ಬೆಳಗಾವಿ | ನೆರೆ ಸಂತ್ರಸ್ತರಿಗೆ 30 ಮನೆ ನಿರ್ಮಾಣಕ್ಕೆ HRS ಮಹತ್ವಾಕಾಂಕ್ಷೆಯ ಯೋಜನೆ

Date:

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಹಿರೇಹಟ್ಟಿಹೊಳಿ ಗ್ರಾಮದ 2019ರ ನೆರೆ ಸಂತ್ರಸ್ತರಿಗೆ ಶಾಶ್ವತ ನೆಲೆ ಕಲ್ಪಿಸುವ ಉದ್ದೇಶದಿಂದ ಹೂಮಾನಿಟೇರಿಯನ್ ರಿಲೀಫ್‌ ಸೊಸೈಟಿ (HRS) ವತಿಯಿಂದ ಮನೆ ನಿರ್ಮಾಣ ಯೋಜನೆ ಆರಂಭಿಸಲಾಗಿದೆ. ಯೋಜನೆಗೆ ದಾನಿಗಳ ಸಹಕಾರ ಕೋರಲು ಜೂನ್ 28ರಂದು ಬೆಳಗಾವಿ ನಗರದಲ್ಲಿ ದಾನಿಗಳ ಸಭೆ ಆಯೋಜಿಸಲಾಗಿತ್ತು.

- Advertisement -

ಸಭೆಯಲ್ಲಿ ಖ್ಯಾತ ವಾಗಿ ಡಾ. ತಾಹ ಮತೀನ್ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು, ಸಮಾಜದ ಸಹೃದಯರು ನೆರೆ ಸಂತ್ರಸ್ತರ ಪುನರ್ವಸತಿಗೆ ಕೈಜೋಡಿಸುವಂತೆ ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

2019ರ ಭೀಕರ ನೆರೆ ಹಾವಳಿಯಿಂದ ಹಿರೇಹಟ್ಟಿಹೊಳಿ ಗ್ರಾಮದ ಅನೇಕ ಕುಟುಂಬಗಳು ಮನೆ ಕಳೆದುಕೊಂಡಿದ್ದು, ಹಲವು ವರ್ಷಗಳಾದರೂ ಶಾಶ್ವತ ವಸತಿ ಸೌಲಭ್ಯ ದೊರಕಿಲ್ಲ. ಈ ಮಾನವೀಯ ಅಗತ್ಯವನ್ನು ಮನಗಂಡು HRS ಸಂಸ್ಥೆ ಮನೆ ನಿರ್ಮಾಣ ಯೋಜನೆಯನ್ನು ಕೈಗೆತ್ತಿಕೊಂಡಿದೆ.

ಯೋಜನೆಯಡಿ 28 ಮನೆಗಳು ಹಾಗೂ ಒಂದು ಸಮುದಾಯ ಭವನ (ಕಮ್ಯುನಿಟಿ ಸೆಂಟರ್) ನಿರ್ಮಿಸಲಾಗುತ್ತಿದೆ. ಪ್ರತಿ ಮನೆಯ ನಿರ್ಮಾಣಕ್ಕೆ ಸುಮಾರು ₹3.90 ಲಕ್ಷ ವೆಚ್ಚವಾಗಲಿದ್ದು, ಒಟ್ಟು ಯೋಜನಾ ವೆಚ್ಚ ₹1.17 ಕೋಟಿ ಎಂದು ಅಂದಾಜಿಸಲಾಗಿದೆ.

ಸಭೆಯಲ್ಲಿ ದಾನಿಗಳು, ಸಮಾಜದ ಮುಖಂಡರು ಹಾಗೂ ವಿವಿಧ ಕ್ಷೇತ್ರಗಳ ಗಣ್ಯರು ಭಾಗವಹಿಸಿ, ಯೋಜನೆಗೆ ಸಹಕಾರ ನೀಡುವ ಭರವಸೆ ವ್ಯಕ್ತಪಡಿಸಿದರು. ಯೋಜನೆ ಪೂರ್ಣಗೊಂಡ ಬಳಿಕ ನೆರೆ ಸಂತ್ರಸ್ತ ಕುಟುಂಬಗಳಿಗೆ ಸುರಕ್ಷಿತ ಮತ್ತು ಶಾಶ್ವತ ವಸತಿ ಕಲ್ಪಿಸುವ ಗುರಿ ಹೊಂದಲಾಗಿದೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಹೋರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಕಿಡಿಗೇಡಿಗಳು

ಯಾರ ತಂಟೆಗೂ ಹೋಗದೆ ತಿರುಗಾಡುತ್ತಿದ್ದ ಮೂಕ ಪ್ರಾಣಿಯೊಂದರ ಮೇಲೆ ಅಮಾನವೀಯ ಕೃತ್ಯ...

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದಲ್ಲಿ ಗಾಂಧೀಜಿ ಸ್ಮಾರಕ: ಡಿ.ಕೆ.ಶಿವಕುಮಾ‌ರ್

ಮಹಾತ್ಮ ಗಾಂಧೀಜಿ ಪಾಲ್ಗೊಂಡಿದ್ದ ಬೆಳಗಾವಿ ಕಾಂಗ್ರೆಸ್‌ ಅಧಿವೇಶನಕ್ಕೆ ನೂರು ವರ್ಷ ಪೂರ್ಣಗೊಂಡಿರುವ...

ಬೆಳಗಾವಿ | ಬಸ್‌ನಿಂದ ಇಳಿಯಲು ದಾರಿ ಬಿಡಲಿಲ್ಲವೆಂದು ಮಹಿಳೆ ಮೇಲೆ ಹಲ್ಲೆ

ಬಸ್‌ನಿಂದ ಇಳಿಯಲು ದಾರಿ ಬಿಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬ ಮಹಿಳೆಯ...