ಬೆಳಗಾವಿ | ಬರ ಅಧ್ಯಯನ ಅಧಿಕಾರಿಗಳು ಸಮಸ್ಯೆ ಆಲಿಸುತ್ತಿಲ್ಲವೆಂದು ಆತ್ಮಹತ್ಯೆಗೆ ಯತ್ನಿಸಿದ ರೈತ

Date:

ಬರ ಪ್ರದೇಶಗಳ ಅಧ್ಯಯನಕ್ಕೆ ಬಂದಿದ್ದ ಕೇಂದ್ರ ಸರ್ಕಾರದ ತಂಡವು ನಮ್ಮ ಸಮಸ್ಯೆಗಳನ್ನು ಆಲಿಸಲಿಲ್ಲವೆಂದು ಆರೋಪಿಸಿ ರೈತರೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.

- Advertisement -

ಜಿಲ್ಲೆಯ ಬೈಲಹೊಂಗಲ ತಾಲೂಕಿನ ಕಲಕುಪ್ಪಿ ಗ್ರಾಮದ ರೈತ ಅಪ್ಪಾಸಾಹೇಬ ಲಕ್ಕುಂಡಿ ಎಂಬವರು ಶುಕ್ರವಾರ ಬೆಳಗ್ಗೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವ್ಯವಸ್ಥೆಯ ವೈಫಲ್ಯಕ್ಕೆ 32 ಬೈಗಾ ಕಂದಮ್ಮಗಳ ಬಲಿ: ಬುಡಕಟ್ಟು...

ಕೇಂದ್ರ, ರಾಜ್ಯ ಸರ್ಕಾರಗಳು ಇಂತಹ ಅಳಿದುಳಿಯುತ್ತಿರುವ ಬುಡಕಟ್ಟು ಸಮುದಾಯದ ಕಡೆಗೆ ತಮ್ಮ ಮತ ಬಾಚುವ ಕಣ್ಣು ಮುಚ್ಚಿ ತನ್ಮ ಕರ್ತವ್ಯದ ಕಣ್ಣು ತೆರೆದು ನೋಡುವುದು ಅಗತ್ಯ. ಬೈಗಾ ಸಮುದಾಯದಂತಹ ಅಪರೂಪದ ಬುಡಕಟ್ಟು ಸಂತತಿಯನ್ನು...

ಆದಿವಾಸಿ ಕಲಾವಿದನ ನಿಧನದ 25 ವರ್ಷಗಳ ನಂತರ ₹18...

ಈ ಚಿತ್ರಕಲಾಕೃತಿಯಲ್ಲಿ ಚಿತ್ರಿತವಾಗಿರುವ ನಾಗ, ಭೂಮಿತಾಯಿಯ ಪ್ರತೀಕ. ನಾಗನ ಮೇಲೆ ನಿಂತಿರುವ ವಿಶಾಲ ವೃಕ್ಷ, ಪ್ರಕೃತಿ ಮತ್ತು ಬದುಕಿನ ಸಂಬಂಧದ ಪ್ರತಿಫಲನ. ಗೊಂಡ್ ಆದಿವಾಸಿ ಕಲಾವಿದನ ಚಿತ್ರ ಕಲಾಕೃತಿಯೊಂದು ಆತನ ಮರಣದ 25...

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಕಲಕುಪ್ಪಿಯಲ್ಲಿ ಕೆಲವು ರೈತರೊಂದಿಗೆ ಚರ್ಚಿಸಿದ ಅಧಿಕಾರಿಗಳು, ಸವದತ್ತಿ ತಾಲೂಕಿಗೆ ಹೊರಟಿದ್ದಾರೆ. ಈ ವೇಳೆ, ತಮ್ಮ ಸಮಸ್ಯೆಯನ್ನು ಆಲಿಸಲಿಲ್ಲವೆಂದು ಆರೋಪಿಸಿ ರೈತ ಅಪ್ಪಾಸಾಹೇಬ ಕೀಟನಾಶಕದ ಬಾಟಲಿ ಹಿಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸ್ಥಳದಲ್ಲಿದ್ದ ಪೊಲೀಸರು ಆತನಿಂದ ಕೀಟನಾಶಕದ ಬಾಟಲಿಯನ್ನು ಕಸಿದುಕೊಂಡಿದ್ದಾರೆ.

“ನಾನು 40 ಎಕರೆ ಭೂಮಿಯಲ್ಲಿ ಶೇಂಗಾ, ಹುರಳಿ, ಸೋಯಾಬೀನ್ ಬೆಳೆದಿದ್ದೇ‌ನೆ. ಮಳೆ‌ ಕೊರತೆಯಿಂದ ಬೆಳೆ ಸಂಪೂರ್ಣ ನೆಲಕಚ್ಚಿದೆ. ಆದರೆ, ನಮ್ಮ ಸಂಕಷ್ಟವನ್ನು ಯಾರು ಕೇಳುತ್ತಿಲ್ಲ. ಸರ್ಕಾರ ರೈತರ ನೆರವಿಗೆ ಧಾವಿಸಬೇಕು” ಎಂದು ಆ ರೈತ ಒತ್ತಾಯಿಸಿದ್ದಾರೆ.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ಆರೋಗ್ಯ ಸಹಾಯವಾಣಿ 104.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾರವಾರ | ನಾಗರಮಡಿ ಫಾಲ್ಸ್‌ನಲ್ಲಿ ಪ್ರವಾಸಿಗರು–ಸ್ಥಳೀಯರ ನಡುವೆ ಗಲಾಟೆ; ದೂರು ಪ್ರತಿದೂರು ದಾಖಲು

ಕಾರವಾರ: ತಾಲೂಕಿನ ಚೆಂಡಿಯಾ ಸಮೀಪದ ನಾಗರಮಡಿ ಫಾಲ್ಸ್‌ನಲ್ಲಿ ಬಾಟಲಿ ಎಸೆದ ವಿಚಾರಕ್ಕೆ...

ಬಳ್ಳಾರಿ | ಮತದಾರರ ಹೆಸರು ತೆಗೆದುಹಾಕಲು ಸಂಚು: ಕಾರ್ಪೊರೇಟರ್, ಪಾಲಿಕೆ ಅಧಿಕಾರಿಗಳ ವಿರುದ್ಧ FIR

ಬಳ್ಳಾರಿ ನಗರ ಕ್ಷೇತ್ರದ ಮತದಾರರ ಪಟ್ಟಿಯಿಂದ ಮತದಾರರ ಹೆಸರುಗಳನ್ನು ತೆಗೆದು ಹಾಕಲು...

ಕಲಬುರಗಿ | ಗಾಂಧೀಜಿ ಆದರ್ಶಗಳು ಯುವಕರಿಗೆ ದಾರಿದೀಪ: ಪವನಕುಮಾರ ವಳಕೇರಿ

ಬ್ರಿಟಿಷರ ವಿರುದ್ಧ ಶಾಂತಿ, ಅಹಿಂಸೆ ಹಾಗೂ ತಾಳ್ಮೆಯ ಮಾರ್ಗದಲ್ಲಿ ಹೋರಾಡಿ ದೇಶಕ್ಕೆ...

ಕಲಬುರಗಿ | ರಂಗಭೂಮಿಯಲ್ಲಿ ಅಪ್ರತಿಮ ಕಲಾಸೇವೆ; ಶ್ರೀಧರ ವಗ್ಗಿಗೆ ರಾಜ್ಯಮಟ್ಟದ ‘ಕಲಾ ತಪಸ್ವಿ’ ಪ್ರಶಸ್ತಿ

ಚಿಂಚೋಳಿ ತಾಲ್ಲೂಕಿನ ಕನಕಪುರ ಗ್ರಾಮದ ರಂಗಭೂಮಿ ಕಲಾವಿದ ಶ್ರೀಧರ ವಗ್ಗಿ ಅವರಿಗೆ...