ಬೆಳಗಾವಿ | ಜನಸ್ನೇಹಿ ಸಿಪಿಐ ಬಿ.ಆರ್ ಗಡೇಕರ್‌ ಅವರಿಗೆ ರಾಷ್ಟ್ರಪತಿ ಪದಕ

Date:

ಜನಸ್ನೇಹಿ ಪೊಲೀಸ್‌ ಆಡಳಿತಕ್ಕೆ ಒತ್ತು ನೀಡಿ ಕರ್ತವ್ಯ ನಿರ್ವಹಿಸುತ್ತಿರುವ ಮಾಳಮಾರುತಿ ಪೊಲೀಸ್‌ ಠಾಣೆಯ ಸಿಪಿಐ ಬಿ.ಆ‌ರ್. ಗಡೇಕರ್ ಅವರು ಸ್ವಾತಂತ್ರೋತ್ಸವದ ಅಂಗವಾಗಿ ನೀಡಲಾಗುವ ರಾಷ್ಟ್ರಪತಿ ಶ್ಲಾಘನೀಯ ಸೇವಾ ಪದಕಕ್ಕೆ ಭಾಜನರಾಗಿದ್ದಾರೆ.

- Advertisement -

2005ರಲ್ಲಿ ಪಿಎಸ್‌ಐ ಆಗಿ ಪೊಲೀಸ್ ಇಲಾಖೆಗೆ ಸೇರ್ಪಡೆಯಾದ ಗಡೇಕರ್ ಅವರು ಮಹಾಲಿಂಗಪುರ, ಇಳಕಳ ಹಾಗೂ ಮಾಳಮಾರುತಿ ಠಾಣೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. 2016ರಲ್ಲಿ ಸಿಪಿಐ ಹುದ್ದೆಗೆ ಬಡ್ತಿ ಪಡೆದ ಬಳಿಕ ಸಿಸಿಬಿ ವಿಶೇಷ ಪೊಲೀಸ್ ಠಾಣೆ, ಮಾಳಮಾರುತಿ ಠಾಣೆ ಹಾಗೂ ಸಿಇಎನ್ ಅಪರಾಧ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ಸದ್ಯ ಮಾಳಮಾರುತಿ ಸಿಪಿಐ ಆಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಕೊಲೆ, ದರೋಡೆ, ಮನೆಗಳ್ಳತನ, ಸರಗಳ್ಳತನ, ಮಾದಕ ವಸ್ತು, ಸೈಬ‌ರ್ ವಂಚನೆ ಹಾಗೂ ಡಿಜಿಟಲ್ ಅರೆಸ್ಟ್ ಸೇರಿದಂತೆ ಹಲವು ಗಂಭೀರ ಪ್ರಕರಣಗಳನ್ನು ಯಶಸ್ವಿಯಾಗಿ ಪತ್ತೆಹಚ್ಚಿದ್ದಾರೆ. ಸರಣಿ ಸರಗಳ್ಳತನ ನಡೆಸುತ್ತಿದ್ದ ಇರಾನಿ ಗ್ಯಾಂಗ್ ವಿರುದ್ಧ ಕಾರ್ಯಾಚರಣೆ ನಡೆಸಿ 28 ಪ್ರಕರಣಗಳನ್ನು ಭೇದಿಸಿ 1,049 ಗ್ರಾಂ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.

ಸಿಸಿಬಿಯಲ್ಲಿ ಕರ್ತವ್ಯ ನಿರ್ವಹಿಸುವ ವೇಳೆ 59 ಮನೆಗಳ್ಳತನ ಪ್ರಕರಣಗಳನ್ನು ಪತ್ತೆಹಚ್ಚಿ, 1,516 ಗ್ರಾಂ ಚಿನ್ನ ಹಾಗೂ 3,308 ಗ್ರಾಂ ಬೆಳ್ಳಿ ವಶಪಡಿಸಿಕೊಂಡಿದ್ದರು. ಅಲ್ಲದೆ, ಹಿಂಡಲಗಾ ಜೈಲಿನಲ್ಲಿದ್ದ ಭೂಗತ ರೌಡಿಯನ್ನು ಬಿಡಿಸಿಕೊಳ್ಳಲು ಬಂದಿದ್ದ ಗ್ಯಾಂಗ್‌ನ ಸಂಚನ್ನು ವಿಫಲಗೊಳಿಸಿ ಪಿಸ್ತೂಲ್ ಹಾಗೂ ಜೀವಂತ ಗುಂಡುಗಳನ್ನು ವಶಪಡಿಸಿಕೊಂಡಿದ್ದರು.

ಅಪರಾಧ ನಿಯಂತ್ರಣ, ಕಾನೂನು ಸುವ್ಯವಸ್ಥೆ ಹಾಗೂ ಜನಸ್ನೇಹಿ ಪೊಲೀಸ್‌ ಸೇವೆಯಲ್ಲಿ ಸಲ್ಲಿಸಿರುವ ಗಮನಾರ್ಹ ಸೇವೆಗೆ ಗಡೇಕರ್ ಅವರಿಗೆ ರಾಷ್ಟ್ರಪತಿ ಶ್ಲಾಘನೀಯ ಸೇವಾ ಪದಕ ದೊರೆತಿರುವುದು ಬೆಳಗಾವಿ ನಗರ ಪೊಲೀಸ್‌ ಇಲಾಖೆಗೆ ಹೆಮ್ಮೆಯ ಸಂಗತಿಯಾಗಿದೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಆರೋಪ: ಚನ್ನರಾಜ ಹಟ್ಟಿಹೊಳಿ ಸ್ಪಷ್ಟನೆ

ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪಕ್ಕೆ ವಿಧಾನ ಪರಿಷತ್...

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್: 500ಕ್ಕೆ ಹೆಚ್ಚಿಸಲು ಆಗ್ರಹ

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು...