ಪ್ರತಿಭಟನೆ ನಡೆಸುತ್ತಿದ್ದ ವೇಳೆ ಇಬ್ಬರು ವಿದ್ಯಾರ್ಥಿನಿಯರು ಅಸ್ವಸ್ಥರಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಬಸ್ತವಾಡದಲ್ಲಿ ನಡೆದಿದೆ.
ಬಸ್ತವಾಡದಲ್ಲಿ ವಿದ್ಯಾರ್ಥಿಗಳು ಬಸ್‌ಗಳನ್ನು ತಡೆದು ಪ್ರತಿಭಟನೆ ನಡೆಸುತ್ತಿದ್ದರು. ಸರಿಯಾದ ಸಮಯಕ್ಕೆ ಬಸ್‌ಗಳು ಬರುತ್ತಿಲ್ಲ ಮತ್ತು ವಿದ್ಯಾರ್ಥಿಗಳಿದ್ದರೆ ಬಸ್‌ಗಳನ್ನು ನಿಲ್ಲಿಸುತ್ತಿಲ್ಲ, ಇದರಿಂದ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಿದೆ ಎಂದು ಸರ್ಕಾರದ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ವೇಳೆ ಪ್ರತಿಭಟನೆ ನಡೆಸುತ್ತಿದ್ದ ಪ್ರಿಯಾ ಕಾಂಬಳೆ ಹಾಗೂ ಪ್ರಿಯಾ ಹೋಳ್ಕರ್ ಎಂಬ ಇಬ್ಬರು ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದಾರೆ. ತಮಗೆ ಸಮರ್ಪಕ ಬಸ್ ಸೇವೆ ಒದಗಿಸುವಂತೆ ವಿದ್ಯಾರ್ಥಿಗಳು ಬಸ್ ತಡೆದು (ಜ.2) ಪ್ರತಿಭಟನೆ ನಡೆಸುತ್ತಿದ್ದು, ತಮ್ಮ ಸಮಸ್ಯೆ ಆದಷ್ಟು ಬೇಗ ಬಗೆಹರಿಸುವಂತೆ ಸರ್ಕಾರಕ್ಕೆ ಆಗ್ರಿಸುತ್ತಿದ್ದಾರೆ.