ಬೆಳಗಾವಿ : ನಾನು ಮುಖ್ಯಮಂತ್ರಿ ಆಗುವ ಅವಕಾಶವಿದೆ : ಶಾಸಕ ಆಗ್ರಹ

Date:

ಬೆಳಗಾವಿ ಜಿಲ್ಲೆಯ ಕಾಗವಾಡ ಶಾಸಕ ಹಾಗೂ ವಾಕರಸಾ ಸಂಸ್ಥೆಯ ಅಧ್ಯಕ್ಷ ಭರಮಗೌಡ (ರಾಜು) ಕಾಗೆ ಅವರು ಸಚಿವ ಸ್ಥಾನ ಯಾಕೆ? ಮುಖ್ಯ ಮಂತ್ರಿ ಆಗುವದಕ್ಕೂ ಅವಕಾಶ ಸಿಗಬೇಕೆಂದು ಆಗ್ರಹಿಸಿದ್ದಾರೆ.

- Advertisement -

ಸೋಮವಾರ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಾನು ಐದು ಬಾರಿ ಶಾಸಕನಾಗಿದ್ದರೂ ಇಂದಿಗೂ ಸಚಿವ ಸ್ಥಾನ ಸಿಗಲಿಲ್ಲ. ನನ್ನಿಗಿಂತ ಕಿರಿಯರಾದ ಕೃಷ್ಣ ಬೈರೇಗೌಡ,ಫ ಪ್ರಿಯಾಂಕ್ ಖರ್ಗೆ, ದಿನೇಶ್ ಗುಂಡೂರಾವ್ ಸಚಿವರಾಗಿದ್ದಾರೆ. ಅವರಿಗೆ ಸಮರ್ಥವಾಗಿ ಕೆಲಸ ಮಾಡುವ ಸಾಮರ್ಥ್ಯ ಇದ್ದಂತೆ, ನಾನೂ ಅದಕ್ಕಿಂತ ಕಡಿಮೆ ಇಲ್ಲ. ಸಚಿವ ಸ್ಥಾನ ನೀಡಿದರೆ ಉತ್ತಮ ಕೆಲಸ ಮಾಡಿ ತೋರಿಸುತ್ತೇನೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಅವರು ಮುಂದುವರೆದು, ಉತ್ತರ ಕರ್ನಾಟಕದ ಅಭಿವೃದ್ಧಿ ವಿಷಯದಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. “ಕಲ್ಯಾಣ ಕರ್ನಾಟಕ ಭಾಗದ ಪ್ರತಿಯೊಬ್ಬ ಶಾಸಕರಿಗೂ 500 ಕೋಟಿ ರೂ. ಅನುದಾನ ಸಿಗುತ್ತಿದೆ. ಆದರೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ, ಅಥಣಿ ಹೊರತುಪಡಿಸಿ ಉತ್ತರ ಕರ್ನಾಟಕದ ಹಳ್ಳಿಗಳು ಸಾಕಷ್ಟು ಹಿಂದುಳಿದಿವೆ. ಹಾಗಾಗಿ ನಮ್ಮ ಭಾಗಕ್ಕೂ ಸರ್ಕಾರದಿಂದ ವಿಶೇಷ ಅನುದಾನ ನೀಡಬೇಕು” ಎಂದು ಬೇಡಿಕೊಂಡರು.

ಇದೇ ವೇಳೆ, ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಬೇಡಿಕೆಗೆ ಸಹಮತ ವ್ಯಕ್ತಪಡಿಸಿದ ಅವರು, “ಅಭಿವೃದ್ಧಿಯಲ್ಲಿ ಹಿಂದುಳಿದಿರುವುದರಿಂದ ಪ್ರತ್ಯೇಕ ರಾಜ್ಯ ಕೇಳುವುದರಲ್ಲಿ ತಪ್ಪೇನಿಲ್ಲ. ನಾನು ಕೂಡ ಈ ಬೇಡಿಕೆಗೆ ಸಹಮತಿಯಾಗಿದ್ದೇನೆ” ಎಂದು ಸ್ಪಷ್ಟಪಡಿಸಿದರು.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | 400 ಲೀಟರ್ ಗೋವಾ ಮದ್ಯ ಸಾಗಾಟ: ಇಬ್ಬರ ಬಂಧನ

ಬೆಳಗಾವಿ ಜಿಲ್ಲೆಯ ಖಾನಾಪೂರ ಕರ್ನಾಟಕ-ಗೋವಾ ಗಡಿಯ ಕಣಕುಂಬಿ ಬಳಿ ಗೂಡ್ಸ್‌ ವಾಹನದಲ್ಲಿ...

ಬೆಳಗಾವಿ | ಹಾಡಹಗಲೇ ಗ್ರಾಮದಲ್ಲಿ ಚಿರತೆ ರಾಜಾರೋಷ ಓಡಾಟ!

ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನ ಗೋಲಿಹಳ್ಳಿ ಅರಣ್ಯ ವ್ಯಾಪ್ತಿಗೆ ಒಳಪಡುವ ಗೋಲಿಹಳ್ಳಿ...

ಬೆಳಗಾವಿ | ಇಡಿ ದಾಳಿ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ: ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ

ಲೋಕೋಪಯೋಗಿ ಇಲಾಖೆ ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ...

ಬೆಳಗಾವಿ | ಸತೀಶ್ ಜಾರಕಿಹೊಳಿ ಆಪ್ತರ ಮನೆಗಳ ಮೇಲೆ ED ದಾಳಿ

ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಸಂಬಂಧಿಸಿದ ಸುಮಾರು 18...