ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ನ್ಯಾಯಾಧೀಶರ ಮನೆಗೆ ನುಗ್ಗಿ ಕಳ್ಳತನ ನಡೆಸಿ ಪರಾರಿಯಾಗಿದ್ದ ಮಹಾರಾಷ್ಟ್ರ ಮೂಲದ ಮಿರಜ್ನ ಕದಮವಾಡಿಯ ಅರ್ಜುನ ಎಂಬಾತನನ್ನು ಪೋಲಿಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯಿಂದ ₹14.40 ಲಕ್ಷ ಮೌಲ್ಯದ 180 ಗ್ರಾಂ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ. ಅಥಣಿ, ಕಾಗವಾಡ ಮತ್ತು ಐಗಳಿ ಠಾಣೆಯ ಪೊಲೀಸರು ಈ ಕಾರ್ಯಾಚರಣೆಯಲ್ಲಿ ಯಶಸ್ವಿಯಾಗಿದ್ದಾರೆ.
ನ್ಯಾಯಾಧೀಶರ ಮನೆಗೆ ನುಗ್ಗಿ ಕಳ್ಳತನ ನಡೆಸಿದ್ದ ಈತ, ಈ ಹಿಂದೆ ಹಲವಾರು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವ ಸಾಧ್ಯತೆ ಇದ್ದು, ಪೊಲೀಸರು ತನಿಖೆಯನ್ನು ಮುಂದುವರೆಸಿದ್ದಾರೆ.