತು ಕೀಲಿ ಮುರಿದು ಕಳ್ಳತನ ಮಾಡುತ್ತಿದ್ದ ಐವರು ಸದಸ್ಯರ ಗ್ಯಾಂಗ್‌ ಅನ್ನು ಬೆಳಗಾವಿ ಮಾಳಮಾರುತಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

- Advertisement -

ಬಂಧಿತರನ್ನು ರಿಹಾನ್ ಮೈನುದ್ದೀನ್ ದಫೇದಾರ (18), ಮಲೀಕ್‌ ಖಲೀಲ್ ಹುಬ್ಬಳ್ಳಿ (26), ಖಲೀಲ್ ಇಸ್ಮಾಯಿಲ್ ಹುಬ್ಬಳ್ಳಿ (57), ಅರಮಾನ್ ಅಕ್ಷರ್ ಶೇಖ್ (18) ಹಾಗೂ ಶಾನವಾಜ್‌ ಸಿರಾಜುದ್ದೀನ್ ಪಠಾಣ (23) ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ತಿಪಟೂರು | ಕೊಬ್ಬರಿ ವ್ಯಾಪಾರದಲ್ಲಿ ಅಂಡರ್ ಬಿಲ್ಲಿಂಗ್ ಆಟ;...

ತಿಪಟೂರು ಕೊಬ್ಬರಿ ವ್ಯಾಪಾರದಲ್ಲಿ ಅಂಡರ್ ಬಿಲ್ಲಿಂಗ್ ಆಟ ಜೋರಿದೆ. ಟೆಂಡರ್ ದರ ಒಂದಾದರೆ, ಸುತ್ತಮುತ್ತಲಿನ ಮಾರುಕಟ್ಟೆಗಳಲ್ಲಿ ನೇರ ಖರೀದಿ (URD) ಮತ್ತು ರವಾನೆ ಕೊಬ್ಬರಿ ಖರೀದಿಗೆ ಮತ್ತೊಂದು ಬೆಲೆ ನಿಗದಿಯಾಗಿದೆ. ಅಂಡರ್ ಬಿಲ್ಲಿಂಗ್...

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

ಪೊಲೀಸರು ಆರೋಪಿಗಳಿಂದ ಒಟ್ಟು ₹67,93,425 ಮೌಲ್ಯದ ಚಿನ್ನ ಹಾಗೂ ಬೆಳ್ಳಿ ಆಭರಣಗಳನ್ನು ವಶಕ್ಕೆ ಪಡೆದಿದ್ದಾರೆ. ಇದರಲ್ಲಿ 415.98 ಗ್ರಾಂ ಚಿನ್ನದ ಆಭರಣಗಳು (₹64,47,690) ಹಾಗೂ 1329.75 ಗ್ರಾಂ ಬೆಳ್ಳಿಯ ಆಭರಣಗಳು (₹3,45,735) ಸೇರಿವೆ.

ನಗರ ಪೊಲೀಸ್‌ ಆಯುಕ್ತ ಭೂಷಣ ಬೊರಸೆ ಅವರು ಮಾಹಿತಿ ನೀಡಿದ್ದು, ಬೆಳಗಾವಿಯ ಅಮನ್ ನಗರ, ಉಜ್ವಲ ನಗರ, ಮಾರುತಿ ನಗರ, ಶಾಹು ನಗರ ಹಾಗೂ ವೀರಭದ್ರ ನಗರ ಸೇರಿದಂತೆ ಹಲವು ಪ್ರದೇಶಗಳಲ್ಲಿ ಈ ಗ್ಯಾಂಗ್‌ ಕಳ್ಳತನ ನಡೆಸಿರುವುದು ಪತ್ತೆಯಾಗಿದೆ. ಒಟ್ಟು 11 ಪ್ರಕರಣಗಳಲ್ಲಿ ಇವರ ಕೈವಾಡ ಇರುವುದಾಗಿ ತಿಳಿಸಿದ್ದಾರೆ.

ದಿನದಲ್ಲಿ ವ್ಯಾಪಾರಿಗಳಂತೆ ತಿರುಗಾಡಿ ಕೀಲಿ ಹಾಕಿದ ಮನೆಗಳನ್ನು ಗುರುತಿಸಿ, ರಾತ್ರಿ ಹೊತ್ತು ಮನೆ ಕಳ್ಳತನ ನಡೆಸುತ್ತಿದ್ದ ಈ ಗ್ಯಾಂಗ್‌ ಪತ್ತೆಗಾಗಿ ವಿಶೇಷ ತಂಡ ರಚಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಜನರು ಮನೆಗೆ ಕೀಲಿ ಹಾಕಿ ಹೊರಡುವಾಗ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದರೆ ಗಸ್ತು ವ್ಯವಸ್ಥೆ ಮಾಡಲಾಗುವುದು ಎಂದು ಪೊಲೀಸ್ ಆಯುಕ್ತರು ಸಾರ್ವಜನಿಕರಿಗೆ ಸಲಹೆ ನೀಡಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಅ.26ರಂದು ಸುವರ್ಣ ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳ ಜತೆ ಕಬ್ಬು ಬೆಳೆಗಾರರ ಸಭೆ

ಬೆಳಗಾವಿ ಜಿಲ್ಲೆಯ ಹತ್ತರಗಿ ಟೋಲ್‌ನಿಂದ ಆರಂಭವಾಗಿದ್ದ ಕಬ್ಬು ಬೆಳೆಗಾರರ ಪಾದಯಾತ್ರೆ ಧಾರವಾಡ...

ಬೆಳಗಾವಿ | ಕಿತ್ತೂರು ರಾಣಿ ಚನ್ನಮ್ಮ ಪ್ರತಿಮೆಯ ಖಡ್ಗ ಸಮೇತ ಬಿದ್ದ ಬಲಗೈ

ಬೆಳಗಾವಿ ಜಿಲ್ಲೆಯ ಕಿತ್ತೂರು ಪಟ್ಟಣದ ರಾಣಿ ಚನ್ನಮ್ಮ ವೃತ್ತದಲ್ಲಿರುವ ವೀರರಾಣಿ ಕಿತ್ತೂರು...