ಬೆಳಗಾವಿ | ಸಾಮಾಜಿಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಂಶೋಧನೆ ದಿಕ್ಕೂಚಿಯಾಗಲಿ: ಉಮೇಶ ಬಾಳಿ

Date:

ಬಡತನ, ನಿರುದ್ಯೋಗ, ಲಿಂಗ ತಾರತಮ್ಯ, ಸಾಮಾಜಿಕ ಆರ್ಥಿಕ ಅಸಮಾನತೆ ಸೇರಿದಂತೆ ಭಾರತದಲ್ಲಿನ ಪ್ರಚಲಿತ ಸಾಮಾಜಿಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಂಶೋಧನೆಗಳು ಹೊಸ ದಿಕ್ಕು ತೋರಿಸಬೇಕು ಎಂದು ಬೆಳಗಾವಿ ಜಿಲ್ಲೆಯ ಸವದತ್ತಿ ನಗರದ ಕೆಎಲ್‌ಇ ಸಂಸ್ಥೆಯ ಎಸ್‌ವಿಎಸ್ ಬೆಳ್ಳುಬ್ಬಿ ಮಹಾವಿದ್ಯಾಲಯದ ಸ್ಥಾನಿಕ ಆಡಳಿತ ಮಂಡಳಿ ಸದಸ್ಯ ಉಮೇಶ ಬಾಳಿ ಹೇಳಿದರು.

- Advertisement -

ಮಹಾವಿದ್ಯಾಲಯದ ಐಕ್ಯೂಎಸಿ ಘಟಕದ ವತಿಯಿಂದ ‘ಭಾರತದ ಸಮಕಾಲೀನ ಸಮಸ್ಯೆಗಳು: ಸಾಹಿತ್ಯ, ಸಮಾಜ ವಿಜ್ಞಾನ ಮತ್ತು ವಾಣಿಜ್ಯ ಶಾಸ್ತ್ರದಲ್ಲಿ ಸಂಶೋಧನಾ ದೃಷ್ಟಿಕೋನ’ ವಿಷಯದ ಕುರಿತು ಆಯೋಜಿಸಿದ್ದ ಒಂದು ದಿನದ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸಂಶೋಧನೆಗಳು ವಾಸ್ತವದ ತಳಹದಿಯ ಮೇಲೆ ನಡೆಯಬೇಕು. ಅವುಗಳ ಸಾಧಕ-ಬಾಧಕಗಳನ್ನು ಪ್ರಜಾತಾಂತ್ರಿಕ ನೆಲೆಯಲ್ಲಿ ವಿಶ್ಲೇಷಿಸಿ, ಸಮಾಜ ಹಾಗೂ ಆಡಳಿತ ನಡೆಸುವ ಸರ್ಕಾರಕ್ಕೆ ಹೊಸ ಸಂದೇಶ ನೀಡುವಂತಿರಬೇಕು ಎಂದರು.

ಅತಿಥಿ ಡಾ. ಕೆ. ಸೆಂಥಿಲ್ ಕುಮಾರ್ ಮಾತನಾಡಿ, ಶಿಕ್ಷಕರು ಮತ್ತು ಸಂಶೋಧನಾ ವಿದ್ಯಾರ್ಥಿಗಳು ಸಮಾಜಕ್ಕೆ ಉಪಯುಕ್ತವಾಗುವ ಹೊಸ ಹಾಗೂ ಅರ್ಥಪೂರ್ಣ ಸಂಶೋಧನೆಗಳನ್ನು ಕೈಗೊಳ್ಳಬೇಕು. ಶೈಕ್ಷಣಿಕ ವಾತಾವರಣವನ್ನು ಬಲಪಡಿಸುವಲ್ಲಿ ಸಂಶೋಧನೆಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದರು.

ಸಂಪನ್ಮೂಲ ವ್ಯಕ್ತಿ ಪ್ರವೀಣ ಹೂಗಾರ ಮಾತನಾಡಿ, ಸಂಶೋಧನೆ ಸಾಮಾನ್ಯ ಚಟುವಟಿಕೆಗಳಿಗಿಂತ ಭಿನ್ನವಾಗಿದ್ದು, ನಿರ್ದಿಷ್ಟ ಉದ್ದೇಶ, ಕ್ರಮಬದ್ಧ ವಿಮರ್ಶಾತ್ಮಕ ಚಿಂತನೆ ಹಾಗೂ ಹೊಸ ಜ್ಞಾನದ ಅನ್ವೇಷಣೆಯನ್ನು ಆಧರಿಸಿರುತ್ತದೆ. ಈಗಾಗಲೇ ತಿಳಿದಿರುವ ವಿಷಯಗಳಿಗೆ ಮಾತ್ರ ಸಂಶೋಧಕರು ತಮ್ಮ ಚಿಂತನೆಯನ್ನು ಸೀಮಿತಗೊಳಿಸಬಾರದು ಎಂದು ಹೇಳಿದರು.

ಸಮ್ಮೇಳನದ ಅಂಗವಾಗಿ ಸಂಶೋಧನಾ ಲೇಖನಗಳ ಜರ್ನಲ್ ಬಿಡುಗಡೆಗೊಳಿಸಲಾಯಿತು. ದೇಶ ಹಾಗೂ ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳು ಮತ್ತು ಪದವಿ ಕಾಲೇಜುಗಳಿಂದ ಆಗಮಿಸಿದ್ದ ಪ್ರಾಧ್ಯಾಪಕರು ಹಾಗೂ ಸಂಶೋಧನಾ ವಿದ್ಯಾರ್ಥಿಗಳು ಪ್ರಬಂಧ ಮಂಡಿಸಿದರು. ಒಟ್ಟು 186 ಮಂದಿ ಪ್ರಬಂಧ ಮಂಡಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಚಾರ್ಯ ಪ್ರೊ. ಎನ್‌.ಆ‌ರ್. ಸವತಿಕರ ವಹಿಸಿದ್ದರು. ಐಶ್ವರ್ಯ ಗುಡೆನವರ ಮತ್ತು ಸಂಗಡಿಗರು ಪ್ರಾರ್ಥಿಸಿದರು. ವಿ.ಎಸ್. ಮೀಶಿ ಸ್ವಾಗತಿಸಿದರು. ಡಾ. ಎನ್.ಎ. ಕೌಜಗೇರಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಎ.ಎ. ಹಳ್ಳೂರ ನಿರೂಪಿಸಿದರು. ಎಸ್.ಎಂ. ಹೊಳಿ ವಂದಿಸಿದರು.

ಕೆ. ರಾಮರೆಡ್ಡಿ, ಡಾ. ಎ.ಎಫ್. ಬದಾಮಿ, ಎಸ್‌.ಜಿ. ಶ್ರೀನಿವಾಸ, ಶಿವಾನಂದ ಹಂಚಿನಾಳ, ಚಂದ್ರು ತಳವಾರ, ಸಾಗರ ಪಾಟೀಲ್‌, ಡಾ. ಜಿ.ಎಸ್. ಮಾನೆ, ಎಂ.ಸಿ. ಹಾದಿಮನಿ ಸೇರಿದಂತೆ ವಿವಿಧ ವಿಭಾಗಗಳ ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಬಸ್‌ನಿಂದ ಇಳಿಯಲು ದಾರಿ ಬಿಡಲಿಲ್ಲವೆಂದು ಮಹಿಳೆ ಮೇಲೆ ಹಲ್ಲೆ

ಬಸ್‌ನಿಂದ ಇಳಿಯಲು ದಾರಿ ಬಿಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬ ಮಹಿಳೆಯ...

ಬೆಳಗಾವಿ | ಮಾಂಜಾ ದಾರಕ್ಕೆ ಸಿಲುಕಿ ಬೈಕ್ ಸವಾರ ಸಾವು

ಗಾಳಿಪಟದ ಮಾಂಜಾ ದಾರ ಬೈಕ್‌ ಚಲಾಯಿಸುತ್ತಿದ್ದ ಯುವಕನ ಕೊರಳಿಗೆ ಸಿಲುಕಿ ಸ್ಥಳದಲ್ಲೇ...

ಬೆಳಗಾವಿ | ಇನ್‌ಸ್ಟಾಗ್ರಾಂ ಹನಿಟ್ರ್ಯಾಪ್ ಮೂಲಕ ಯುವಕನ ಕೊಲೆ: ನಾಲ್ವರ ಬಂಧನ

ಕಾಣೆಯಾಗಿದ್ದ ಯುವಕನೊಬ್ಬನ ಕೊಲೆ ಪ್ರಕರಣಕ್ಕೆ ಭಾರೀ ತಿರುವು ಸಿಕ್ಕಿದ್ದು, ಹಳೆ ಹಣಕಾಸಿನ...