ಬೆಳಗಾವಿ | ಮತಕಳ್ಳತನ ಆರೋಪಕ್ಕೆ ಸಾಕ್ಷ್ಯವಿದ್ದರೆ ನ್ಯಾಯಾಲಯಕ್ಕೆ ಹೋಗಲಿ: ಜಗದೀಶ್ ಶೆಟ್ಟರ್

Date:

ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರಿಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಲು ಯಾವುದೇ ವಿಷಯ ಇಲ್ಲ. ಹೀಗಾಗಿ ‘ಮತಕಳ್ಳತನ’ದ ಆರೋಪದ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ದುರ್ಬಲಗೊಳಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಸಂಸದ ಜಗದೀಶ್ ಶೆಟ್ಟ‌ರ್ ಆರೋಪಿಸಿದರು.

- Advertisement -

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮತಕಳ್ಳತನದ ಆರೋಪ ಹಾಗೂ ಕೇಂದ್ರ ಚುನಾವಣಾ ಆಯೋಗವನ್ನು ಕಳಪೆಯಾಗಿ ಬಿಂಬಿಸುವ ಪ್ರಯತ್ನಗಳು ಕೇಂದ್ರ ಸರ್ಕಾರಕ್ಕೆ ಮುಜುಗರ ಉಂಟುಮಾಡುವ ಉದ್ದೇಶ ಹೊಂದಿವೆ ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

ಜಾಗತಿಕ ಬಿಕ್ಕಟ್ಟಿನ ನೆಪ, ಮರೆಯಾದ ದೇಶದ ಹಿತ: ಜೈಶಂಕರ್...

ಬೆಲೆ ಏರಿಕೆಯ ಬೇಗೆಯಲ್ಲಿ ಜನಸಾಮಾನ್ಯರು ನರಳುತ್ತಿದ್ದರೆ, ಗದ್ದೆಯಲ್ಲಿ ರೈತ ರಸಗೊಬ್ಬರಕ್ಕಾಗಿ ಕಣ್ಣೀರು ಸುರಿಸುತ್ತಿದ್ದಾನೆ. ಆದರೆ, ಇದಕ್ಕೆ ಸ್ಪಂದಿಸಬೇಕಾದ ಮೋದಿ ಸರ್ಕಾರ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಮೂಲಕ ಜಾಗತಿಕ ವೇದಿಕೆಗಳಲ್ಲಿ ವಿದೇಶಿ ಯುದ್ಧಗಳತ್ತ...

ರಾಹುಲ್ ಗಾಂಧಿ ಮಾಡಿರುವ ಆರೋಪಗಳಿಗೆ ಯಾವುದೇ ಸಾಕ್ಷ್ಯ ಒದಗಿಸಿಲ್ಲ. ಆರೋಪಗಳಿಗೆ ಪುರಾವೆಗಳಿದ್ದರೆ ನ್ಯಾಯಾಲಯದಲ್ಲಿ ದೂರು ದಾಖಲಿಸಲಿ ಎಂದು ಸವಾಲು ಹಾಕಿದರು.

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ವೇಳೆ ನಕಲಿ, ಮೃತಪಟ್ಟ ಹಾಗೂ ಪುನರಾವರ್ತಿತ ಹೆಸರುಗಳನ್ನು ತೆಗೆದುಹಾಕಲಾಗಿದೆ. ಇದನ್ನೇ ನೆಪ ಮಾಡಿಕೊಂಡು ಚುನಾವಣಾ ಆಯೋಗವನ್ನು ಗುರಿಯಾಗಿಸಲಾಗುತ್ತಿದೆ ಎಂದು ಆರೋಪಿಸಿದರು.

ಯಾವುದೇ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಮತಕಳ್ಳತನವಾಗಿದೆ ಎಂದು ಆರೋಪಿಸುವ ಕಾಂಗ್ರೆಸ್, ಇವಿಎಂ ಬಗ್ಗೆಯೂ ಅನುಮಾನ ವ್ಯಕ್ತಪಡಿಸುತ್ತದೆ. ಆದರೆ ಬಿಜೆಪಿ ಸೋತಾಗ ಮಾತ್ರ ಚುನಾವಣೆ ಪಾರದರ್ಶಕವಾಗಿದೆ ಎನ್ನುತ್ತಾರೆ. ಇದು ಯಾವ ನ್ಯಾಯ ಎಂದು ಶೆಟ್ಟ‌ರ್ ಪ್ರಶ್ನಿಸಿದರು.

ಮಾಜಿ ಶಾಸಕ ಸಂಜಯ ಪಾಟೀಲ, ಗೀತಾ ಸುತಾರ, ಎಂ.ಬಿ. ಝಿರಲಿ ಸೇರಿದಂತೆ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ ನಗರದಲ್ಲಿ ನಾಳೆ ಸಕ್ಕರೆ ಕಾರ್ಖಾನೆ ಕಾರ್ಮಿಕರ ರಾಜ್ಯಮಟ್ಟದ ಬೃಹತ್‌ ಸಮಾವೇಶ

ಸಕ್ಕರೆ ಕಾರ್ಖಾನೆ ಕಾರ್ಮಿಕರ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಕರ್ನಾಟಕ ಯುನೈಟೆಡ್...

ಬೆಳಗಾವಿ | ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಆರೋಪ: ಚನ್ನರಾಜ ಹಟ್ಟಿಹೊಳಿ ಸ್ಪಷ್ಟನೆ

ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪಕ್ಕೆ ವಿಧಾನ ಪರಿಷತ್...