ಬೆಳಗಾವಿ | ಕಬ್ಬು ಬೆಳೆಗಾರರ ​​ಬೇಡಿಕೆ ಈಡೇರದಿದ್ದರೆ ಅ.27ರಂದು ಕರ್ನಾಟಕ ಬಂದ್: ಚೂನಪ್ಪ ಪೂಜಾರಿ

Date:

ಕಬ್ಬು ಬೆಳೆಗಾರರ ಬೇಡಿಕೆಗಳಿಗೆ ಅ.26ರಂದು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಮುಖ್ಯಮಂತ್ರಿ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಸೂಕ್ತ ಸ್ಪಂದನೆ ಸಿಗದಿದ್ದರೆ ಅ.27ರಂದು ಕರ್ನಾಟಕ ಬಂದ್‌ಗೆ ಕರೆ ನೀಡಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಚೂನಪ್ಪ ಪೂಜಾರಿ ಎಚ್ಚರಿಕೆ ನೀಡಿದ್ದಾರೆ.

- Advertisement -

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅ.26ರಂದು ನಡೆಯಲಿರುವ ಸಭೆಯಲ್ಲಿ ರೈತರ ಪ್ರಮುಖ ಬೇಡಿಕೆಗಳನ್ನು ಸರ್ಕಾರದ ಮುಂದಿಡಲಾಗುವುದು. ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ರಾಜ್ಯಾದ್ಯಂತ ಹೋರಾಟ ತೀವ್ರಗೊಳಿಸಲಾಗುವುದು ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

ರಾಜ್ಯ ಸರ್ಕಾರ ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ₹1,000 ಸಕ್ಕರೆ ಕಾರ್ಖಾನೆಗಳಿಂದ ಪ್ರತಿ ಟನ್ ಕಬ್ಬಿಗೆ ಕನಿಷ್ಠ ₹4,500 ದರ ಕೊಡಿಸಬೇಕು. ಕಾರ್ಖಾನೆಗಳಲ್ಲಿ ಕಬ್ಬಿನ ತೂಕ ಮಾಡುವ ಸಂದರ್ಭದಲ್ಲಿ ನಡೆಯುತ್ತಿದೆ ಎನ್ನಲಾದ ಮೋಸವನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.

Advertisements

ಕೇಂದ್ರ ಸರ್ಕಾರ ಸಕ್ಕರೆಯ ಕನಿಷ್ಠ ಮಾರಾಟ ಬೆಲೆಯನ್ನು (ಎಂಎಸ್‌ಪಿ) ಹೆಚ್ಚಿಸಬೇಕು. ಕೇಂದ್ರ ಸಚಿವರು ತಕ್ಷಣ ಸಕ್ಕರೆ ಕಾರ್ಖಾನೆಗಳ ಮಾಲೀಕರ ಸಭೆ ಕರೆದು ರೈತರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು. ಸಕ್ಕರೆ ಕಾರ್ಖಾನೆಗಳಲ್ಲಿ ತೂಕದ ಮೋಸ ತಡೆಗಟ್ಟಲು ₹500 ಕೋಟಿ ಮೀಸಲಿಡಬೇಕು. ಬೆಳಗಾವಿಯ ಸಕ್ಕರೆ ಆಯುಕ್ತರ ಕಚೇರಿಗೆ ಆಯುಕ್ತರನ್ನು ನೇಮಕ ಮಾಡಬೇಕು ಎಂದು ಆಗ್ರಹಿಸಿದರು.

ಸಕ್ಕರೆ ಕಾರ್ಖಾನೆಗಳ ಮಾಲೀಕರ ಸಭೆಯಲ್ಲಿ ಮುಖ್ಯಮಂತ್ರಿ ಗಟ್ಟಿಯಾದ ನಿರ್ಧಾರ ಕೈಗೊಂಡು ಕಬ್ಬು ಬೆಳೆಗಾರರಿಗೆ ನ್ಯಾಯ ಒದಗಿಸಬೇಕು. ರೈತರ ಬೇಡಿಕೆಗಳನ್ನು ನಿರ್ಲಕ್ಷಿಸಿದರೆ ರಾಜ್ಯಾದ್ಯಂತ ಹೋರಾಟ ಅನಿವಾರ್ಯವಾಗಲಿದೆ ಎಂದು ಎಚ್ಚರಿಸಿದರು.

ಅ.25ರಿಂದ ಗುರ್ಲಾಪುರದಲ್ಲಿ ಸಾಂಕೇತಿಕ ಪ್ರತಿಭಟನೆ

ರೈತರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅ.25ರಿಂದ ಗುರ್ಲಾಪುರದಲ್ಲಿ ಸಾಂಕೇತಿಕ ಪ್ರತಿಭಟನೆ ಆರಂಭಿಸಲಾಗುವುದು. ಅ.26ರಂದು ನಡೆಯುವ ಸಭೆಯಲ್ಲಿ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳುವ ವಿಶ್ವಾಸವಿದೆ. ಒಂದು ವೇಳೆ ಬೇಡಿಕೆಗಳು ಈಡೇರದಿದ್ದರೆ ಅ.27ರಂದು ಕರ್ನಾಟಕ ಬಂದ್‌ಗೆ ಕರೆ ನೀಡಲಾಗುವುದು ಎಂದು ಚೂನಪ್ಪ ಪೂಜಾರಿ ಸ್ಪಷ್ಟಪಡಿಸಿದರು.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಜಾತ್ರೆಯ ಪ್ರಸಾದ ಸೇವಿಸಿ 100ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಜೋಡಟ್ಟಿ ಗ್ರಾಮದ ಶೇಲ್ಲೆವ್ವಾ ದೇವಸ್ಥಾನದ ಜಾತ್ರೆಯಲ್ಲಿ...

ಬೆಳಗಾವಿ | ಮಾಹಿತಿ ನೀಡದ ಗ್ರಾಮ ಪಂಚಾಯಿತಿ ಅಧಿಕಾರಿ ಎಂ.ಡಿ. ಬಡಿಗೇರಗೆ ₹30 ಸಾವಿರ ದಂಡ

ಮಾಹಿತಿ ಹಕ್ಕು ಅಧಿನಿಯಮದಡಿ ಕೇಳಿದ ಮಾಹಿತಿಯನ್ನು ನೀಡದ ಪ್ರಕರಣದಲ್ಲಿ ಬೆಳಗಾವಿ ಜಿಲ್ಲೆಯ...

ಬೆಳಗಾವಿ | ಅ.26ರಂದು ಸುವರ್ಣ ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳ ಜತೆ ಕಬ್ಬು ಬೆಳೆಗಾರರ ಸಭೆ

ಬೆಳಗಾವಿ ಜಿಲ್ಲೆಯ ಹತ್ತರಗಿ ಟೋಲ್‌ನಿಂದ ಆರಂಭವಾಗಿದ್ದ ಕಬ್ಬು ಬೆಳೆಗಾರರ ಪಾದಯಾತ್ರೆ ಧಾರವಾಡ...

ಬೆಳಗಾವಿ | ಕಿತ್ತೂರು ರಾಣಿ ಚನ್ನಮ್ಮ ಪ್ರತಿಮೆಯ ಖಡ್ಗ ಸಮೇತ ಬಿದ್ದ ಬಲಗೈ

ಬೆಳಗಾವಿ ಜಿಲ್ಲೆಯ ಕಿತ್ತೂರು ಪಟ್ಟಣದ ರಾಣಿ ಚನ್ನಮ್ಮ ವೃತ್ತದಲ್ಲಿರುವ ವೀರರಾಣಿ ಕಿತ್ತೂರು...