ಬೆಳಗಾವಿ ಜಿಲ್ಲೆಯ ಚನ್ನಮ್ಮನ ಕಿತ್ತೂರು ಪಟ್ಟಣದ ಮಾನಜ್ಜ ಜ್ಯುವೆಲ್ಲರ್ಸ್ ಅಂಗಡಿಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿತ್ತೂರು ಪೊಲೀಸರು ಹೊರರಾಜ್ಯಗಳ ಐವರು ಆರೋಪಿಗಳನ್ನು ಬಂಧಿಸಿದ್ದಾರೆ.
ರಾಜಸ್ಥಾನದ ನಾರಾ ಸಿಂಗ್, ದಿಲೀಪ್ ಸಿಂಗ್, ಲೋಕೇಶ, ನರೇಂದ್ರ ಪ್ರಭುಜಿ ಹಾಗೂ ಮಧ್ಯಪ್ರದೇಶದ ಅರ್ಜುನ್ ಸಿಂಗ್ ಬಂಧಿತ ಆರೋಪಿಗಳು.
ಬಂಧಿತರಿಂದ 7 ಕೆ.ಜಿ. ಬೆಳ್ಳಿ, ಬೆಳ್ಳಿ ಆಭರಣಗಳು ಹಾಗೂ ಕೃತ್ಯಕ್ಕೆ ಬಳಸಿದ ಕಾರು ಸೇರಿದಂತೆ ₹22 ಲಕ್ಷ ಮೌಲ್ಯದ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.



