ಬೆಳಗಾವಿ | ಭಾರಿ ಮಳೆಗೆ ಮನೆಯ ಗೋಡೆ ಕುಸಿತ: ಏಳು ಜನರು ಕೂದಲೆಳೆ ಅಂತರದಲ್ಲಿ ಪಾರು

Date:

ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಜೋಡಕುರುಳಿ ಗ್ರಾಮದಲ್ಲಿ ಮನೆಯೊಂದರ ಗೋಡೆ ಕುಸಿದು ಬಿದ್ದಿದ್ದು, ಮನೆಯಲ್ಲಿದ್ದ ಏಳು ಮಂದಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

- Advertisement -

ಗ್ರಾಮದ ನಿವಾಸಿ ಗಂಗವ್ವಾ ವರಾಳೆ ಅವರಿಗೆ ಸೇರಿದ ಮನೆ ಸತತ ಮಳೆಯಿಂದ ಶಿಥಿಲಗೊಂಡಿತ್ತು. ಭಾನುವಾರ ಕುಟುಂಬದ ಸದಸ್ಯರೆಲ್ಲರೂ ಮನೆಯೊಳಗೆ ಒಟ್ಟಾಗಿ ಊಟ ಮಾಡುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಮನೆಯ ಗೋಡೆ ಭಾರೀ ಸದ್ದಿನೊಂದಿಗೆ ಕುಸಿದು ಬಿದ್ದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಗೋಡೆ ಕುಸಿಯುವ ಮುನ್ನವೇ ಅಪಾಯದ ಲಕ್ಷಣವನ್ನು ಗಮನಿಸಿದ ಕುಟುಂಬದ ಸದಸ್ಯರು ಕ್ಷಣಾರ್ಧದಲ್ಲಿ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ಇದರಿಂದ ಏಳು ಮಂದಿಯೂ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದು, ಸಂಭವಿಸಬಹುದಾಗಿದ್ದ ಭಾರೀ ಅನಾಹುತ ತಪ್ಪಿದೆ.

ಘಟನೆಯಿಂದ ಮನೆಯ ಗೋಡೆ ಹಾಗೂ ಮನೆಯಲ್ಲಿದ್ದ ಕೆಲವು ವಸ್ತುಗಳು ಹಾನಿಗೊಳಗಾಗಿವೆ. ಮನೆ ವಾಸಕ್ಕೆ ಯೋಗ್ಯವಲ್ಲದ ಸ್ಥಿತಿಗೆ ತಲುಪಿದ್ದು, ಬಡ ಕುಟುಂಬ ಸಂಕಷ್ಟಕ್ಕೆ ಸಿಲುಕಿದೆ.

ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಂತ್ರಸ್ತ ಕುಟುಂಬಕ್ಕೆ ಸರ್ಕಾರದಿಂದ ತಕ್ಷಣ ಪರಿಹಾರ ಹಾಗೂ ಅಗತ್ಯ ನೆರವು ಒದಗಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಅ.24ರಿಂದ ಕಲ್ಯಾಣ ಪರ್ವ: ಭಿತ್ತಿ ಪತ್ರ ಬಿಡುಗಡೆ

ಬಸವಕಲ್ಯಾಣದ ಮಹಾ ಮಠದ ಮಹಾಮನೆ ಆವರಣದಲ್ಲಿ ಬಸವ ಧರ್ಮ ಪೀಠದ ವತಿಯಿಂದ...

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಶಿವಮೊಗ್ಗ | ರಂಗದಸರಾ ಪ್ರಯುಕ್ತ ಜಿಲ್ಲಾ ಮಟ್ಟದ ಏಕಪಾತ್ರಾಭಿನಯ ಸ್ಪರ್ಧೆ ಕಾರ್ಯಕ್ರಮ

ಶಿವಮೊಗ್ಗ ಮಹಾನಗರ ಪಾಲಿಕೆಯು ದಸರಾ-2026ರ ಪ್ರಯುಕ್ತ ರಂಗ ದಸರಾ-2026ರ ಅಡಿಯಲ್ಲಿ 15...

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...