ಬೆಳಗಾವಿ | ಪತ್ನಿ ಮರಣದ ಸುದ್ದಿ ಕೇಳಿ ಪತಿಯೂ ಸಾವು

Date:

ಪತ್ನಿಯ ನಿಧನದ ಸುದ್ದಿ ಕೇಳಿ ತೀವ್ರ ಮನನೊಂದ ಪತಿಯೂ ಕೇವಲ ಒಂದೂವರೆ ಗಂಟೆಯ ಅಂತರದಲ್ಲಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದಲ್ಲಿ ನಡೆದಿದೆ.

- Advertisement -

ಯಕ್ಸಂಬಾ ನಿವಾಸಿಗಳಾದ ಸುಶೀಲಾ ಸುಭಾಷ ಸಾತ್ವರ (65) ಹಾಗೂ ಸುಭಾಷ ಸಿದಲಿಂಗ ಸಾತ್ವರ (72) ಸಾವಿನಲ್ಲೂ ಒಂದಾದ ದುರ್ದೈವಿ ದಂಪತಿ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ರಕ್ತದೊತ್ತಡ ಕಡಿಮೆಯಾಗಿದ್ದರಿಂದ ಸುಶೀಲಾ ಅವರನ್ನು ಚಿಕ್ಕೋಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ಸುಭಾಷ ಅವರನ್ನೂ ಅದೇ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಚಿಕಿತ್ಸೆ ಫಲಕಾರಿಯಾಗದೆ ಸುಶೀಲಾ ಅವರು ಗುರುವಾರ ರಾತ್ರಿ 8 ಗಂಟೆಗೆ ಕೊನೆಯುಸಿರೆಳೆದರು. ಪತ್ನಿಯ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಸುಭಾಷ ಅವರಿಗೆ ತೀವ್ರ ಆಘಾತವಾಗಿದೆ. ಅರ್ಧ ಶತಮಾನಕ್ಕೂ ಹೆಚ್ಚು ಕಾಲ ಜೊತೆಯಾಗಿ ಬದುಕಿದ್ದ ಪತ್ನಿಯ ಅಗಲಿಕೆಯ ದುಃಖವನ್ನು ತಾಳಲಾರದೆ ಅವರು ರಾತ್ರಿ 9.30ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿಯಲ್ಲಿ 15 ಸಾವಿರ ಮತದಾರರ ಹೆಸರು ಅಳಿಸುವ ಸಂಚು: ರಾಹುಲ್ ಗಾಂಧಿ

ಬೆಳಗಾವಿ ಜಿಲ್ಲೆಯಲ್ಲಿ ಸುಮಾರು 15 ಸಾವಿರ ಮತದಾರರ ಹೆಸರುಗಳನ್ನು ಒಂದೇ ಬಾರಿಗೆ...

ಬೆಳಗಾವಿ | ಹೋರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಕಿಡಿಗೇಡಿಗಳು

ಯಾರ ತಂಟೆಗೂ ಹೋಗದೆ ತಿರುಗಾಡುತ್ತಿದ್ದ ಮೂಕ ಪ್ರಾಣಿಯೊಂದರ ಮೇಲೆ ಅಮಾನವೀಯ ಕೃತ್ಯ...

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದಲ್ಲಿ ಗಾಂಧೀಜಿ ಸ್ಮಾರಕ: ಡಿ.ಕೆ.ಶಿವಕುಮಾ‌ರ್

ಮಹಾತ್ಮ ಗಾಂಧೀಜಿ ಪಾಲ್ಗೊಂಡಿದ್ದ ಬೆಳಗಾವಿ ಕಾಂಗ್ರೆಸ್‌ ಅಧಿವೇಶನಕ್ಕೆ ನೂರು ವರ್ಷ ಪೂರ್ಣಗೊಂಡಿರುವ...

ಬೆಳಗಾವಿ | ಬಸ್‌ನಿಂದ ಇಳಿಯಲು ದಾರಿ ಬಿಡಲಿಲ್ಲವೆಂದು ಮಹಿಳೆ ಮೇಲೆ ಹಲ್ಲೆ

ಬಸ್‌ನಿಂದ ಇಳಿಯಲು ದಾರಿ ಬಿಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬ ಮಹಿಳೆಯ...