ಪ್ರಸ್ತುತ ಜಾಗತಿಕ ಪರಿಸ್ಥಿತಿಯಲ್ಲಿ ಐಪಿಎಲ್ ಟಿಕೆಟ್ ವಿಚಾರವನ್ನು ಸದನದಲ್ಲಿ ಚರ್ಚಿಸುವುದು ಅನಗತ್ಯ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಜಂಬಗಿ ಗ್ರಾಮದಲ್ಲಿ ಮಾತನಾಡಿದ ಅವರು, ಮಧ್ಯ ಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಇಂಧನ ಹಾಗೂ ಗ್ಯಾಸ್ ಕೊರತೆ ಉಂಟಾಗುತ್ತಿರುವ ಸಂದರ್ಭದಲ್ಲಿ ಗಂಭೀರ ವಿಷಯಗಳತ್ತ ಹೆಚ್ಚಿನ ಗಮನ ಹರಿಸಬೇಕು ಎಂದು ಅಭಿಪ್ರಾಯಪಟ್ಟರು. ಕದನ ವಿರಾಮವೇ ಸದ್ಯದ ಉತ್ತಮ ಪರಿಹಾರವಾಗಿದ್ದು, ಯುದ್ಧದ ಪರಿಣಾಮಗಳು ವಿಶ್ವದಾದ್ಯಂತ ಕಂಡು ಬರುತ್ತಿವೆ ಎಂದರು.
ಕಾಗೆ-ಸವದಿ ದೋಸ್ತಿಯಲ್ಲಿ ಬಿರುಕು ಮೂಡಿದೆಯೆಂಬ ವದಂತಿಗಳನ್ನು ತಳ್ಳಿಹಾಕಿದ ಅವರು, ಯಾವುದೇ ರೀತಿಯ ಭಿನ್ನಾಭಿಪ್ರಾಯಗಳಿಲ್ಲವೆಂದು ಸ್ಪಷ್ಟಪಡಿಸಿದರು. ಕಾಗೆ ಅವರ ಆರೋಗ್ಯ ಸರಿಯಿಲ್ಲದ ಕಾರಣದಿಂದ ಕೆಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಿಲ್ಲ ಎಂದು ತಿಳಿಸಿದರು. ಕಳೆದ 20 ವರ್ಷಗಳ ಸಂಬಂಧದಲ್ಲಿ ಬಿರುಕು ಮೂಡುವ ಪ್ರಶ್ನೆಯೇ ಇಲ್ಲ ಎಂದರು.

ರಾಜ್ಯದಲ್ಲಿ ನಡೆಯುತ್ತಿರುವ ದಾವಣಗೆರೆ ಹಾಗೂ ಬಾಗಲಕೋಟೆ ಉಪಚುನಾವಣೆ ಕುರಿತು ಮಾತನಾಡಿದ ಸವದಿ, ಕಾಂಗ್ರೆಸ್ ಪಕ್ಷಕ್ಕೆ ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಸೋಮವಾರದಿಂದ ಪ್ರಚಾರ ಕಾರ್ಯದಲ್ಲಿ ಭಾಗವಹಿಸಿ ಅಭ್ಯರ್ಥಿಗಳ ಪರ ಮತಯಾಚನೆ ಮಾಡುವುದಾಗಿ ತಿಳಿಸಿದರು.
ಇದೇ ವೇಳೆ ಅಥಣಿ-ಖಿಳೆಗಾಂವಿ ರಾಜ್ಯ ಹೆದ್ದಾರಿ ಅಭಿವೃದ್ಧಿಗೆ ₹3 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ. ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ ಎಂದು ಹೇಳಿದರು.