ಬೆಳಗಾವಿ : ತಂದೆಗೆ ಮಗನಿಂದ ಲಿವರ್ ದಾನ – ಕೆಎಲ್‌ಇ ಆಸ್ಪತ್ರೆಯಲ್ಲಿ ಯಶಸ್ವಿ ಲಿವರ್ ಕಸಿ ಶಸ್ತ್ರಚಿಕಿತ್ಸೆ

Date:

ಲಿವರ್ ವೈಫಲ್ಯದಿಂದ ಬಳಲುತ್ತಿದ್ದ ತಂದೆಗೆ ಮಗನ ಲಿವರ್‌ನ ಭಾಗವನ್ನು ಜೋಡಿಸುವ ಮೂಲಕ ಯಶಸ್ವಿ ಲಿವರ್ ಕಸಿ ಶಸ್ತ್ರಚಿಕಿತ್ಸೆ ನೆರವೇರಿಸುವಲ್ಲಿ ಬೆಳಗಾವಿಯ ಕೆಎಲ್‌ಇ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದ ತಜ್ಞ ವೈದ್ಯರ ತಂಡ ಶ್ಲಾಘನೀಯ ಸಾಧನೆ ದಾಖಲಿಸಿದೆ.

- Advertisement -

ರಾಯಬಾಗ ತಾಲೂಕಿನ ರೈತನೊಬ್ಬ ಲಿವರ್ ವೈಫಲ್ಯದಿಂದ ತೀವ್ರವಾಗಿ ಬಳಲುತ್ತಿದ್ದ ಸಂದರ್ಭ, ಚಿಕಿತ್ಸೆಗಾಗಿ ಲಿವರ್ ಕಸಿ ಶಸ್ತ್ರಚಿಕಿತ್ಸೆ ಅಗತ್ಯವಾಗಿತ್ತು. ಈ ಸಂದರ್ಭದಲ್ಲಿ ಅವರ 26 ವರ್ಷದ ಮಗ ತನ್ನ ಲಿವರ್‌ನ ಭಾಗವನ್ನು ತಂದೆಗೆ ದಾನಮಾಡಿ ಮಾನವೀಯತೆ ಮೆರೆದಿದ್ದಾನೆ. ಈ ದಾನದ ಬೆನ್ನಲ್ಲೇ ತಜ್ಞ ವೈದ್ಯರ ತಂಡ ಯಶಸ್ವಿಯಾಗಿ ಲಿವರ್ ಕಸಿ ಕಾರ್ಯಾಚರಣೆ ನೆರವೇರಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗ್ಯಾಸ್ಟೋಎಂಟ್ರಾಲಾಜಿ ತಜ್ಞ ಡಾ. ಸಂತೋಷ ಹಜಾರೆ, “ಕೊನೆಯ ಹಂತದ ಲಿವರ್ ವೈಫಲ್ಯದಿಂದ ಬಳಲುತ್ತಿದ್ದ ರೋಗಿಗೆ ಅವರ ಪುತ್ರ ಲಿವರ್ ದಾನ ಮಾಡಿದ್ದಾರೆ. ಶಸ್ತ್ರಚಿಕಿತ್ಸೆಯ ನಂತರ ದಾನಿ ಹಾಗೂ ದಾನ ಸ್ವೀಕರಿಸಿದ ರೋಗಿ ಇಬ್ಬರೂ ಸುಸ್ಥಿತಿಯಲ್ಲಿದ್ದು, ದಾನಿದಾರರು 8ನೇ ದಿನಕ್ಕೆ ಆಸ್ಪತ್ರೆಯಿಂದ ಬಿಡುಗಡೆಗೊಳ್ಳುತ್ತಿದ್ದಾರೆ,” ಎಂದು ತಿಳಿಸಿದರು.

ಅತ್ಯಂತ ಸಂಕೀರ್ಣ ಹಾಗೂ ತಾಂತ್ರಿಕ ಶಸ್ತ್ರಚಿಕಿತ್ಸೆಯನ್ನು ಬೆಂಗಳೂರಿನ ಆಸ್ಟರ್ ಆಸ್ಪತ್ರೆಯ ಡಾ. ಸೋನಲ್ ಅಸ್ತಾನಾ, ಡಾ. ವಚನ ಹುಕ್ಕೇರಿ, ಡಾ. ರೋಮೆಲ್ ಎಸ್ ಮತ್ತು ಬೆಳಗಾವಿಯ ಡಾ. ಸುದರ್ಶನ ಚೌಗಲೆ, ಡಾ. ಕಿರಣ್ ಉರಬಿನಹಟ್ಟಿ ನೇತೃತ್ವದ ತಂಡ ಯಶಸ್ವಿಯಾಗಿ ನೆರವೇರಿಸಿದೆ.

ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಪ್ರಭಾಕರ್ ಕೋರೆ ಮಾತನಾಡಿ, “ಕೆಎಲ್‌ಇ ಆಸ್ಪತ್ರೆ ಅತ್ಯಾಧುನಿಕ ವೈದ್ಯಕೀಯ ತಂತ್ರಜ್ಞಾನ, ನುರಿತ ಸಿಬ್ಬಂದಿ ಮತ್ತು ಶ್ರೇಷ್ಟ ಚಿಕಿತ್ಸಾ ಸೌಲಭ್ಯಗಳೊಂದಿಗೆ ಈ ಭಾಗದ ಪ್ರಮುಖ ಅಂಗಾಂಗ ಕಸಿ ಕೇಂದ್ರವಾಗಿ ಹೊರಹೊಮ್ಮಿದೆ. ಕರ್ನಾಟಕ, ಮಹಾರಾಷ್ಟ್ರ, ಗೋವಾ ಸೇರಿದಂತೆ ಇತರ ರಾಜ್ಯಗಳಲ್ಲಿಯೂ ರೋಗಿಗಳು ಇಲ್ಲಿ ಚಿಕಿತ್ಸೆಗೆ ಆಗಮಿಸುತ್ತಿದ್ದಾರೆ,” ಎಂದು ವಿವರಿಸಿದರು.

ಈ ಸುದ್ದಿ ಓದಿದ್ದಿರಾ ? ಬೆಳಗಾವಿ : ಬೆಳಗಾವಿಯಲ್ಲಿ ವಿಮಾನ ಅಪಘಾತ ಅಣಕು ಪ್ರದರ್ಶನ

ಇನ್ನು ವರದಿಯ ಪ್ರಕಾರ, ಸಂಸ್ಥೆಯಲ್ಲಿ ಇದುವರೆಗೆ 101 ಕ್ಕೂ ಹೆಚ್ಚು ಮೂತ್ರಪಿಂಡ, 22 ಲಿವರ್ ಹಾಗೂ 14 ಹೃದಯ ಕಸಿ ಶಸ್ತ್ರಚಿಕಿತ್ಸೆಗಳು ಯಶಸ್ವಿಯಾಗಿ ನೆರವೇರಿವೆ. ಅಸ್ಥಿಮಜ್ಜೆ ಕಸಿಯೂ ನಿರಂತರ ನಡೆಯುತ್ತಿದೆ.

ಸುದ್ದಿಗೋಷ್ಠಿಯಲ್ಲಿ ಡಾ. ಮಾಧವ್ ಪ್ರಭು, ಡಾ. ರಾಜೇಶ್ ಮಾನೆ, ಡಾ. ಬಸವರಾಜ್ ಬಿಜರಗಿ ಮತ್ತಿತರರು ಉಪಸ್ಥಿತರಿದ್ದರು.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಆರೋಪ: ಚನ್ನರಾಜ ಹಟ್ಟಿಹೊಳಿ ಸ್ಪಷ್ಟನೆ

ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪಕ್ಕೆ ವಿಧಾನ ಪರಿಷತ್...

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್: 500ಕ್ಕೆ ಹೆಚ್ಚಿಸಲು ಆಗ್ರಹ

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು...