ಬೆಳಗಾವಿ : ಲಿಂಗಾಯತರು ಧರ್ಮ ಕಾಲಂನಲ್ಲಿ ಲಿಂಗಾಯತ ಎಂದು ಬರೆಯಿಸಿ : ಬಸವರಾಜ ರೊಟ್ಟಿ

Date:

ಸೆಪ್ಟೆಂಬರ್ 22ರಿಂದ ಆರಂಭವಾಗಲಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಲಿಂಗಾಯತರು ಧರ್ಮದ ಕಾಲಂನಲ್ಲಿ “ಲಿಂಗಾಯತ” ಹಾಗೂ ಜಾತಿ ಕಾಲಂನಲ್ಲಿ ತಮ್ಮ ಒಳಪಂಗಡದ ಹೆಸರನ್ನು ಬರೆಯಿಸಿಕೊಳ್ಳಬೇಕು ಎಂದು ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ರೊಟ್ಟಿ ಕರೆ ನೀಡಿದರು.

- Advertisement -

ಬೆಳಗಾವಿ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಈ ಸಮೀಕ್ಷೆ ಹೆಸರಿನಲ್ಲಿ ಜಾತಿಗಣತಿ ನಡೆಯುತ್ತಿದೆ. ಹೀಗಾಗಿ ಧರ್ಮದ ಕಾಲಂ 8ರ ಕ್ರಮಾಂಕ 11ರ ‘ಇತರೆ’ ವಿಭಾಗದಲ್ಲಿ ‘ಲಿಂಗಾಯತ’ ಎಂದು ನಮೂದಿಸಬೇಕು. ಈ ಕುರಿತು ಲಿಂಗಾಯತ ಮಠಾಧೀಶರ ಒಕ್ಕೂಟ, ಜಾಗತಿಕ ಲಿಂಗಾಯತ ಮಹಾಸಭೆ ಮತ್ತು ಎಲ್ಲ ಬಸವಪರ ಸಂಘಟನೆಗಳು ಏಕಮತದಿಂದ ನಿರ್ಧಾರ ತೆಗೆದುಕೊಂಡಿವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಅವರು ಮುಂದುವರಿದು, “ವಿವಿಧ ಒಳಪಂಗಡದವರು ಲಿಂಗಾಯತ ಎಂದು ಬರೆಯಿಸಿದರೂ ಮೀಸಲಾತಿ ಸೌಲಭ್ಯದಲ್ಲಿ ಯಾವುದೇ ತೊಂದರೆ ಬರುವುದಿಲ್ಲ. ಇದಕ್ಕೆ ಸುಪ್ರೀಂ ಕೋರ್ಟ್ ತೀರ್ಪು ಸಹ ಇದೆ. 2018ರ ಮಾರ್ಚ್‌ನಲ್ಲೇ ರಾಜ್ಯ ಸರ್ಕಾರ ಲಿಂಗಾಯತವನ್ನು ಸ್ವತಂತ್ರ ಮತ್ತು ಅಲ್ಪಸಂಖ್ಯಾತ ಧರ್ಮವೆಂದು ಘೋಷಿಸಿ ಕೇಂದ್ರಕ್ಕೆ ವರದಿ ಕಳುಹಿಸಿತ್ತು. ಕೇಂದ್ರದ ಅನುಮೋದನೆ ಬಂದರೆ ಅದು ಜಾರಿಗೆ ಬರುತ್ತದೆ” ಎಂದರು.

ಹಿಂದುಳಿದ ವರ್ಗಗಳ ಆಯೋಗ ಸಿದ್ಧಪಡಿಸಿರುವ ಪಟ್ಟಿಯಲ್ಲಿ ಕೆಲವು ಹಿಂದೂ ಉಪಜಾತಿಗಳನ್ನು ಕ್ರೈಸ್ತ ಪಟ್ಟಿಯಲ್ಲಿ ತೋರಿಸಿರುವುದನ್ನು ಅವರು ಆಕ್ಷೇಪಿಸಿದರು. “ಸರ್ಕಾರ ಇದನ್ನು ಸರಿಪಡಿಸಲಿದೆ ಎಂದು ನಂಬಿದ್ದೇವೆ. ಇಲ್ಲದಿದ್ದರೆ ಹೋರಾಟಕ್ಕೆ ಕೈಹಾಕುತ್ತೇವೆ” ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಅಶೋಕ ಮಳಗಲಿ, ಪ್ರವೀಣ ಚಿಕಲಿ, ಸಿ.ಎಂ. ಬೂದಿಹಾಳ ಇತರರು ಉಪಸ್ಥಿತರಿದ್ದರು.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ದುರ್ಗಾ ದೇವಿ ಮೆರವಣಿಗೆಯಲ್ಲಿ ಭೀಕರ ಅಪಘಾತ: ಮೂವರು ಸಾವು, 10ಕ್ಕೂ ಹೆಚ್ಚು ಜನರಿಗೆ ಗಾಯ

ದುರ್ಗಾ ಮಾತಾ ದೌಡ ದೇವಿ ಮೆರವಣಿಗೆಯಲ್ಲಿ ಸಾಗುತ್ತಿದ್ದ ವಾಹನಕ್ಕೆ ಹಿಂಬದಿಯಿಂದ ಬಂದ...

ಬೆಳಗಾವಿ | ಪ್ರಿಡ್ಜನಲ್ಲಿ ಶಾರ್ಟ್ ಸರ್ಕ್ಯೂಟ್: ಮನೆ ಸುಟ್ಟು ಕರಕಲು, ಮಕ್ಕಳ ಚೀರಾಟ ಕೇಳಿ ಬಂದ ಮನೆ ಮಾಲಕಿ

ಬೆಳಗಾವಿ ನಗರದ ಸಹ್ಯಾದ್ರಿ ನಗರದಲ್ಲಿ ಫ್ರಿಡ್ಜ್‌ನಲ್ಲಿ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್‌ ಉಂಟಾಗಿ...

ಬೆಳಗಾವಿ | ವಿದ್ಯಾರ್ಥಿಗಳು ಬೇಂದ್ರೆ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಿ: ವಿರುಪಾಕ್ಷಪ್ಪ ಮಾಮನಿ

ವಿದ್ಯಾರ್ಥಿಗಳು ಮೊಬೈಲ್‌ನಲ್ಲಿ ಕಾಲಹರಣ ಮಾಡದೆ ಕಾವ್ಯ, ಕಾದಂಬರಿ ಹಾಗೂ ಕಥೆಗಳನ್ನು ಓದುವ...