ಬೆಳಗಾವಿ | ಪ್ರಿಯಕರನ ಜೊತೆ ಸೇರಿ ಪತಿಯ ಕೊಲೆ? ಆರು ತಿಂಗಳ ಬಳಿಕ ಬಯಲಿಗೆ ಬಂದ ಪ್ರಕರಣ

Date:

ಪತ್ನಿಯೇತನ್ನಪ್ರಿಯಕರನೊಂದಿಗೆ ಸೇರಿ ಪತಿಯನ್ನು ಕೊಲೆ ಮಾಡಿರುವ ಆರೋಪ ಕೇಳಿಬಂದಿದ್ದು, ಸುಮಾರು ಆರು ತಿಂಗಳ ಹಿಂದೆ ನಡೆದಿದ್ದ ಘಟನೆ ಇದೀಗ ತಡವಾಗಿ ಬೆಳಕಿಗೆ ಬಂದಿದೆ.

- Advertisement -

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಖಡಕಲಾಟ ಗ್ರಾಮದಲ್ಲಿ ಘಟನೆ ನಡೆದಿದ್ದು, ಮೃತರನ್ನು ರಾಘು ಗಾವಡೆ (40) ಎಂದು ಗುರುತಿಸಲಾಗಿದೆ. ಮೃತರ ಪತ್ನಿ ಬಂಗಾರಿ ಗಾವಡೆ ಹಾಗೂ ಆಕೆಯ ಪ್ರಿಯಕರ ರಾಮಾ ರಾಣಗೆ ಪ್ರಕರಣದ ಆರೋಪಿಗಳೆಂದು ಪೊಲೀಸರು ಗುರುತಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೆ.23 ‘ಭೀಮ ಸಂಕಲ್ಪ ದಿನ’: ಡಾ ಬಿ ಆರ್...

1917ರ ಸೆಪ್ಟೆಂಬರ್ 23ರಂದು ವಡೋದರದ ಆಲದ ಮರದ ಕೆಳಗೆ ಕುಳಿತಿದ್ದ ಯುವ ಅಂಬೇಡ್ಕರ್ ಅವರ ಬಳಿ ಅಧಿಕಾರವಿರಲಿಲ್ಲ, ದೊಡ್ಡ ಸಂಘಟನೆಯಿರಲಿಲ್ಲ. ಆದರೆ ಅನ್ಯಾಯವನ್ನು ಒಪ್ಪಿಕೊಳ್ಳದ ಮನಸ್ಸು ಮತ್ತು ಸಮಾಜವನ್ನು ಬದಲಿಸಬೇಕೆಂಬ ದೃಢ ಸಂಕಲ್ಪವಿತ್ತು....

ಸೌಜನ್ಯ ಪ್ರಕರಣ: ಪ್ರಭಾವಿಗಳ ಜೊತೆ ಲಜ್ಜೆ ಬಿಟ್ಟು ಹೆಜ್ಜೆ...

ತನಿಖಾಧಿಕಾರಿಗಳು ಹಣದ ಆಮಿಷಕ್ಕೆ ಒಳಗಾಗಿದ್ದರೇ ಅಥವಾ ಬಲಾಢ್ಯರ ಒತ್ತಡಕ್ಕೆ ಮಣಿದು ಸಾಕ್ಷ್ಯ ನಾಶ ಮಾಡಿ ಅಪರಾಧಿಗಳ ರಕ್ಷಣೆಗೆ ನಿಂತರೇ ಎಂಬ ಅನುಮಾನ ಸಾಮಾನ್ಯ ಜನರಿಗೂ ಬರುತ್ತಿರುವಾಗ ಕರ್ನಾಟಕದ ಬಹುತೇಕ ಸುದ್ದಿ ಮಾಧ್ಯಮಗಳು ಈ...

ಉತ್ತರ ಪ್ರದೇಶ | ಅಖಿಲೇಶ್ ‘ಧರ್ಮ ರಕ್ಷಣೆ’ಯ ಯುದ್ಧ...

ಉತ್ತರ ಪ್ರದೇಶದ ಯುವಜನತೆಯ (Gen Z) ಅಸಮಾಧಾನ, ನಿರುದ್ಯೋಗ ಸಮಸ್ಯೆ ಮತ್ತು ಬದಲಾಗುತ್ತಿರುವ ಜಾತಿ ಸಮೀಕರಣಗಳು ತಮಗೆ ಪೂರಕವಾಗಿವೆ ಎಂಬುದನ್ನು ಅಖಿಲೇಶ್ ಯಾದವ್ ಅರಿತಿದ್ದಾರೆ. ತಮ್ಮ ಪಕ್ಷ ಕೇವಲ "ಮುಸ್ಲಿಂ ಮತ್ತು ಯಾದವರ...

ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ರಾಘು ಗಾವಡೆ ಅವರನ್ನು ಹೊಲಕ್ಕೆ ಕರೆಯಿಸಿಕೊಂಡು, ಬಳಿಕ ಬಂಗಾರಿ ಗಾವಡೆ ಹಾಗೂ ರಾಮಾ ರಾಣಗೆ ಸೇರಿಕೊಂಡು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಕೊಲೆ ಬಳಿಕ ಪತಿ ಕುರಿ ಕಾಯಲು ಬೇರೆ ಜಿಲ್ಲೆಗೆ ತೆರಳಿದ್ದಾರೆ ಎಂದು ಕುಟುಂಬಸ್ಥರನ್ನು ನಂಬಿಸಿದ್ದಳು ಎನ್ನಲಾಗಿದೆ.

ಆದರೆ ರಾಘು ಅವರ ಸಹೋದರ ಲಗಮಣ್ಣ ಅವರಿಗೆ ಈ ವಿಚಾರದಲ್ಲಿ ಅನುಮಾನ ಮೂಡಿದೆ. ಈ ಕುರಿತು ವಿಚಾರಣೆ ನಡೆಸಿದಾಗ ಪ್ರಕರಣದ ಹಲವು ಸತ್ಯಾಂಶಗಳು ಬೆಳಕಿಗೆ ಬಂದಿದ್ದು, ಅವರು ಖಡಕಲಾಟ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ದೂರಿನ ಆಧಾರದ ಮೇಲೆ ತನಿಖೆ ಕೈಗೊಂಡ ಪೊಲೀಸರು ಬಂಗಾರಿ ಗಾವಡೆ ಹಾಗೂ ರಾಮಾ ರಾಣಗೆ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಅಕ್ರಮ ಸಂಬಂಧವೇ ಕೊಲೆಗೆ ಕಾರಣವಾಗಿರಬಹುದು ಎಂಬುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ ಎಂದು ಬೆಳಗಾವಿ ಎಸ್‌ಪಿ ಕೆ. ರಾಮರಾಜನ್ ತಿಳಿಸಿದ್ದಾರೆ.

ಪ್ರಕರಣದ ಹಿನ್ನೆಲೆಯಲ್ಲಿ ಎಸ್‌ಪಿ ಕೆ. ರಾಮರಾಜನ್ ಅವರು ಖಡಕಲಾಟ ಪೊಲೀಸ್ ಠಾಣೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಯರಗಟ್ಟಿ ಬಸ್‌ ನಿಲ್ದಾಣದ ಅವ್ಯವಸ್ಥೆ ಸರಿಪಡಿಸಲು ಸಚಿವ ಸತೀಶ ಜಾರಕಿಹೊಳಿಯವರಿಗೆ ಕರವೇ ಮನವಿ

ಬೆಳಗಾವಿ ಜಿಲ್ಲೆಯ ಯರಗಟ್ಪಿ ಪಟ್ಟಣದ ಬಸ್‌ ನಿಲ್ದಾಣದಲ್ಲಿ ಮೂಲಸೌಕರ್ಯ ಕಲ್ಪಿಸಿ, ಸಾರ್ವಜನಿಕರು...

ಬೆಳಗಾವಿ | ರಾಣಿ ಚೆನ್ನಮ್ಮ ವಿವಿ ಶುಲ್ಕ ಹೆಚ್ಚಳ: ವಿದ್ಯಾರ್ಥಿಗಳ ಮೇಲೆ ಹೆಚ್ಚಿದ ಆರ್ಥಿಕ ಹೊರೆ

ಬೆಳಗಾವಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಕಾಲೇಜು ಪ್ರವೇಶಾತಿ ಹಾಗೂ ಸೆಮಿಸ್ಟರ್...

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10 ದಿನಗಳಲ್ಲಿ ಘೋಷಣೆ – ಶಾಸಕ ಅಶೋಕ ಪಟ್ಟಣ

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ...