ಬೆಳಗಾವಿ | ಬೂದಿಹಾಳ ಸರ್ಕಾರಿ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ

Date:

ಅತ್ಯಂತ ಪ್ರಾಚೀನ ಭಾಷೆಗಳಲ್ಲಿ ಒಂದಾದ ಕನ್ನಡದ ಬಗ್ಗೆ ನಮಗೆಲ್ಲ ಹೆಮ್ಮೆ ಇರಬೇಕು. ವಿದ್ಯಾರ್ಥಿಗಳು ಏಕೀಕರಣದ ಇತಿಹಾಸವನ್ನು ಅರಿತಾಗ ಭಾಷಾಭಿಮಾನ ಇನ್ನಷ್ಟು ಹೆಚ್ಚುತ್ತದೆ ಎಂದು ಬೂದಿಹಾಳ ಸರ್ಕಾರಿ ಪ್ರೌಢಶಾಲೆ ಮುಖ್ಯಶಿಕ್ಷಕ ಎನ್.ಆರ್. ಠಕ್ಕಾಯಿ ಹೇಳಿದ್ದಾರೆ.

- Advertisement -

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಬೂದಿಹಾಳ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ಸಂಭ್ರಮದಿಂದ ಆಚರಿಸಿದ್ದಾರೆ. ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಸಾಹಿತ್ಯ, ಸಂಗೀತ, ಕಲೆ ಮತ್ತು ಸಂಸ್ಕೃತಿಯಲ್ಲಿ ಕನ್ನಡ ಹಾಸುಹೊಕ್ಕಾಗಿದ್ದು ಅದರ ಸಂವರ್ಧನೆಗಾಗಿ ಎಲ್ಲರೂ ಸದಾ ಒಂದಾಗಿರಬೇಕು ಎಂದು ಆಶಯ ವ್ಯಕ್ತಪಡಿಸಿದರು. ಕನ್ನಡ ಅಂಕಿಗಳನ್ನು ಬಳಕೆ ಮಾಡಬೇಕು” ಎಂದು ಅವರು ಕರೆ ನೀಡಿದರು.

ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದ ವಿದ್ಯಾರ್ಥಿಗಳು ಭುವನೇಶ್ವರಿ, ಕಿತ್ತೂರು ಚೆನ್ನಮ್ಮ, ಒನಕೆ ಓಬವ್ವನ ವೇಷ ಧರಿಸಿ ಭಾಗಿಯಾದರು.

ಕನ್ನಡ ನಾಡು ನುಡಿಯ ಬಗ್ಗೆ ಕವನ ವಾಚನ, ಭಾಷಣ, ಗೀತಗಾಯನ, ರಂಗೋಲಿ, ನೃತ್ಯ ಏರ್ಪಡಿಸಲಾಗಿತ್ತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಎಸ್.ಡಿ.ಎಮ್.ಸಿ.‌ ಉಪಾಧ್ಯಕ್ಷರಾದ ವಿನಾಯಕ ಬಡಿಗೇರ, ಸದಸ್ಯರಾದ ಮಹಾಂತೇಶ ಸೊಗಲದ, ರಮೇಶ ಸೂರ್ಯವಂಶಿ, ಗ್ರಾಮ ಪಂಚಾಯತಿ ಸದಸ್ಯ ಮಹಾಂತೇಶ ಹುಣಶೀಕಟ್ಟಿ, ರಾಜಶೇಖರ ದೊಡವಾಡ, ಶಿಕ್ಷಕರಾದ ಜೆ.ಆರ್.ನರಿ, ಪಿ.ಎಸ್ ಗುರುನಗೌಡರ, ಎಸ್.ವಿ.ಬಳಿಗಾರ, ಆರ್.ಸಿ.ಸೊರಟೂರ, ಎಚ್.ವಿ.ಪುರಾಣಿಕ, ವಿ.ಬಿ.ಪಾಟೀಲ, ಎಸ್.ಬಿ.ಹತ್ತರಕಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಲಕ್ಷ್ಮೀ ನಾಗಣ್ಣವರ ಸ್ವಾಗತಿಸಿದರು. ಪೃಥ್ವಿ ಗರಗದ ನಿರೂಪಿಸಿದರು. ಸುನಿತಾ ಚಿಲಮೂರ ವಂದಿಸಿದರು. ಸುಶ್ಮಿತಾ ಸೊಗಲದ ನಿರ್ವಹಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ: ಬಾಲ್ಯವಿವಾಹ, ಪೋಕ್ಸೋ ಮುಕ್ತ ತಾಲ್ಲೂಕು: ಸಾರ್ವಜನಿಕರ ಸಹಕಾರ ಅಗತ್ಯ

ಬಾಗೇಪಲ್ಲಿ: ಬಾಲ್ಯವಿವಾಹ, ಪೋಕ್ಸೋ, ಮಹಿಳೆಯರ ಮತ್ತು ಹೆಣ್ಣುಮಕ್ಕಳ ಸಾಗಾಣಿಕೆ ಮುಕ್ತ ಬಾಗೇಪಲ್ಲಿ...

ಚಿಂತಾಮಣಿ | ನಿಮ್ಮಕಾಯಲಹಳ್ಳಿ ದರ್ಗಾ ಅಭಿವೃದ್ಧಿಗೆ ಶಾಸಕ ಡಾ.ಎಂ.ಸಿ. ಸುಧಾಕರ್ ಅಭಯ:ಕಾಂಪೌಂಡ್,ಪಾರ್ಕಿಂಗ್‌ಗೆ ಭರವಸೆ

ಚಿಂತಾಮಣಿ ತಾಲೂಕಿನ ನಿಮ್ಮಕಾಯಲಹಳ್ಳಿಯ ದರ್ಗಾ ಉರುಸ್ ಪ್ರಯುಕ್ತ ಉನ್ನತ ಶಾಸಕರಾದ ಡಾ.ಎಂ.ಸಿ.ಸುಧಾಕರ್...

ಕೋಲಾರ | ಅಧಿಕಾರಿಗಳ ವಿರುದ್ಧ ದಾಖಲೆಗಳಿದ್ದರೆ ಕಾನೂನು ಹೋರಾಟ ನಡೆಸಲಿ ಮುಖಂಡರ ಅಗ್ರಹ

ಜಿಲ್ಲಾಧಿಕಾರಿ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳ ವಿರುದ್ಧ ಯಾವುದೇ...

ರಂಗಭೂಮಿ ಅಭಿನಯ ಕಲಿಸುವುದಷ್ಟೇ ಅಲ್ಲ, ಬದುಕನ್ನೂ ಕಲಿಸುವ ಶಾಲೆ: ಶ್ರೀನಿವಾಸ ಪಾಲಹಳ್ಳಿ

ರಂಗಭೂಮಿ ಕೇವಲ ಅಭಿನಯ ಕಲಿಸುವ ವೇದಿಕೆಯಲ್ಲ. ಅದು ಬದುಕನ್ನು ಅರ್ಥಮಾಡಿಕೊಳ್ಳುವ, ಮಾನವೀಯ...