ಬೆಳಗಾವಿ | ಪೋಕ್ಸೋ ಪ್ರಕರಣಗಳ ಹೆಚ್ಚಳ: ಮಹಿಳಾ ಆಯೋಗ ಅಧ್ಯಕ್ಷೆ ಕಳವಳ

Date:

ಬೆಳಗಾವಿ ಹಾಗೂ ಅಥಣಿ ತಾಲ್ಲೂಕಿನಲ್ಲಿ ಒಂದೇ ತಿಂಗಳಲ್ಲಿ ಪೋಕ್ಸೋ ಹಾಗೂ ಅಪ್ರಾಪ್ತ ಬಾಲಕಿಯರ ನಾಪತ್ತೆ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ತೀವ್ರ ಕಳವಳ ವ್ಯಕ್ತಪಡಿಸಿದರು.

- Advertisement -

ಅಥಣಿ ಸಾರ್ವಜನಿಕ ತಾಲ್ಲೂಕು ಆಸ್ಪತ್ರೆಗೆ ದಿಢೀ‌ರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣಗಳ ಸಂಪೂರ್ಣ ಮಾಹಿತಿ ಪಡೆಯಲು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳೊಂದಿಗೆ ಸೋಮವಾರ ಬೆಳಗಾವಿಯಲ್ಲಿ ತುರ್ತು ಸಭೆ ನಡೆಸಲಾಗುವುದು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ಅಥಣಿ ತಾಲ್ಲೂಕೊಂದರಲ್ಲೇ ಕಳೆದ ಒಂದು ತಿಂಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೋಕೋ ಪ್ರಕರಣಗಳು ದಾಖಲಾಗಿರುವ ಮಾಹಿತಿ ಲಭಿಸಿದೆ. ಶಾಲೆ-ಕಾಲೇಜುಗಳಿಗೆ ತೆರಳುವ ಅಪ್ರಾಪ್ತ ಬಾಲಕಿಯರು ಪ್ರೀತಿ-ಪ್ರೇಮದ ಹೆಸರಿನಲ್ಲಿ ಮನೆಯಿಂದ ಓಡಿಹೋಗುವ ಪ್ರಕರಣಗಳು ಪೋಕೋ ಅಡಿಬ ದಾಖಲಾಗುತ್ತಿವೆ. ಇದರ ಜತೆಗೆ ನೈಜ ಅಪಹರಣ ಹಾಗೂ ನಾಪತ್ತೆ ಪ್ರಕರಣಗಳೂ ಇರುವ ಸಾಧ್ಯತೆಯಿದೆ ಎಂದರು.

ದಾಖಲಾಗಿರುವ ಪ್ರಕರಣಗಳಲ್ಲಿ ಎಲೋಪಿಂಗ್, ಅಪಹರಣ ಹಾಗೂ ನೈಜ ನಾಪತ್ತೆ ಪ್ರಕರಣಗಳನ್ನು ಪ್ರತ್ಯೇಕವಾಗಿ ಗುರುತಿಸಿ ವರದಿ ನೀಡುವಂತೆ ಪೊಲೀಸರಿಗೆ ಸೂಚಿಸಲಾಗುವುದು ಎಂದು ತಿಳಿಸಿದರು.

ಮಾನವ ಕಳ್ಳಸಾಗಣೆ ಭೀತಿ

ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿರುವ ಅಥಣಿ ತಾಲ್ಲೂಕಿನಲ್ಲಿ ಮಹಿಳೆಯರು ಹಾಗೂ ಬಾಲಕಿಯರು ನಾಪತ್ತೆಯಾಗುವ ಪ್ರಕರಣಗಳಲ್ಲಿ ಮಾನವ ಕಳ್ಳಸಾಗಣೆಯ ಆತಂಕವೂ ಇದೆ. ಇದನ್ನು ತಡೆಯಲು ಪೊಲೀಸ್‌ ಹಾಗೂ ಆಡಳಿತ ವ್ಯವಸ್ಥೆ ಕೈಗೊಂಡಿರುವ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆಯಲಾಗುವುದು ಎಂದು ಹೇಳಿದರು.

ಗದಗ, ಬಾಗಲಕೋಟೆ ಹಾಗೂ ರಾಯಚೂರು ಮಾದರಿಯಲ್ಲಿ ಸ್ಕ್ಯಾನಿಂಗ್‌ ಮೂಲಕ ಹೆಣ್ಣು ಭ್ರೂಣ ಪತ್ತೆಹಚ್ಚಿ ಗರ್ಭಪಾತ ಮಾಡಿಸುತ್ತಿರುವ ಸಾಧ್ಯತೆಯನ್ನೂ ಪರಿಶೀಲಿಸಬೇಕು ಎಂದು ಎಚ್ಚರಿಸಿದರು.

ಬಸ್‌ ವ್ಯವಸ್ಥೆ ಸುಧಾರಣೆಗೆ ಸೂಚನೆ

ಹಿಂದಿನ ಭೇಟಿಯಲ್ಲಿ ಆಸ್ಪತ್ರೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಿತ್ತು. ಇದೀಗ ಎರಡು ಆರ್‌ಒ ಪ್ಲಾಂಟ್‌ಗಳನ್ನು ಅಳವಡಿಸಿರುವುದು ಕಂಡುಬಂದಿದೆ. ಆಂಬುಲೆನ್ಸ್‌ ಸೇವೆಯಲ್ಲಿ ವಿಳಂಬವಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಕಕಮರಿ ಮಠ ಸೇರಿದಂತೆ ಗ್ರಾಮೀಣ ಭಾಗದ ಸಾವಿರಾರು ಹೆಣ್ಣುಮಕ್ಕಳು ಸರಿಯಾದ ಸಮಯಕ್ಕೆ ಬಸ್‌ ಸೌಲಭ್ಯ ದೊರೆಯದೆ ತರಗತಿಗಳಿಗೆ ಗೈರಾಗುತ್ತಿರುವ ದೂರುಗಳಿವೆ. ಈ ಕುರಿತು ಡಿಪೋ ಮ್ಯಾನೇಜ‌ರ್, ಕೆಎಸ್‌ಆರ್‌ಟಿಸಿ ಡಿಸಿ ಹಾಗೂ ಜಿಲ್ಲಾ ಪಂಚಾಯಿತಿ ಸಿಇಒ ಅವರೊಂದಿಗೆ ‘ಮಹಿಳಾ ಸ್ಪಂದನಾ’ ಸಭೆಯಲ್ಲಿ ಚರ್ಚಿಸಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಡಾ. ನಾಗಲಕ್ಷ್ಮಿ ಚೌಧರಿ ಹೇಳಿದರು.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಅ.25ರಂದು ರಾಷ್ಟ್ರಮಟ್ಟದ ಮ್ಯಾರಥಾನ್: ಕ್ರೀಡಾಪಟುಗಳಿಗೆ ಜಿಲ್ಲಾಧಿಕಾರಿ ಆಹ್ವಾನ

ರಾಜ್ಯ ಸರ್ಕಾರದ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವ 'ಸಶಕ್ತ ಕರ್ನಾಟಕ' ಕಾರ್ಯಕ್ರಮದಡಿ...

ಬೆಳಗಾವಿ | ಚೂನಪ್ಪ ಪೂಜೇರಿ, ನಾನು ಸತ್ತರೂ ಒಂದೇ ಗೋರಿಯಲ್ಲಿ ಮಣ್ಣಾಗಬೇಕು: ಶಶಿಕಾಂತ ಗುರೂಜಿ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಹತ್ತರಗಿ...