ಬೆಳಗಾವಿ | ಯರಗಟ್ಟಿ ಬಸ್‌ ನಿಲ್ದಾಣದ ಅವ್ಯವಸ್ಥೆ ಸರಿಪಡಿಸಲು ಸಚಿವ ಸತೀಶ ಜಾರಕಿಹೊಳಿಯವರಿಗೆ ಕರವೇ ಮನವಿ

Date:

ಬೆಳಗಾವಿ ಜಿಲ್ಲೆಯ ಯರಗಟ್ಪಿ ಪಟ್ಟಣದ ಬಸ್‌ ನಿಲ್ದಾಣದಲ್ಲಿ ಮೂಲಸೌಕರ್ಯ ಕಲ್ಪಿಸಿ, ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳನ್ನು ತಕ್ಷಣ ಪರಿಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಯರಗಟ್ಟಿ ಘಟಕದ ವತಿಯಿಂದ ಸಚಿವ ಸತೀಶ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಲಾಯಿತು.

- Advertisement -

ಯರಗಟ್ಟಿ ಬಸ್‌ ನಿಲ್ದಾಣಕ್ಕೆ ಪ್ರತಿದಿನ ಸಾವಿರಾರು ಸಾರ್ವಜನಿಕರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಹಿರಿಯ ನಾಗರಿಕರು ಆಗಮಿಸುತ್ತಾರೆ. ಆದರೆ ಬಸ್‌ ನಿಲ್ದಾಣದ ಆವರಣದಲ್ಲಿರುವ ಒಳಚರಂಡಿಗಳು ಹದಗೆಟ್ಟಿದ್ದು, ತ್ಯಾಜ್ಯ ನೀರು ಹೊರಹರಿದು ದುರ್ನಾತ ಬೀರುತ್ತಿದೆ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುವುದರ ಜೊತೆಗೆ ರೋಗರುಜಿನಗಳ ಭೀತಿಯೂ ಎದುರಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಯರಗಟ್ಟಿ ಗೋಕಾಕ, ಸವದತ್ತಿ, ರಾಮದುರ್ಗ ಹಾಗೂ ಬೈಲಹೊಂಗಲ ತಾಲೂಕುಗಳಿಗೆ ಪ್ರಮುಖ ಸಂಪರ್ಕ ಕೇಂದ್ರವಾಗಿರುವುದರಿಂದ, ಪಟ್ಟಣದಲ್ಲಿ ಶೀಘ್ರವಾಗಿ ಬಸ್‌ ಘಟಕವನ್ನು ಸ್ಥಾಪಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಇದರ ಜೊತೆಗೆ ಬಸ್ ನಿಲ್ದಾಣದಲ್ಲಿ ಸೂಕ್ತ ಸಿಸಿಟಿವಿ ಹಾಗೂ ಭದ್ರತಾ ವ್ಯವಸ್ಥೆ ಇಲ್ಲದ ಕಾರಣ ಬೈಕ್‌ಗಳು ಹಾಗೂ ಸಾರ್ವಜನಿಕರ ಮೊಬೈಲ್‌ಗಳು ಕಳ್ಳತನವಾಗುತ್ತಿರುವ ದೂರುಗಳಿವೆ. ಹೀಗಾಗಿ ಪ್ರಯಾಣಿಕರ ಸುರಕ್ಷತೆಗಾಗಿ ಸಿಸಿಟಿವಿ ಅಳವಡಿಸಿ, ಅಗತ್ಯ ಭದ್ರತಾ ವ್ಯವಸ್ಥೆ ಕಲ್ಪಿಸಬೇಕು ಎಂದು ಮನವಿ ಮಾಡಲಾಗಿದೆ.

ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ರಫೀಕ ಡಿ.ಕೆ. ಸೇರಿದಂತೆ ಸಂಘಟನೆಯ ಸದಸ್ಯರು ಉಪಸ್ಥಿತರಿದ್ದರು.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಸೋಯಾಬಿನ್ ಬೆಳೆ ಸಮೀಕ್ಷೆ ನಡೆಸಿ: ಶಾಸಕ ಮಹಾಂತೇಶ ಕೌಜಲಗಿ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸೋಯಾಬಿನ್ ಬೆಳೆಯಲಾಗಿದ್ದು, ಮಳೆ...

ಬೆಳಗಾವಿ | ಜೂನ್‌ವರೆಗೆ ಕುಡಿಯುವ ನೀರಿಗೆ ಕೊರತೆಯಾಗದಂತೆ ಕ್ರಮ: ಸಚಿವ ಸತೀಶ ಜಾರಕಿಹೊಳಿ

ಮುಂದಿನ ಜೂನ್‌ವರೆಗೆ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ...

ಮಳೆ ಕೊರತೆ: ಬೆಳಗಾವಿ ಜಿಲ್ಲೆಯ ಬಹುತೇಕ ತಾಲೂಕುಗಳು ಬರಪೀಡಿತ ಪಟ್ಟಿಗೆ?

ಮಳೆ ಕೊರತೆ ಮುಂದುವರಿದರೆ ಬೆಳಗಾವಿ ಜಿಲ್ಲೆಯ ಎರಡುಮೂರುರ ತಾಲೂಕುಗಳನ್ನು ಹೊರತುಪಡಿಸಿ ಬಹುತೇಕ...

ಬೆಳಗಾವಿ | ಜಾನಪದ ಸಂಸ್ಕೃತಿ ಉಳಿಸಲು ಮಹಿಳೆಯರ ಒಗ್ಗಟ್ಟು ಅಗತ್ಯ: ಸಿದ್ದು ಹಂಪಿಹೋಳಿ

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಸಾಲಾಪೂರ ಗ್ರಾಮದಲ್ಲಿ ಗುರ್ಜಿ ಟೀಮ್ ಹಾಗೂ...