ಬೆಳಗಾವಿ | ರೈತರ ಬೇಡಿಕೆ ಈಡೇರದಿದ್ದರೆ ಹೋರಾಟದ ಸ್ವರೂಪ ಬದಲು: ಚೂನಪ್ಪ ಪೂಜಾರಿ

Date:

ಕಬ್ಬಿಗೆ ಸೂಕ್ತ ದರ ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪಾದಯಾತ್ರೆ ನಡೆಸುತ್ತಿರುವ ರೈತರು, ಸರ್ಕಾರಗಳು ತಕ್ಷಣ ಸ್ಪಂದಿಸದಿದ್ದರೆ ಹೋರಾಟದ ಸ್ವರೂಪ ಬದಲಿಸುವ ಎಚ್ಚರಿಕೆಯನ್ನು ರೈತ ಸಂಘಟನೆಯ ರಾಜ್ಯಾಧ್ಯಕ್ಷ ಚೂನಪ್ಪ ಪೂಜೇರಿ ಬೆಳಗಾವಿ ನಗರದಲ್ಲಿ ಎಚ್ಚರಿಕೆ ನೀಡಿದ್ದಾರೆ.

- Advertisement -

ಈ ಕುರಿತು ರೈತ ಮುಖಂಡ ಚೂನಪ್ಪ ಪೂಜಾರಿ ಮಾತನಾಡಿ, ರೈತರು ಶಾಂತಿಯುತವಾಗಿ ಚಳವಳಿ ನಡೆಸುತ್ತಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ಅವರು ತಕ್ಷಣ ಸಕ್ಕರೆ ಕಾರ್ಖಾನೆಗಳ ಮಾಲೀಕರ ಸಭೆ ಕರೆದು ಸಮಸ್ಯೆಗೆ ಪರಿಹಾರ ಕಲ್ಪಿಸಬೇಕು. ರಾಜ್ಯ ಸರ್ಕಾರವು ಪ್ರತಿ ಟನ್ ಕಬ್ಬಿಗೆ ಹೆಚ್ಚುವರಿಯಾಗಿ ₹1,000 ನೀಡಬೇಕು. ರೈತರ ಪಂಪ್‌ಸೆಟ್‌ಗಳಿಗೆ ಪ್ರತಿದಿನ ಏಳು ಗಂಟೆಗಳ ಕಾಲ ಕಡ್ಡಾಯವಾಗಿ ವಿದ್ಯುತ್‌ ಪೂರೈಸಬೇಕು ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

​ಮೋದಿ-ಶಾ ಅಸಲಿ ಮುಖ ಅನಾವರಣ: ಅಂಕಿತಾ ಭಂಡಾರಿ ಕೊಲೆ...

ವೇದಿಕೆಗಳಲ್ಲಿ ‘ಬೇಟಿ ಬಚಾವೋ’ ಎಂದು ಭಾಷಣ ಬಿಗಿಯುವ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು, ಹಾಡಹಗಲೇ ಕೊಲೆಯಾದ ಬಡ ಯುವತಿಯ ಸಾವಿನ ಸುತ್ತ ಕಳಂಕದ ಹುತ್ತ ಹೊತ್ತಿರುವ...

ನಿದ್ರೆಯಲ್ಲೂ ಮಿದುಳಿಗೆ ಮಸಾಜ್‌! ಮಾತ್ರೆಯಿಲ್ಲದೆ ಗಾಢ ನಿದ್ರೆ ತರಬಲ್ಲದೇ...

ಒತ್ತಡದ ಬದುಕಿನಲ್ಲಿ ನೆಮ್ಮದಿಯ ನಿದ್ರೆ ಎನ್ನುವುದೇ ಹಲವರ ಕನಸು. ನಿದ್ರೆಗಾಗಿ ಮಾತ್ರೆಗಳ ಮೊರೆ ಹೋಗುವವರ ಸಂಖ್ಯೆಯೂ ಕಡಿಮೆಯಿಲ್ಲ. ಇಂತಹವರ ಸಮಸ್ಯೆಗೆ ಪರ್ಯಾಯವೊಂದು ಸಿಕ್ಕರೆ ಹೇಗಿರಬಹುದು? ಮೆದುಳಿಗೆ ಅಲ್ಟ್ರಾಸೌಂಡ್‌ ತರಂಗಗಳ ಮೂಲಕ ಪ್ರಚೋದನೆ ನೀಡಿ...

ಸಾರ್ವಜನಿಕ ಸಭ್ಯತೆ ಮತ್ತು ಹೆಣ್ಣುಮಕ್ಕಳು ಮಾಡಿಕೊಳ್ಳುವ ಲೆಕ್ಕಾಚಾರಗಳು

ಫೀಲ್ಡ್‌ಗೆ ಇಳಿದು ಕೆಲಸ ಮಾಡುವಾಗ ಮಹಿಳಾ ಪತ್ರಕರ್ತೆಯರು ಎದುರಿಸುವ ರಿಸ್ಕ್ ಮತ್ತು ವರದಿ ಮಾಡುವ ಜವಾಬ್ದಾರಿ- ಇವೆರಡನ್ನೂ ನಿಭಾಯಿಸಬೇಕಾದಾಗ ಮಾಡಿಕೊಳ್ಳುವ ಲೆಕ್ಕಾಚಾರಗಳ ಬಗೆಗಿನ ಒಂದು ಸ್ವಾನುಭವ. ಕಳೆದ ಕೆಲವು ವಾರಗಳಿಂದ ಭಾರತದಲ್ಲಿ ಹೆಣ್ಣುಮಕ್ಕಳ ಮೇಲೆ...

ಎಫ್‌ಆರ್‌ಪಿ (ನ್ಯಾಯಸಮ್ಮತ ಮತ್ತು ಲಾಭದಾಯಕ ಬೆಲೆ) ಹಾಗೂ ಎಂಎಸ್‌ಪಿ ಹೆಚ್ಚಳ ಮತ್ತು ಎಥೆನಾಲ್ ಖರೀದಿಗೆ ಸಂಬಂಧಿಸಿದ ಬೇಡಿಕೆಗಳನ್ನು ಕೇಂದ್ರ ಸರ್ಕಾರ ಈಡೇರಿಸಬೇಕು. ರೈತರ ನ್ಯಾಯಯುತ ಬೇಡಿಕೆಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಕ್ಷಣ ಸ್ಪಂದಿಸಬೇಕು. ದಿನಗಳು ಕಳೆದಂತೆ ಪ್ರತಿಭಟನೆಯ ಸ್ವರೂಪ ಬದಲಾಗಲಿದ್ದು, ಸರ್ಕಾರಗಳು ಎಚ್ಚರಿಕೆ ವಹಿಸಬೇಕು ಎಂದು ಹೇಳಿದರು.

ಕಬ್ಬು ಬೆಳೆಗಾರರು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಪಾದಯಾತ್ರೆ ಮುಂದುವರಿಸಿದ್ದು, ರೈತರ ಹೋರಾಟಕ್ಕೆ ನ್ಯಾಯ ಸಿಗುವವರೆಗೆ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂಬ ಎಚ್ಚರಿಕೆಯನ್ನು ಸರ್ಕಾರಗಳಿಗೆ ನೀಡಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗ್ರಾಮೀಣ ರಾಜಕಾರಣದಲ್ಲಿ ಮಹಿಳಾ ಮೀಸಲಾತಿ ಹೆಸರಿಗಷ್ಟೇ; ಇಂದಿಗೂ ಅಧಿಕಾರ ಪುರುಷರ ವಶ!

ಗ್ರಾಮೀಣ ರಾಜಕಾರಣದಲ್ಲಿ ಮಹಿಳಾ ಮೀಸಲಾತಿಯ ಮೂಲಕ ಅನೇಕ ಮಹಿಳೆಯರು ಜನಪ್ರತಿನಿಧಿಗಳಾಗಿದ್ದಾರೆ. ಆದರೂ...

ಬೆಳಗಾವಿ | ರಾಜ್ಯೋತ್ಸವದಂದು ಕೌಜಲಗಿ ನೂತನ ತಾಲ್ಲೂಕು ಕೇಂದ್ರ ಘೋಷಿಸಿ

ಬೆಳಗಾವಿ ಜಿಲ್ಲೆಯ ಗೋಕಾಕ ತಾಲ್ಲೂಕಿನ ವ್ಯಾಪ್ತಿಯಲ್ಲಿರುವ ಕೌಜಲಗಿ ಪಟ್ಟಣವನ್ನು ನವೆಂಬ‌ರ್ 1ರ...

ಬೆಳಗಾವಿ | ದುರ್ಗಾ ದೇವಿ ಮೆರವಣಿಗೆಯಲ್ಲಿ ಭೀಕರ ಅಪಘಾತ: ಮೂವರು ಸಾವು, 10ಕ್ಕೂ ಹೆಚ್ಚು ಜನರಿಗೆ ಗಾಯ

ದುರ್ಗಾ ಮಾತಾ ದೌಡ ದೇವಿ ಮೆರವಣಿಗೆಯಲ್ಲಿ ಸಾಗುತ್ತಿದ್ದ ವಾಹನಕ್ಕೆ ಹಿಂಬದಿಯಿಂದ ಬಂದ...

ಬೆಳಗಾವಿ | ಪ್ರಿಡ್ಜನಲ್ಲಿ ಶಾರ್ಟ್ ಸರ್ಕ್ಯೂಟ್: ಮನೆ ಸುಟ್ಟು ಕರಕಲು, ಮಕ್ಕಳ ಚೀರಾಟ ಕೇಳಿ ಬಂದ ಮನೆ ಮಾಲಕಿ

ಬೆಳಗಾವಿ ನಗರದ ಸಹ್ಯಾದ್ರಿ ನಗರದಲ್ಲಿ ಫ್ರಿಡ್ಜ್‌ನಲ್ಲಿ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್‌ ಉಂಟಾಗಿ...