ಬೆಳಗಾವಿ | ಹಾಡಹಗಲೇ ಗ್ರಾಮದಲ್ಲಿ ಚಿರತೆ ರಾಜಾರೋಷ ಓಡಾಟ!

Date:

ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನ ಗೋಲಿಹಳ್ಳಿ ಅರಣ್ಯ ವ್ಯಾಪ್ತಿಗೆ ಒಳಪಡುವ ಗೋಲಿಹಳ್ಳಿ ಹೊಸಟ್ಟಿ ಗ್ರಾಮದಲ್ಲಿ ಹಾಡಹಗಲೇ ಚಿರತೆ ಓಡಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಆತಂಕ ಸೃಷ್ಟಿಸಿದೆ.

- Advertisement -

ಪಶ್ಚಿಮ ಘಟ್ಟದ ಅಂಚಿಗೆ ಹೊಂದಿಕೊಂಡಿರುವ ಈ ಭಾಗದಲ್ಲಿ ಇತ್ತೀಚಿನ ದಿನಗಳಲ್ಲಿ ಕಾಡುಪ್ರಾಣಿಗಳ ಉಪಟಳ ಹೆಚ್ಚಾಗುತ್ತಿದೆ. ಗ್ರಾಮ ರಸ್ತೆಗಳು ಹಾಗೂ ಜನವಸತಿ ಪ್ರದೇಶಗಳಲ್ಲಿ ಚಿರತೆ ಕಾಣಿಸಿಕೊಳ್ಳುತ್ತಿರುವುದರಿಂದ ರೈತರು, ಕೂಲಿ ಕಾರ್ಮಿಕರು ಕೃಷಿ ಜಮೀನುಗಳಿಗೆ ತೆರಳಲು ಹಿಂದೇಟು ಹಾಕುತ್ತಿದ್ದಾರೆ. ಜಾನುವಾರುಗಳ ಸುರಕ್ಷತೆಯೂ ಆತಂಕಕ್ಕೆ ಒಳಗಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

ಶಾಲಾ ಮಕ್ಕಳು ಹಾಗೂ ವೃದ್ಧರು ಮನೆಯಿಂದ ಹೊರಬರಲು ಭಯಪಡುವಂತಾಗಿದ್ದು, ಗ್ರಾಮದಲ್ಲಿ ಭೀತಿಯ ವಾತಾವರಣ ನಿರ್ಮಾಣವಾಗಿದೆ.

ಆದರೆ ಚಿರತೆ ಗ್ರಾಮದಲ್ಲಿ ರಾಜಾರೋಷವಾಗಿ ಓಡಾಡುತ್ತಿದ್ದರೂ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೂಡಲೇ ಬೋನು ಇರಿಸಲು ಆಗ್ರಹ

ಅರಣ್ಯ ಇಲಾಖೆ ಕೂಡಲೇ ಎಚ್ಚೆತ್ತುಕೊಂಡು ಗ್ರಾಮದಲ್ಲಿ ಬೋನು ಇರಿಸಿ ಚಿರತೆಯನ್ನು ಸೆರೆಹಿಡಿದು ಸುರಕ್ಷಿತವಾಗಿ ದಟ್ಟ ಅರಣ್ಯಕ್ಕೆ ಸ್ಥಳಾಂತರಿಸಬೇಕು ಎಂದು ಕರ್ನಾಟಕ ರಾಜ್ಯ ಗಡಿನಾಡು ಹಿತರಕ್ಷಣಾ ವೇದಿಕೆ ಅಧ್ಯಕ್ಷ ಬಸವರಾಜ ಭಂಗಿ ಆಗ್ರಹಿಸಿದ್ದಾರೆ.

ಚಿರತೆ ಸೆರೆಹಿಡಿಯುವಲ್ಲಿ ಅಧಿಕಾರಿಗಳು ವಿಳಂಬ ಮಾಡಿದರೆ ಗ್ರಾಮಸ್ಥರೊಂದಿಗೆ ಸೇರಿ ಅರಣ್ಯ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ: 10ರಿಂದ 15 ಲಕ್ಷ ರೂ. ಆಸ್ತಿ ಹಾನಿ

ವಿದ್ಯುತ್‌ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ ಹೊತ್ತಿಕೊಂಡು, ಮನೆಯಲ್ಲಿದ್ದ ಬೆಲೆಬಾಳುವ ವಸ್ತುಗಳು...

ಬೆಳಗಾವಿ | ಬಸವರಾಜ ಕಟ್ಟಿಮನಿ ಬದುಕು-ಬರಹ ಮಲಾಮರಡಿಗೆ ಅಸ್ಮಿತೆ: ಡಾ. ಗುರುಪಾದ ಮರೇಗುದ್ದಿ

ಕುವೆಂಪು ಅವರಿಂದ ಕುಪ್ಪಳಿ, ಬೇಂದ್ರೆ ಅವರಿಂದ ಧಾರವಾಡ ಹೆಸರುವಾಸಿಯಾದಂತೆ, ಬಸವರಾಜ ಕಟ್ಟಿಮನಿಯವರಿಂಧ...