ಬೆಳಗಾವಿ | ಸಕ್ಕರೆ ರಫ್ತು ನಿಷೇಧ ಕೈಬಿಡಿ: ಸಚಿವ ಶಿವಾನಂದ ಪಾಟೀಲ ಆಗ್ರಹ

Date:


ಸಕ್ಕರೆ ಕಾರ್ಖಾನೆಗಳ ಆರ್ಥಿಕ ಸ್ಥಿತಿಗತಿಯ ಬೆಳಕುನಲ್ಲಿ, ಕಬ್ಬು ಬೆಳೆಗಾರರ ಬಾಕಿ ಬಿಲ್ಲು ಪಾವತಿಗೆ ಮಾರ್ಗ ಕಲ್ಪಿಸಲು ಸಕ್ಕರೆ ರಫ್ತಿನ ಮೇಲೆ ಇರುವ ನಿಷೇಧವನ್ನು ಕೇಂದ್ರ ಸರ್ಕಾರ ತಕ್ಷಣವೇ ಕೈಬಿಡಬೇಕು ಎಂದು ಸಕ್ಕರೆ ಅಭಿವೃದ್ಧಿ ಸಚಿವ ಶಿವಾನಂದ ಪಾಟೀಲ ಬೆಳಗಾವಿ ನಗರದಲ್ಲಿ ಸುದ್ದಿಗಾರರಿಗೆ ಹೇಳಿದರು.

- Advertisement -

ಶನಿವಾರ ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಈ ಬಗ್ಗೆ ಹೇಳಿ, “ಮೂರು ವರ್ಷಗಳಿಂದ ಸಕ್ಕರೆ ರಫ್ತಿಗೆ ನಿಷೇಧವಿದೆ. ಕಾರ್ಖಾನೆಗಳ ಬಳಿ ಪ್ರತ್ಯೇಕ ಬಂಡವಾಳ ಇಲ್ಲ. ರಫ್ತು ಅನುಮತಿ ಸಿಕ್ಕರೆ ಉತ್ತಮ ದರ ಸಿಗುತ್ತೆ. ಆಗ ಕಾರ್ಖಾನೆಗಳು ರೈತರ ಬಾಕಿ ಬಿಲ್ಲುಗಳನ್ನು ಪಾವತಿಸಬಹುದು,” ಎಂದು ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಇನ್ನೊಂದೆಡೆ, ಕೃಷಿ ಉತ್ಪನ್ನಗಳ ನೈಜ ದರ ಕುಸಿತದ ಬಗ್ಗೆ ಕೇಂದ್ರ ಸರ್ಕಾರದ ನೀತಿಯನ್ನು ಪ್ರಶ್ನಿಸಿದ ಸಚಿವರು, “ನಮ್ಮ ದೇಶದಲ್ಲೇ ಪರ್ಯಾಯವಾಗಿ ಹೆಚ್ಚಿನ ಪ್ರಮಾಣದಲ್ಲಿ ತೊಗರಿ ಉತ್ಪತ್ತಿಯಾಗುತ್ತಿದೆ. ಆದರೂ ಕೇಂದ್ರ ತೊಗರಿ ಆಮದಿಗೆ ಅನುಮತಿ ನೀಡಿದ್ದು, ಇದರ ಪರಿಣಾಮವಾಗಿ ದರ ಕೆಜಿಗೆ ₹90ಕ್ಕೆ ಇಳಿದಿದೆ.” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದೇ ರೀತಿ ಈರುಳ್ಳಿ ಹಾಗೂ ಟೊಮೆಟೊ ಬೆಲೆಗಳು ಕುಸಿತಗೊಂಡು ರೈತರು ಬೀದಿಗೆ ಹೊರಡುವಂತಹ ಸ್ಥಿತಿ ಎದುರಾಗಿದ್ದು, ಇದರೆಲ್ಲದರ ಬಗ್ಗೆ ಕೇಂದ್ರ ಗಂಭೀರ ಚಿಂತನೆ ನಡೆಸಬೇಕು ಎಂದು ಸಚಿವರು ಒತ್ತಾಯಿಸಿದರು.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಶಿವಾಜಿ ಕಾಗಣಿಕರ ಅವರ ಎರಡು ಕೃತಿಗಳು ಲೋಕಾರ್ಪಣೆ

ಖ್ಯಾತ ಪರಿಸರವಾದಿ ಹಾಗೂ ಸಾಮಾಜಿಕ ಕಾರ್ಯಕರ್ತ ಡಾ. ಶಿವಾಜಿ ಕಾಗಣಿಕರ ಅವರ...

ಬೆಳಗಾವಿ | ಅಲ್ಯೂಮಿನಿಯಂ ತಂತಿ ಕಳ್ಳರ ಬಂಧನ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದ ಘಟಗಿ ಬಸವೇಶ್ವರ ನಗರದಲ್ಲಿ...

ಬೆಳಗಾವಿ | ಟ್ರ್ಯಾಕ್ಟರ್‌ ಕಳ್ಳತನ ಪ್ರಕರಣದಲ್ಲಿ ಮೂವರು ಬಂಧನ

ಮನೆಯ ಮುಂದೆ ನಿಲ್ಲಿಸಿದ್ದ ಮಹೀಂದ್ರಾ ಅರ್ಜುನ್ ಟ್ರ್ಯಾಕ್ಟ‌ರ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ...

ಬೆಳಗಾವಿ | ಬೈಲಹೊಂಗಲದಲ್ಲಿ ಪತ್ನಿ ಕೊಲೆ: ಪತಿ ಬಂಧನ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಯನ್ನು ಕೊಲೆ ಮಾಡಿದ ಆರೋಪದ ಮೇಲೆ ಪತಿಯನ್ನು...