ಬೆಳಗಾವಿ : ಲಕ್ಷ್ಮಣ ಸವದಿಗೆ ಮಾನಸಿಕ ಹಿಂಸೆ ನೀಡಲಾಗುತ್ತಿದೆ :ಬಿಡಿಸಿಸಿ ಬ್ಯಾಂಕ್ ವಿಚಾರವಾಗಿ ರಾಜು ಕಾಗೆ ಆಕ್ರೋಶ

Date:

ಅಥಣಿ ಬಿಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ಶಂಕರ್ ನಂದೆಶ್ವರ ಅವರ ವರ್ಗಾವಣೆ ವಿಚಾರ ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಈ ವರ್ಗಾವಣೆ ಪೂರ್ವನಿಯೋಜಿತವಾಗಿದ್ದು, ಶಾಸಕ ಲಕ್ಷ್ಮಣ ಸವದಿಗೆ ಮಾನಸಿಕವಾಗಿ ಕುಗ್ಗಿಸುವ ಉದ್ದೇಶದಿಂದಲೇ ನಡೆದಿದೆ ಎಂದು ಶಾಸಕ ರಾಜು ಕಾಗೆ ಆರೋಪಿಸಿದ್ದಾರೆ.

- Advertisement -

ಅಥಣಿ ಪಿಕೆಪಿಎಸ್ ಸದಸ್ಯರೊಂದಿಗೆ ಮಾತನಾಡಿದ ಸಂದರ್ಭದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, “ಬಿಡಿಸಿಸಿ ಬ್ಯಾಂಕ್‌ನಲ್ಲಿ ಹತ್ತು ಸಾವಿರಕ್ಕೂ ಹೆಚ್ಚು ಸಿಬ್ಬಂದಿ ಇದ್ದರೂ ಅಥಣಿ ಮ್ಯಾನೇಜರ್ ಒಬ್ಬರನ್ನೇ ಯಾಕೆ ವರ್ಗಾವಣೆ ಮಾಡಲಾಗಿದೆ?” ಎಂದು ಕಾಗೆ ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಈ ವರ್ಗಾವಣೆ ಕುರಿತು ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಣ್ಣಸಾಬ್ ಜೊಲ್ಲೆ ನನ್ನ ಗಮನಕ್ಕೆ ತರಬೇಕಾಗಿತ್ತು. ಆದರೆ ಅವರು ಕೇವಲ ರಬ್ಬರ್ ಸ್ಟಾಂಪ್ ಆಗಿದ್ದಾರೆ. ಎಲ್ಲವೂ ನಡೆದಿದ್ದು, ಅದನ್ನು ನಡೆಸುವ ಹೈಕಮಾಂಡ್ ಬೇರೆ ಇದೆ. ಈ ವಿಚಾರ ಶಾಸಕ ಲಕ್ಷ್ಮಣ ಸವದಿಗೂ ಗೊತ್ತು, ನನಗೂ ಗೊತ್ತು, ನಿಮಗೂ ಗೊತ್ತು ಎಂದು ಕಾಗೆ ಅಸಮಾಧಾನ ವ್ಯಕ್ತಪಡಿಸಿದರು.

ಇದೇ ವೇಳೆ, ಅಪೆಕ್ಸ್ ಬ್ಯಾಂಕ್ ನಾಮನಿರ್ದೇಶನ ಬದಲಾವಣೆಗೂ ಈ ಬೆಳವಣಿಗೆಗೂ ಸಂಬಂಧವಿದೆ ಎಂಬ ಪರೋಕ್ಷ ಸೂಚನೆ ನೀಡಿದ ಅವರು, ಸದ್ಯದ ಬಿಡಿಸಿಸಿ ಬ್ಯಾಂಕ್‌ನ ಎಲ್ಲಾ ಬೆಳವಣಿಗೆಗಳು ರಾಜಕೀಯ ತಂತ್ರದ ಭಾಗವೇ ಎಂದು ಜಾರಕಿಹೊಳಿ ಸಹೋದರರ ವಿರುದ್ಧ ಪರೋಕ್ಷವಾಗಿ ಗುಡುಗಿದ್ದಾರೆ.

ಇನ್ನೊಂದೆಡೆ, ಅಥಣಿ ಬಿಡಿಸಿಸಿ ಬ್ಯಾಂಕ್ ವ್ಯವಸ್ಥಾಪಕರ ವರ್ಗಾವಣೆ ವಿಚಾರವಾಗಿ ಶಾಸಕ ರಾಜು ಕಾಗೆ ವಿರುದ್ಧ ಶಾಸಕ ಲಕ್ಷ್ಮಣ ಸವದಿ ಬೆಂಬಲಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನೇರ ರಾಜಕೀಯ ಹೋರಾಟಕ್ಕೆ ಆಗ್ರಹಿಸಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಆರೋಪ: ಚನ್ನರಾಜ ಹಟ್ಟಿಹೊಳಿ ಸ್ಪಷ್ಟನೆ

ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪಕ್ಕೆ ವಿಧಾನ ಪರಿಷತ್...

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್: 500ಕ್ಕೆ ಹೆಚ್ಚಿಸಲು ಆಗ್ರಹ

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು...