ಬೆಳಗಾವಿ | ಚಿರತೆ ಪ್ರತ್ಯಕ್ಷ ? : ವೈರಲ್ ಸುದ್ದಿಗೆ ಅರಣ್ಯ ಇಲಾಖೆ ಸ್ಪಷ್ಟನೆ

Date:

ಕಳೆದ ಕೆಲ ದಿನಗಳ ಹಿಂದೆಯಷ್ಟೇ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿಗೆ ಹೊಂದಿಕೊಂಡಿರುವ ಬಾಗಲಕೋಟೆ ಜಿಲ್ಲೆಯ ಜಮಖಂಡಿ ಭಾಗದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದ ಘಟನೆ ಜನರಲ್ಲಿ ಆತಂಕ ಮೂಡಿಸಿತ್ತು. ಆ ಘಟನೆ ಇನ್ನೂ ಜನಮಾನಸದಿಂದ ಮರೆಯಾಗುವ ಮುನ್ನವೇ ಇದೀಗ ಅಥಣಿ ತಾಲೂಕಿನ ನಂದಗಾಂವ ಗ್ರಾಮದಲ್ಲಿ ಚಿರತೆ ಕಾಣಿಸಿಕೊಂಡಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು, ಗ್ರಾಮಸ್ಥರಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ.

- Advertisement -

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸಂದೇಶದ ಪ್ರಕಾರ, ನಂದಗಾಂವ ಗ್ರಾಮದ ರಸ್ತೆಯಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಗ್ರಾಮದ ನಿವಾಸಿ ಪಸಪ್ಪ ಪಡಸಲಿ ಅವರಿಗೆ ಸೇರಿದ ಆಡಿನ ಮರಿಯನ್ನು ಕೊಂದಿದೆ ಎಂದು ಹೇಳಲಾಗಿದೆ. ಈ ಸುದ್ದಿ ಕ್ಷಣಾರ್ಧದಲ್ಲೇ ವಿವಿಧ ವಾಟ್ಸ್‌ಆಪ್ ಗುಂಪುಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡಿದ್ದು, ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಕುರಿತು ಅಥಣಿ ವಲಯದ ಅರಣ್ಯ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಿದಾಗ, ಸದ್ಯಕ್ಕೆ ವೈರಲ್ ಆಗಿರುವ ಫೋಟೋ ಹಾಗೂ ಸ್ಥಳದ ಮಾಹಿತಿಗೆ ಯಾವುದೇ ಅಧಿಕೃತ ದೃಢೀಕರಣ ದೊರೆತಿಲ್ಲ ಎಂದು ತಿಳಿಸಿದ್ದಾರೆ.

ಪ್ರಾಥಮಿಕ ಮಾಹಿತಿಯ ಆಧಾರದ ಮೇಲೆ ಅರಣ್ಯ ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದು, ಪ್ರಾಣಿಯ ಕಾಲಿನ ಹೆಜ್ಜೆ ಗುರುತು ಸೇರಿದಂತೆ ಅಗತ್ಯ ಸಾಕ್ಷ್ಯಗಳನ್ನು ಪರಿಶೀಲಿಸಲಾಗುವುದು. ಚಿರತೆಯ ಓಡಾಟದ ಅನುಮಾನ ದೃಢಪಟ್ಟಲ್ಲಿ ಕ್ಯಾಮೆರಾ ಟ್ರ್ಯಾಪ್ ಅಳವಡಿಸಿ ನಿಗಾ ವಹಿಸುವುದರ ಜೊತೆಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಧಿಕೃತ ಮಾಹಿತಿ ಹೊರಬರುವವರೆಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಪರಿಶೀಲಿಸದ ಸಂದೇಶಗಳನ್ನು ನಂಬಬಾರದು ಹಾಗೂ ಸುಳ್ಳು ವದಂತಿಗಳನ್ನು ಹರಡಬಾರದು ಎಂದು ಅರಣ್ಯ ಇಲಾಖೆ ಸಾರ್ವಜನಿಕರಿಗೆ ಮನವಿ ಮಾಡಿದೆ.

ಪ್ರಾಥಮಿಕ ಮಾಹಿತಿಯ ಆಧಾರದ ಮೇಲೆ ಅರಣ್ಯ ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದು, ಪ್ರಾಣಿಯ ಕಾಲಿನ ಹೆಜ್ಜೆ ಗುರುತು ಸೇರಿದಂತೆ ಅಗತ್ಯ ಸಾಕ್ಷ್ಯಗಳನ್ನು ಪರಿಶೀಲಿಸಲಾಗುವುದು. ಚಿರತೆಯ ಓಡಾಟದ ಅನುಮಾನ ದೃಢಪಟ್ಟಲ್ಲಿ ಕ್ಯಾಮೆರಾ ಟ್ರ್ಯಾಪ್ ಅಳವಡಿಸಿ ನಿಗಾ ವಹಿಸುವುದರ ಜೊತೆಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಧಿಕೃತ ಮಾಹಿತಿ ಹೊರಬರುವವರೆಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಪರಿಶೀಲಿಸದ ಸಂದೇಶಗಳನ್ನು ನಂಬಬಾರದು ಹಾಗೂ ಸುಳ್ಳು ವದಂತಿಗಳನ್ನು ಹರಡಬಾರದು ಎಂದು ಅರಣ್ಯ ಇಲಾಖೆ ಸಾರ್ವಜನಿಕರಿಗೆ ಮನವಿ ಮಾಡಿದೆ.

ಗ್ರಾಮಸ್ಥರು ಸಹ ಅನಗತ್ಯ ಆತಂಕಕ್ಕೆ ಒಳಗಾಗದೆ, ಯಾವುದೇ ಅನುಮಾನಾಸ್ಪದ ಪ್ರಾಣಿ ಕಂಡುಬಂದಲ್ಲಿ ತಕ್ಷಣ ಅರಣ್ಯ ಇಲಾಖೆ ಅಥವಾ ಸ್ಥಳೀಯ ಪೊಲೀಸ್‌ ಇಲಾಖೆಗೆ ಮಾಹಿತಿ ನೀಡುವಂತೆ ಅಧಿಕಾರಿಗಳು ಸಲಹೆ ನೀಡಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹವಾಮಾನ ವರದಿ | ಬೆಂಗಳೂರು ಸೇರಿ ಕರ್ನಾಟಕದ ಹಲವೆಡೆ ಅ.22ರವರೆಗೆ ಮಳೆ

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆ ಮುಂದುವರಿಯುವ...

ಬೀಳಗಿ | ಬೆಳೆ ಉಳಿಸಲು ಘಟಪ್ರಭಾ ಎಡದಂಡೆ ಕಾಲುವೆಯ ಕೊನೆಯವರೆಗೆ ನೀರು ಹರಿಸಿ: ಭಾರತೀಯ ಕಿಸಾನ್‌ ಸಂಘ ಆಗ್ರಹ

ಘಟಪ್ರಭಾ ಮತ್ತು ಕೃಷ್ಣಾ ನದಿಗಳಲ್ಲಿ ಸಾಕಷ್ಟು ನೀರಿದ್ದರೂ ಘಟಪ್ರಭಾ ಎಡದಂಡೆ ಕಾಲುವೆಯ...

ಈ ದಿನ ಸಂಪಾದಕೀಯ | ಅಂಕಿತಾ ಹತ್ಯೆ ಶಂಕಿತರಿಗೆ ಸಾಂವಿಧಾನಿಕ ಹುದ್ದೆ ಸರಿಯೇ?

ಅಂಕಿತಾ ಭಂಡಾರಿ ಕೊಲೆ ಪ್ರಕರಣದಲ್ಲಿದ್ದ ವಿಐಪಿ ದುಶ್ಯಂತ್‌ ಅವರ ಮೇಲಿನ...

‘ಮೋದಿಯನ್ನು ದೇವರನ್ನಾಗಿಸುವ ಯತ್ನ’: ಬಿಹಾರ ಸಿಎಂ ಹೇಳಿಕೆಗೆ ಪ್ರಶಾಂತ್ ಕಿಶೋರ್ ಕಿಡಿ

ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀರಾಮನಿಗೂ ಮನೆ ಒದಗಿಸಿದರು ಎಂಬ ಬಿಹಾರ...