ಬೆಳಗಾವಿ | ಅನಧಿಕೃತ ಕ್ಲಿನಿಕ್‌ಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಧರಣಿ

Date:

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನಲ್ಲಿ ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವ ಆಸ್ಪತ್ರೆಗಳು ಹಾಗೂ ಕ್ಲಿನಿಕ್‌ಗಳ ವಿರುದ್ಧ ತಕ್ಷಣ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಜೈ ಭೀಮ ಯುವ ಜಾಗೃತ ಸೇನೆಯ ವತಿಯಿಂದ ರಾಮದುರ್ಗ ನಗರದ ಸಾರ್ವಜನಿಕ ಆಸ್ಪತ್ರೆಯ ಮುಂಭಾಗದಲ್ಲಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸಲಾಯಿತು.

- Advertisement -

ತಾಲೂಕಿನಲ್ಲಿ ಕೆಪಿಎಂಇ (KPME) ಕಾಯ್ದೆಯಡಿ ನೋಂದಣಿ ಮಾಡಿಕೊಂಡ ಬಳಿಕ ನಿಯಮಗಳನ್ನು ಉಲ್ಲಂಘಿಸಿ ಆಸ್ಪತ್ರೆ ಹಾಗೂ ಕ್ಲಿನಿಕ್‌ಗಳನ್ನು ನಡೆಸುತ್ತಿರುವ ಹಲವು ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ. ಇವುಗಳಲ್ಲಿ ನೂರಾರು ಜನರು ಚಿಕಿತ್ಸೆ ಪಡೆಯುತ್ತಿದ್ದು, ಭವಿಷ್ಯದಲ್ಲಿ ಆರೋಗ್ಯ ಸಮಸ್ಯೆಗಳು ಉಂಟಾದರೆ ಯಾರು ಜವಾಬ್ದಾರರು ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಮೂಡಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಈ ಬಗ್ಗೆ ಹಲವು ಬಾರಿ ತಾಲೂಕು ಆರೋಗ್ಯಾಧಿಕಾರಿಗಳ ಗಮನಕ್ಕೆ ತಂದರೂ ಇದುವರೆಗೆ ಯಾವುದೇ ಪರಿಣಾಮಕಾರಿ ಕಾನೂನು ಕ್ರಮ ಕೈಗೊಳ್ಳಲಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರಾಮದುರ್ಗ ಪಟ್ಟಣ ಸೇರಿದಂತೆ ತಾಲೂಕಿನಲ್ಲಿ ಆಹಾರ ಗುಣಮಟ್ಟ ಹಾಗೂ ಸುರಕ್ಷತೆ ವಿಷಯದಲ್ಲಿ ಗಂಭೀರ ಲೋಪಗಳು ಕಂಡುಬಂದಿವೆ. ಅವಧಿ ಮೀರಿದ ಆಹಾರ ಪದಾರ್ಥಗಳ ಮಾರಾಟ, ಹುಳುಗಳಿಂದ ಕೂಡಿದ ಆಹಾರ ವಸ್ತುಗಳು, ಆರೋಗ್ಯಕ್ಕೆ ಹಾನಿಕಾರಕ ರಾಸಾಯನಿಕಗಳನ್ನು ಬಳಸಿ ಕೇಕ್ ಹಾಗೂ ಇತರೆ ಆಹಾರ ಪದಾರ್ಥಗಳನ್ನು ತಯಾರಿಸಿ ಮಾರಾಟ ಮಾಡುತ್ತಿರುವುದು ವಿಡಿಯೋ ಸಾಕ್ಷ್ಯ ಸಮೇತ ಪತ್ತೆಯಾಗಿದೆ.

ಈ ಕುರಿತು ಜೈ ಭೀಮ ಯುವ ಜಾಗೃತ ಸೇನೆಯಿಂದ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿ ದಾಳಿಗೂ ಮುಂದಾಗಲಾಗಿದೆ. ಆದರೆ ಸಾಕಷ್ಟು ಲೋಪಗಳು ಪತ್ತೆಯಾಗಿದ್ದರೂ ಯಾವುದೇ ಮಳಿಗೆಗಳ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸದೆ ಕೇವಲ ಕಾಟಾಚಾರಕ್ಕಾಗಿ ದಾಳಿ ನಡೆಸಲಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಇದುವರೆಗೆ ಸಂಬಂಧಪಟ್ಟ ಇಲಾಖೆಯಿಂದ ಯಾವುದೇ ಸ್ಪಷ್ಟ ಹಿಂಬರಹವೂ ಲಭ್ಯವಾಗಿಲ್ಲ ಎಂದು ಹೇಳಿದರು.
ಅನಧಿಕೃತ ಆಸ್ಪತ್ರೆಗಳು ಹಾಗೂ ಅಸ್ವಚ್ಛ ಆಹಾರ ಮಾರಾಟದಿಂದ ಸಾರ್ವಜನಿಕರ ಜೀವಕ್ಕೆ ಅಪಾಯ ಎದುರಾಗಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಇಲಾಖೆಗಳು ತಕ್ಷಣ ದಾಳಿ ನಡೆಸಿ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದರು.

ಈ ವೇಳೆ ಅಭಿ ಮುನವಳ್ಳಿ, ವಿರೇಶ ಬಳಿಗೇರ, ವಿನಯ ಚಂದರಗಿ, ಫರ್ವೇಜ್ ಫನಿಬಂದ ಹಾಗೂ ಕರವೇ ಮುಖಂಡರು ಸದಸ್ಯರು ಹಾಗೂ ಜನಸಾಮಾನ್ಯರ ಸಮಿತಿ ಸದಸ್ಯರು ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಆರೋಪ: ಚನ್ನರಾಜ ಹಟ್ಟಿಹೊಳಿ ಸ್ಪಷ್ಟನೆ

ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪಕ್ಕೆ ವಿಧಾನ ಪರಿಷತ್...

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್: 500ಕ್ಕೆ ಹೆಚ್ಚಿಸಲು ಆಗ್ರಹ

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು...