ಬೆಳಗಾವಿ ಜಿಲ್ಲೆಯ ಇಂಗಳಿ ಗ್ರಾಮದಲ್ಲಿ ಶ್ರೀರಾಮಸೇನೆ ಕಾರ್ಯಕರ್ತರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಕರ್ತವ್ಯ ಲೋಪದ ಆರೋಪದಡಿ ಅಮಾನತುಗೊಂಡಿರುವ ಪಿಎಸ್ಐ ನಿಖಿಲ್ ಕಾಂಬಳೆ ವಿಚಾರವಾಗಿ ದಲಿತ ಅಧಿಕಾರಿಗೆ ನ್ಯಾಯ ದೊರಕಿಸಿಕೊಡಲಾಗುವುದು ಎಂದು ಸಚಿವ ಸತೀಶ ಜಾರಕಿಹೊಳಿ ತಿಳಿಸಿದ್ದಾರೆ.
ಹುಕ್ಕೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವರು, “ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಗೋಕಾಕ ಜಾತ್ರೆಯ ಸಂದರ್ಭದಲ್ಲಿ ಎಲ್ಲಾ ಪೊಲೀಸರು ಕರ್ತವ್ಯದಲ್ಲಿ ನಿರತರಾಗಿದ್ದರು. ನಿಖಿಲ್ ಕಾಂಬಳೆಯ ಅಮಾನತು ಸಂಬಂಧ ಬೆಳೆವ ಕುಗ್ಗದಂತೆ ನೋಡಿಕೊಳ್ಳಲಾಗುವುದು. ಅಧಿಕಾರಿಗಳ ಜೊತೆ ಎರಡು ದಿನಗಳಲ್ಲಿ ಚರ್ಚೆ ನಡೆಸಿ ಸಮಸ್ಯೆ ಪರಿಹರಿಸಲಾಗುವುದು. ಆತಂಕ ಪಡುವ ಅಗತ್ಯವಿಲ್ಲ. ದಲಿತ ಅಧಿಕಾರಿಗೆ ನ್ಯಾಯ ನೀಡಲಾಗುವುದು,” ಎಂದು ಸ್ಪಷ್ಟಪಡಿಸಿದರು.