ಬೆಳಗಾವಿ | ₹1,223 ಕೋಟಿ ವೆಚ್ಚದಲ್ಲಿ ಐಟಿ ಪಾರ್ಕ್: ಸಚಿವ ಸತೀಶ ಜಾರಕಿಹೊಳಿ

Date:

ಬೆಳಗಾವಿ ನಗರದಲ್ಲಿ ಐಟಿ ಪಾರ್ಕ್ ನಿರ್ಮಾಣಕ್ಕೆ ಸರ್ಕಾರ ಗ್ರೀನ್‌ ಸಿಗ್ನಲ್‌ ನೀಡಿದ್ದು, ಕಣಬರ್ಗಿ ಸ್ಕಿಮ್-61ರ 24 ಎಕರೆ ಪ್ರದೇಶದಲ್ಲಿ ಏಳು ಟವರ್‌ಗಳನ್ನು ನಿರ್ಮಿಸಲು ಯೋಜನೆ ರೂಪಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

- Advertisement -

ಬುಡಾ ಸಭಾಂಗಣದಲ್ಲಿ ಶನಿವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಸ್ಥಳೀಯವಾಗಿ ಉದ್ಯೋಗಾವಕಾಶಗಳ ಕೊರತೆಯಿಂದ ಬೆಳಗಾವಿಯ ಯುವಕರು ಬೇರೆ ಜಿಲ್ಲೆ ಹಾಗೂ ರಾಜ್ಯಗಳಿಗೆ ತೆರಳುವ ಪರಿಸ್ಥಿತಿ ಇದೆ. ನಗರದಲ್ಲಿಯೇ ಐಟಿ ಹಾಗೂ ಸಂಬಂಧಿತ ಕ್ಷೇತ್ರಗಳಲ್ಲಿ ಉದ್ಯೋಗ ಸೃಷ್ಟಿಸುವ ಉದ್ದೇಶದಿಂದ ಐಟಿ ಪಾರ್ಕ್‌ ನಿರ್ಮಿಸಲಾಗುತ್ತಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಮೂರು ಹಂತಗಳಲ್ಲಿ ಐಟಿ ಪಾರ್ಕ್‌ ನಿರ್ಮಾಣವಾಗಲಿದ್ದು, ಮೊದಲ ಹಂತದಲ್ಲಿ 1.8 ಲಕ್ಷ ಚದರ ಅಡಿ ನಿರ್ಮಾಣಕ್ಕೆ ₹75 ಕೋಟಿ, ಎರಡನೇ ಹಂತದಲ್ಲಿ 14.29 ಲಕ್ಷ ಚದರ ಅಡಿಗೆ ₹600 ಕೋಟಿ ಹಾಗೂ ಮೂರನೇ ಹಂತದಲ್ಲಿ 13.77 ಲಕ್ಷ ಚದರ ಅಡಿಗೆ ₹548 ಕೋಟಿ ವೆಚ್ಚ ಅಂದಾಜಿಸಲಾಗಿದೆ. ಒಟ್ಟು ₹1,223 ಕೋಟಿ ವೆಚ್ಚವಾಗಲಿದೆ.

ಯೋಜನೆಗೆ ಅಗತ್ಯವಿರುವ ಭೂಮಿ, ಮೂಲಸೌಕರ್ಯ ಹಾಗೂ ಇತರ ಸೌಲಭ್ಯಗಳ ಕುರಿತು ಸಮಗ್ರ ರೂಪುರೇಷೆ ಸಿದ್ಧಪಡಿಸಿ ಕಾಮಗಾರಿಗೆ ವೇಗ ನೀಡುವಂತೆ ಬುಡಾ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಭವಿಷ್ಯದ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಮಾಸ್ಟ‌ರ್ ಪ್ಲಾನ್ ರೂಪಿಸುವಂತೆ ಸೂಚಿಸಿದ ಸಚಿವರು, ಪ್ರಮುಖ ವೃತ್ತಗಳನ್ನು ಆಧುನಿಕ ಮಾದರಿಯಲ್ಲಿ ಅಭಿವೃದ್ಧಿಪಡಿಸಿ ಸಂಚಾರ ದಟ್ಟಣೆ ನಿಯಂತ್ರಣ ಹಾಗೂ ನಗರದ ಸೌಂದರ್ಯಕ್ಕೆ ಆದ್ಯತೆ ನೀಡಬೇಕು ಎಂದರು.

ಕುಮಾರಸ್ವಾಮಿ ಲೇಔಟ್‌ನಲ್ಲಿ ₹25 ಕೋಟಿ ವೆಚ್ಚದಲ್ಲಿ 100 ಹಾಸಿಗೆಗಳ ಆಸ್ಪತ್ರೆ, ರಾಮತೀರ್ಥ ನಗರದಲ್ಲಿ ₹7 ಕೋಟಿ ವೆಚ್ಚದಲ್ಲಿ ಕಲ್ಯಾಣ ಮಂಟಪ ಹಾಗೂ ₹3 ಕೋಟಿ ವೆಚ್ಚದಲ್ಲಿ ವಾಣಿಜ್ಯ ಸಂಕೀರ್ಣ ನಿರ್ಮಿಸಲು ಉದ್ದೇಶಿಸಲಾಗಿದೆ.

ನಗರದ ವಿವಿಧ ಭಾಗಗಳಲ್ಲಿ ಮೂರು ಮಹಿಳಾ ಜಿಮ್‌ಗಳಿಗೆ ₹3 ಕೋಟಿ, 10 ಪ್ರಮುಖ ಜಂಕ್ಷನ್‌ಗಳ ಅಭಿವೃದ್ಧಿಗೆ ₹4 ಕೋಟಿ ಹಾಗೂ ಸಹ್ಯಾದ್ರಿ ನಗರ ಮತ್ತು ಮುತ್ಯಾನಟ್ಟಿ ಕೆರೆಗಳ ಅಭಿವೃದ್ಧಿಗೆ ₹11 ಕೋಟಿ ವೆಚ್ಚದ ಯೋಜನೆ ರೂಪಿಸಲಾಗಿದೆ.

ಸಭೆಯಲ್ಲಿ ಶಾಸಕ ಆಸೀಫ್ ಸೇ‌ರ್, ದಕ್ಷಿಣ ಶಾಸಕ ಅಭಯ್ ಪಾಟೀಲ್‌, ಉಪಮೇಯರ್ ಹನುಮಂತ ಕೊಂಗಾಲಿ, ಬುಡಾ ಆಯುಕ್ತ ಶಕೀಲ್‌ ಅಹ್ಮದ್ ಸೇರಿದಂತೆ ಅಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಪ್ರಿಡ್ಜನಲ್ಲಿ ಶಾರ್ಟ್ ಸರ್ಕ್ಯೂಟ್: ಮನೆ ಸುಟ್ಟು ಕರಕಲು, ಮಕ್ಕಳ ಚೀರಾಟ ಕೇಳಿ ಬಂದ ಮನೆ ಮಾಲಕಿ

ಬೆಳಗಾವಿ ನಗರದ ಸಹ್ಯಾದ್ರಿ ನಗರದಲ್ಲಿ ಫ್ರಿಡ್ಜ್‌ನಲ್ಲಿ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್‌ ಉಂಟಾಗಿ...

ಬೆಳಗಾವಿ | ವಿದ್ಯಾರ್ಥಿಗಳು ಬೇಂದ್ರೆ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಿ: ವಿರುಪಾಕ್ಷಪ್ಪ ಮಾಮನಿ

ವಿದ್ಯಾರ್ಥಿಗಳು ಮೊಬೈಲ್‌ನಲ್ಲಿ ಕಾಲಹರಣ ಮಾಡದೆ ಕಾವ್ಯ, ಕಾದಂಬರಿ ಹಾಗೂ ಕಥೆಗಳನ್ನು ಓದುವ...

ಬೆಳಗಾವಿ | ಪ್ರಜ್ವಲ್ ರೇವಣ್ಣ ಹಿಂಡಲಗಾ ಜೈಲು ಸ್ಥಳಾಂತರಕ್ಕೆ ತಾತ್ಕಾಲಿಕ ತಡೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬೆಂಗಳೂರಿನ...