ಬೆಳಗಾವಿ | ಪತಿಯ ಕೊಲೆ ಪ್ರಕರಣ: ಜೀವಾವಧಿ ಶಿಕ್ಷಿತ ಮಹಿಳೆಗೆ ಪ್ರಿಯಕರನ ಮದುವೆಯಾಗಲು ಒಂದು ದಿನ ಪೆರೋಲ್

Date:

ಪತಿಯ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಪತ್ನಿ ಹಾಗೂ ಆಕೆಯ ಪ್ರಿಯಕರರಿಗೆ ಮದುವೆಯಾಗಲು ಒಂದು ದಿನದ ಪೆರೋಲ್ ಮಂಜೂರು ಮಾಡಿ ಹೈಕೋರ್ಟ್ ಆದೇಶಿಸಿದೆ.

- Advertisement -

ಬೆಳಗಾವಿ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿರುವ ಮೂಡಲಗಿ ತಾಲೂಕಿನ ಭೈರನಟ್ಟಿಯ ನಿವಾಸಿಗಳಾದ ಶ್ರೀಧ‌ರ್ ಮತ್ತು ಸಿದ್ದವ್ವ ಅಲಿಯಾಸ್ ಪ್ರಿಯಾಂಕಾ ಜಗಮಟ್ಟಿ ಪೆರೋಲ್ ಕೋರಿ ಅರ್ಜಿ ಸಲ್ಲಿಸಿದ್ದರು. ಮದುವೆಯಾಗಲು 90 ದಿನಗಳ ಪೆರೋಲ್ ನೀಡುವಂತೆ ಅವರು ಮನವಿ ಮಾಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜೆ.ಎಸ್. ಕಮಲ್ ಅವರ ಪೀಠ, ಕೈದಿಗಳು ಮದುವೆಯಾಗಲು ಕಾನೂನಿನಲ್ಲಿ ಯಾವುದೇ ನಿಷೇಧವಿಲ್ಲ. ಕೇವಲ ನೈತಿಕತೆಯ ಆಧಾರದ ಮೇಲೆ ಅವರ ಕಾನೂನುಬದ್ಧ ಹಕ್ಕನ್ನು ನಿರಾಕರಿಸಲಾಗದು ಎಂದು ಸ್ಪಷ್ಟಪಡಿಸಿತು.

ಕೈದಿಗಳು ಕುಟುಂಬ ಹಾಗೂ ಸಾಮಾಜಿಕ ಸಂಬಂಧಗಳನ್ನು ಕಾಪಾಡಿಕೊಳ್ಳಲು ಪೆರೋಲ್ ನೀಡುವುದು ಅಪರಾಧಿಗಳ ಸುಧಾರಣೆ ಮತ್ತು ಪುನರ್ವಸತಿಯ ಪ್ರಮುಖ ಭಾಗವಾಗಿದೆ. ಜೈಲಿನಲ್ಲಿ ಅರ್ಜಿದಾರರ ನಡವಳಿಕೆ ಬಗ್ಗೆ ಯಾವುದೇ ಪ್ರತಿಕೂಲ ವರದಿ ಇಲ್ಲದ ಹಿನ್ನೆಲೆಯಲ್ಲಿ ಮದುವೆಯಾಗಲು ಒಂದು ದಿನದ ಪೆರೋಲ್ ನೀಡಲಾಗುತ್ತಿದೆ ಎಂದು ನ್ಯಾಯಪೀಠ ತಿಳಿಸಿದೆ.

ಬೆಳಗ್ಗೆ 10ರಿಂದ ಸಂಜೆ 5ರವರೆಗೆ

ಮದುವೆ ನಿಗದಿಪಡಿಸುವ ದಿನ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಮಾತ್ರ ಪೆರೋಲ್ ನೀಡಬೇಕು. ಮದುವೆ ಸಮಾರಂಭದ ವೇಳೆ ಜೈರ್ಲ ಸೂಕ್ತ ಪೊಲೀಸ್‌ ಸಿಬ್ಬಂದಿಯಿಂದ ಭದ್ರತೆ ಒದಗಿಸಬೇಕು. ಸಂಜೆ 5 ಗಂಟೆಯೊಳಗೆ ಇಬ್ಬರೂ ಬೆಳಗಾವಿ ಕಾರಾಗೃಹಕ್ಕೆ ಮರಳಬೇಕು ಎಂದು ನ್ಯಾಯಪೀಠ ಸೂಚಿಸಿದೆ.

ಪತಿಯ ಕೊಲೆ ಪ್ರಕರಣದಲ್ಲಿ ಶಿಕ್ಷೆ

ಶ್ರೀಧ‌ರ್ ಜೊತೆಗೂಡಿ ಸಿದ್ದವ್ವ ತನ್ನ ಪತಿಯನ್ನು ಕೊಲೆ ಮಾಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಇಬ್ಬರಿಗೂ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿತ್ತು. ಸದ್ಯ ಇಬ್ಬರೂ ಬೆಳಗಾವಿ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮಾಂಜಾ ದಾರಕ್ಕೆ ಸಿಲುಕಿ ಬೈಕ್ ಸವಾರ ಸಾವು

ಗಾಳಿಪಟದ ಮಾಂಜಾ ದಾರ ಬೈಕ್‌ ಚಲಾಯಿಸುತ್ತಿದ್ದ ಯುವಕನ ಕೊರಳಿಗೆ ಸಿಲುಕಿ ಸ್ಥಳದಲ್ಲೇ...

ಬೆಳಗಾವಿ | ಇನ್‌ಸ್ಟಾಗ್ರಾಂ ಹನಿಟ್ರ್ಯಾಪ್ ಮೂಲಕ ಯುವಕನ ಕೊಲೆ: ನಾಲ್ವರ ಬಂಧನ

ಕಾಣೆಯಾಗಿದ್ದ ಯುವಕನೊಬ್ಬನ ಕೊಲೆ ಪ್ರಕರಣಕ್ಕೆ ಭಾರೀ ತಿರುವು ಸಿಕ್ಕಿದ್ದು, ಹಳೆ ಹಣಕಾಸಿನ...

ಬೆಳಗಾವಿ | ಮತಕಳ್ಳತನ ಆರೋಪಕ್ಕೆ ಸಾಕ್ಷ್ಯವಿದ್ದರೆ ನ್ಯಾಯಾಲಯಕ್ಕೆ ಹೋಗಲಿ: ಜಗದೀಶ್ ಶೆಟ್ಟರ್

ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರಿಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು...

ವಿಟಿಯು ವಾರ್ಷಿಕ ಘಟಿಕೋತ್ಸವ: ಉತ್ತರ ಕನ್ನಡದ ಪ್ರತಿಭೆಗಳಿಗೆ ರಾಜ್ಯಮಟ್ಟದ ಗರಿ

ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ವಾರ್ಷಿಕ ಘಟಿಕೋತ್ಸವದಲ್ಲಿ ಉತ್ತರ ಕನ್ನಡ ಜಿಲ್ಲೆಯ...