ಬೆಳಗಾವಿ | ಜಮೀನು ವಿವಾದ: ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಆರೋಪ

Date:

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹರ್ಲಾಪುರ ಗ್ರಾಮದಲ್ಲಿ ಜಮೀನು ಹಕ್ಕಿಗಾಗಿ ನಡೆದ ಜಗಳದಲ್ಲಿ ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ.

- Advertisement -

4 ಎಕರೆ 19 ಗುಂಟೆ ಜಮೀನಿಗೆ ಸಂಬಂಧಿಸಿದಂತೆ ಕಳೆದ ಕೆಲವು ವರ್ಷಗಳಿಂದ ತಂಟೆ-ತಕರಾರು ನಡೆಯುತ್ತಿದ್ದು, 2025ರ ಫೆಬ್ರುವರಿ 20ರಂದು ಮತ್ತೆ ಗಲಾಟೆ ಉಲ್ಬಣಗೊಂಡಿದೆ. ಈ ವೇಳೆ, ಮಹಿಳೆ ಪೊಲೀಸರಿಗೆ ಕರೆ ಮಾಡಿದರೂ, ಅವರ ಮುಂದೆಯೇ ಹಲ್ಲೆ ನಡೆದಿದೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಕ್ಕಿ ಬೆಲೆ ಏರಿಕೆಯ ಹಿಂದಿನ ಆಟ ಯಾರದ್ದು?: ಕಾರ್ಪೋರೇಟ್...

ಅಕ್ಕಿ ಬೆಲೆ ಏರಿಕೆಯನ್ನು ಕೇವಲ ಭತ್ತದ ಉತ್ಪಾದನೆ ಕುಸಿತದ ಪರಿಣಾಮ ಎಂದು ವ್ಯಾಖ್ಯಾನಿಸುವುದು ಸರಿಯಲ್ಲ. ಏಕೆಂದರೆ ಮಾರುಕಟ್ಟೆಯಲ್ಲಿ ಈಗ ಮಾರಾಟವಾಗುತ್ತಿರುವ ಅಕ್ಕಿ ಬಹುತೇಕ ಹಿಂದಿನ ಬೆಳೆ ವರ್ಷಗಳಲ್ಲಿ ಉತ್ಪಾದನೆಯಾಗಿ ಸಂಗ್ರಹಿಸಲ್ಪಟ್ಟಿರುವ ಅಕ್ಕಿ. ಪ್ರಸಕ್ತ...

ಬಡವರ ನಿವೇಶನಗಳ ಮೇಲೆ ಕೆಎಐಡಿಬಿ ಕರಿ ನೆರಳು: ಸೂರು...

ಮಂಗಳೂರಿನ ಪ್ರವಾಸೋದ್ಯಮಕ್ಕೆ ಹೊಸ ಮೆರುಗನ್ನು ನೀಡಿರುವುದೇ ತಣ್ಣೀರುಬಾವಿ ಸಮುದ್ರ ತೀರ. ಈ ಸಮುದ್ರ ತೀರ ಇತ್ತೀಚಿನ ದಿನಗಳಲ್ಲಿ ತನ್ನ ಸೌಂದರ್ಯದಿಂದ ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತಿದೆ. ವಿಭಿನ್ನ ಶೈಲಿಯ ಮನರಂಜನೆಗೆ ಹೆಸರುವಾಸಿಯಾಗಿರುವ ತಣ್ಣೀರುಬಾವಿ ಬೀಚ್...

‘Quockerwodger’: ಶಶಿ ತರೂರ್ ಸೂಚಿಸಿದ ಹೊಸ ರಾಜಕೀಯ ಪದ!

ಇದು 19ನೇ ಶತಮಾನದ ಇಂಗ್ಲಿಷ್ ಭಾಷೆಯಲ್ಲಿ ಬಳಕೆಯಲ್ಲಿದ್ದ ಅಪರೂಪದ ಪದ. ಮೂಲತಃ ದಾರಗಳ ಮೂಲಕ ನಿಯಂತ್ರಿಸಲ್ಪಡುವ ಮರದ ಗೊಂಬೆಯನ್ನು ಸೂಚಿಸುತ್ತಿತ್ತು. ಗೊಂಬೆಯಾಟದಲ್ಲಿ ಸೂತ್ರಧಾರ ದಾರ ಎಳೆದಂತೆ ಗೊಂಬೆ ಕೈಕಾಲು ಆಡಿಸುತ್ತದೆ. ಗೊಂಬೆ ಚಲಿಸುತ್ತದೆಯೇ...

“15ಕ್ಕೂ ಹೆಚ್ಚು ಜನ ರೈತ ಸಂಘದವರ ಮುಂದಾಳತ್ವದಲ್ಲಿ ಬಂದು ಹಲ್ಲೆ ನಡೆಸಿದರು. ನಾನು ತಕ್ಷಣವೇ ಪೊಲೀಸರಿಗೆ ಕರೆ ಮಾಡಿದೆ. ಆದರೆ, ಅವರು ಸ್ಥಳಕ್ಕೆ ತಲುಪಿದ ಬಳಿಕವೂ ನನ್ನ ಬಟ್ಟೆ ಹರಿದು ಹಲ್ಲೆ ನಡೆಸಿದರು,” ಎಂದು ಸಂತ್ರಸ್ತೆ ಹೇಳಿದ್ದಾರೆ.

“ಅರೆಬೆತ್ತಲೆಯಾಗಿಯೇ ನಾನು ಸವದತ್ತಿ ಪೊಲೀಸ್ ಠಾಣೆಗೆ ಹೋದೆ. ಆದರೆ, ಪೊಲೀಸರು ದೂರು ದಾಖಲಿಸದೆ, ‘ಬೆತ್ತಲೆ ಮಾಡಿ ಹೊಡೆದಿದ್ದಕ್ಕೆ ಸಾಕ್ಷಿ ಕೊಡಿ’ ಎಂದು ಕೇಳಿದರು. ತೀವ್ರ ಪೆಟ್ಟಿನಿಂದ, ನಾನು ಪ್ರಾಥಮಿಕ ಚಿಕಿತ್ಸೆಗೆ ಸವದತ್ತಿ ತಾಲ್ಲೂಕು ಆಸ್ಪತ್ರೆಗೆ ತೆರಳಿ, ನಂತರ ಧಾರವಾಡದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದೆ,” ಎಂದು ಅವರು ದೂರಿದ್ದಾರೆ.

ಈ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ 2024ರ ಜೂನ್ 18 ಮತ್ತು 2025ರ ಜನವರಿ 1ರಂದು ಮಹಿಳೆ ಹಲ್ಲೆ ಕುರಿತು ದೂರು ನೀಡಿದ್ದರು. ಜೂನ್ 15ರಂದು ಬಿತ್ತನೆ ವೇಳೆ ಹಾಗೂ ಡಿಸೆಂಬರ್ 19ರಂದು ಕಳೆ ತೆಗೆಯುವ ಸಂದರ್ಭ ಸಹ ಹಲ್ಲೆ ನಡೆದಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ, “4 ಎಕರೆ 19 ಗುಂಟೆ ಜಮೀನಿಗೆ ಸಂಬಂಧಿಸಿದಂತೆ ತಕರಾರು ನಡೆಯುತ್ತಿದೆ. ಮಹಿಳೆಯ ಮೇಲೆ ಹಲ್ಲೆ ಪ್ರಕರಣದ ಬಗ್ಗೆ ಪರಿಶೀಲನೆ ನಡೆಸಲಾಗುವುದು,” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಹೆಲಿಕಾಪ್ಟ‌ರ್ ದುರಂತದಲ್ಲಿ ಅಥಣಿ ಮೂಲದ ಸಿಸಿಬಿ ಇನ್ಸ್‌ಪೆಕ್ಟರ್‌ ಸೇರಿ ಆರು ಸಾವು

ಚಾ‌ರ್ ಧಾಮ್ ಯಾತ್ರೆಗೆ ತೆರಳಿದ್ದ ಬೆಂಗಳೂರಿನ ಸಿಸಿಬಿ ಇನ್ಸ್‌ಪೆಕ್ಟ‌ರ್ ಸೇರಿದಂತೆ ಆರು...

ಬೆಳಗಾವಿ | ಶಾಲೆಗೆ ಬಾರದ ಮಕ್ಕಳನ್ನು ಕರೆತರಲು ವಿದ್ಯಾರ್ಥಿಗಳಿಂದ ಜಾಗೃತಿ ಜಾಥಾ

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಾಪೂರ ಗ್ರಾಮದ ಶಂಕರಪ್ಪ ಈರಪ್ಪ ಆದರಗಿ...

ಬೆಳಗಾವಿ | ಮಾಜಿ ಸಚಿವ ಶಿವಾನಂದ ಕೌಜಲಗಿ ನಿಧನ

ಬೆಳಗಾವಿ ಜಿಲ್ಲೆಯ ಹಿರಿಯ ಮುತ್ಸದ್ದಿ ರಾಜಕಾರಣಿ, ಮಾಜಿ ಲೋಕೋಪಯೋಗಿ ಸಚಿವ ಹಾಗೂ...

ಬೆಳಗಾವಿ ಚಳಿಗಾಲದ ಅಧಿವೇಶನ ದಿನಾಂಕ ಬದಲಾವಣೆ

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನದ ದಿನಾಂಕವನ್ನು...